PM Kisan : ಹೊಸ ವರ್ಷದಲ್ಲಿ 10 ಕೋಟಿ ರೈತರಿಗೆ ಭರ್ಜರಿ ಗಿಫ್ಟ್ : 20 ಸಾವಿರ ಕೋಟಿ ಖಾತೆಗೆ ಜಮಾ!

ಜನವರಿ 1, 2022 ರಂದು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಬಿಡುಗಡೆ ಮಾಡಲಿದ್ದಾರೆ. ಇದರಡಿ 10 ಕೋಟಿಗೂ ಹೆಚ್ಚು ಫಲಾನುಭವಿ ರೈತ ಕುಟುಂಬಗಳಿಗೆ 20 ಸಾವಿರ ಕೋಟಿ ರೂ. ನೀಡಲಿದ್ದಾರೆ.

Written by - Channabasava A Kashinakunti | Last Updated : Dec 30, 2021, 02:15 PM IST
  • ಪ್ರತಿಯೊಬ್ಬ ರೈತರ ಖಾತೆಗೆ 2 ಸಾವಿರ ರೂ.
  • ಜನವರಿ 1 ರಂದು ಉಡುಗೊರೆ ನೀಡಲಿದ್ದಾರೆ ಪ್ರಧಾನಿ ಮೋದಿ
  • ಯೋಜನೆಯ 10ನೇ ಕಂತು ಬಿಡುಗಡೆಯಾಗಲಿದೆ
PM Kisan : ಹೊಸ ವರ್ಷದಲ್ಲಿ 10 ಕೋಟಿ ರೈತರಿಗೆ ಭರ್ಜರಿ ಗಿಫ್ಟ್ : 20 ಸಾವಿರ ಕೋಟಿ ಖಾತೆಗೆ ಜಮಾ! title=

ನವದೆಹಲಿ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kisan) ಯೋಜನೆಯಡಿ 10 ನೇ ಕಂತು ಆರ್ಥಿಕ ಪ್ರಯೋಜನಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜನವರಿ 1, 2022 ರಂದು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಬಿಡುಗಡೆ ಮಾಡಲಿದ್ದಾರೆ. ಇದರಡಿ 10 ಕೋಟಿಗೂ ಹೆಚ್ಚು ಫಲಾನುಭವಿ ರೈತ ಕುಟುಂಬಗಳಿಗೆ 20 ಸಾವಿರ ಕೋಟಿ ರೂ. ನೀಡಲಿದ್ದಾರೆ.

ಪ್ರತಿಯೊಬ್ಬ ರೈತರ ಖಾತೆಗೆ 2 ಸಾವಿರ ರೂ. 

PM-ಕಿಸಾನ್ ಯೋಜನೆ(PM Kisan Samman Nidhi Yojana)ಯಡಿಯಲ್ಲಿ, ಅರ್ಹ ಫಲಾನುಭವಿ ರೈತ ಕುಟುಂಬಗಳಿಗೆ ವರ್ಷಕ್ಕೆ 6000 ರೂಪಾಯಿಗಳ ಆರ್ಥಿಕ ಪ್ರಯೋಜನವನ್ನು ಒದಗಿಸಲಾಗುತ್ತದೆ, 4 ತಿಂಗಳ ಮಧ್ಯಂತರದಲ್ಲಿ ತಲಾ 2000 ರೂಪಾಯಿಗಳ ಮೂರು ಸಮಾನ ಕಂತುಗಳಲ್ಲಿ ಪಾವತಿಸಲಾಗುತ್ತದೆ.

ಇದನ್ನೂ ಓದಿ : Cooking Oil : 2022 ರಲ್ಲಿ ಭಾರಿ ಇಳಿಕೆಯಾಗಲಿದೆ ಅಡುಗೆ ಎಣ್ಣೆ ಬೆಲೆ!

ನೇರವಾಗಿ ರೈತರ ಖಾತೆಗೆ ಹಣ ಜಮಾ

ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ(Bank Account) ನೇರವಾಗಿ ಕಳುಹಿಸಲಾಗುತ್ತದೆ. ಈ ಯೋಜನೆಯಲ್ಲಿ ಇದುವರೆಗೆ 1.6 ಲಕ್ಷ ಕೋಟಿ ರೂ.ಗೂ ಹೆಚ್ಚು ರೈತ ಕುಟುಂಬಗಳಿಗೆ ನೀಡಲಾಗಿದೆ.

ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಪಿಎಂ ಮೋದಿ

ಕಾರ್ಯಕ್ರಮದ ಸಂದರ್ಭದಲ್ಲಿ, ಪ್ರಧಾನಿಯವರು ಸುಮಾರು 351 ರೈತ ಉತ್ಪಾದಕ ಸಂಸ್ಥೆಗಳಿಗೆ (FPO) 14 ಕೋಟಿ ರೂ.ಗೂ ಹೆಚ್ಚು ಇಕ್ವಿಟಿ ಅನುದಾನವನ್ನು ಬಿಡುಗಡೆ ಮಾಡುತ್ತಾರೆ, ಇದು 1.24 ಲಕ್ಷಕ್ಕೂ ಹೆಚ್ಚು ರೈತರಿಗೆ ಪ್ರಯೋಜನವನ್ನು ನೀಡುತ್ತದೆ. ಕಾರ್ಯಕ್ರಮ ಈ ಸಮಯದಲ್ಲಿ, ಪ್ರಧಾನಮಂತ್ರಿಯವರು FPO ನೊಂದಿಗೆ ಸಂವಾದ ನಡೆಸಲಿದ್ದಾರೆ ಮತ್ತು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಸಚಿವರು ಉಪಸ್ಥಿತರಿರುವರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News