PM Kisan Big Update: ಈ ರೈತರಿಗೆ ಪಿಎಂ ಕಿಸಾನ್ 12ನೇ ಕಂತಿನ ನಯಾ ಪೈಸೆಯೂ ಸಿಗಲ್ಲ

PM Kisan Update: ಪಿಎಂ ಕಿಸಾನ್  12 ನೇ ಕಂತಿಗೂ ಮೊದಲು ರೈತರಿಗೆ ಪ್ರಮುಖ ಮಾಹಿತಿ ಇದೆ. ದೇಶದಾದ್ಯಂತ 10 ಕೋಟಿಗೂ ಹೆಚ್ಚು ರೈತರು ಅಕ್ಟೋಬರ್‌ನಲ್ಲಿ ಪಿಎಂ ಕಿಸಾನ್‌ನ ಮುಂದಿನ ಕಂತನ್ನು ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಆದರೆ ಅದಕ್ಕೂ ಮುನ್ನ ಇ-ಕೆವೈಸಿ ಮಾಡುವುದು ಅತ್ಯಗತ್ಯವಾಗಿದೆ.

Written by - Yashaswini V | Last Updated : Oct 6, 2022, 03:59 PM IST
  • ರೈತರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಮೋದಿ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಪ್ರಾರಂಭಿಸಿದೆ .
  • ಈ ಯೋಜನೆಯಡಿ ಅರ್ಹ ರೈತರಿಗೆ ವಾರ್ಷಿಕ ಆರು ಸಾವಿರ ರೂಪಾಯಿ ಸಹಾಯಧನವನ್ನು ನೀಡಲಾಗುತ್ತದೆ.
  • ಈ ಮೊತ್ತವನ್ನು ಮೂರು ಕಂತುಗಳಲ್ಲಿ ತಲಾ 2,000 ರೂ.ಗಳನ್ನು ನೇರವಾಗಿ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ.
PM Kisan Big Update: ಈ ರೈತರಿಗೆ ಪಿಎಂ ಕಿಸಾನ್ 12ನೇ ಕಂತಿನ ನಯಾ ಪೈಸೆಯೂ ಸಿಗಲ್ಲ  title=
PM Kisan

ಪಿಎಂ ಕಿಸಾನ್ ಅಪ್‌ಡೇಟ್: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿ ಇದೆ.  ಕೇಂದ್ರ ಸರ್ಕಾರದ ಈ ಯೋಜನೆಯ 12ನೇ ಕಂತು ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆಯಾಗಲಿದೆ.  ದೇಶದ 10 ಕೋಟಿಗೂ ಹೆಚ್ಚು ರೈತರು ಅಕ್ಟೋಬರ್‌ನಲ್ಲಿ ಪಿಎಂ ಕಿಸಾನ್‌ನ ಮುಂದಿನ ಕಂತನ್ನು ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಆದರೆ, ಇನ್ನೂ ಇ-ಕೆವೈಸಿ ಪೂರ್ಣಗೊಳಿಸದ ರೈತರಿಗೆ ಪಿಎಂ ಕಿಸಾನ್ ಯೋಜನೆಯ 12ನೇ ಕಂತಿನ ಪ್ರಯೋಜನ ಸಿಗುವುದಿಲ್ಲ. 

ಪಿಎಂ ಕಿಸಾನ್‌ನ ಅಧಿಕೃತ ವೆಬ್‌ಸೈಟ್ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ,  ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ನೊಂದಾಯಿತ ರೈತ ಫಲಾನುಭವಿಗಳು ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಇ-ಕೆವೈಸಿ ಪೂರ್ಣಗೊಳಿಸುವುದು ಅತ್ಯಗತ್ಯವಾಗಿದೆ. ಅಂದರೆ, ಪಿಎಂ ಕಿಸಾನ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ನೋಂದಾಯಿತ ರೈತರು ಓಟಿಪಿ ಆಧಾರಿತ ಇ-ಕೆವೈಸಿ  ಅನ್ನು ಪೂರ್ಣಗೊಳಿಸಬೇಕಿದೆ. ಇದನ್ನು ಮಾಡಲು ನೀವು ಹತ್ತಿರದ ಸಾರ್ವಜನಿಕ ಉಪಯುಕ್ತತೆ ಕೇಂದ್ರಕ್ಕೆ ಭೇಟಿ ನೀಡಬಹುದು.

ಇದನ್ನೂ ಓದಿ- SBI ಅಥವಾ Post Office ನಲ್ಲಿ ಹಣ ಹೂಡಿಕೆ ಮಾಡಿದ್ದೀರಾ? ಯಾವುದರಲ್ಲಿ ಬೇಗ ಹಣ ಡಬಲ್ ಆಗುತ್ತದೆ?

ವಾಸ್ತವವಾಗಿ, ರೈತರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಮೋದಿ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಪ್ರಾರಂಭಿಸಿದೆ . ಈ ಯೋಜನೆಯಡಿ ಅರ್ಹ ರೈತರಿಗೆ ವಾರ್ಷಿಕ ಆರು ಸಾವಿರ ರೂಪಾಯಿ ಸಹಾಯಧನವನ್ನು ನೀಡಲಾಗುತ್ತದೆ. ಈ ಮೊತ್ತವನ್ನು ಮೂರು ಕಂತುಗಳಲ್ಲಿ ತಲಾ 2,000 ರೂ.ಗಳನ್ನು ನೇರವಾಗಿ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಇದಕ್ಕೂ ಮುನ್ನ ಮೇ 31ರಂದುಪಿಎಂ ಕಿಸಾನ್ ಯೋಜನೆಯ 11ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ರೈತರ ಖಾತೆಗೆ ವರ್ಗಾಯಿಸಿದ್ದರು.

ಇದನ್ನೂ ಓದಿ- 7th Pay Commission : ಹಬ್ಬದ ದಿನವೆ ಕೇಂದ್ರ ನೌಕರರಿಗೆ ಸಿಹಿ ಸುದ್ದಿ : ಡಿಎ ಹೆಚ್ಚಳಕ್ಕೆ ಅಧಿಸೂಚನೆ ಬಿಡುಗಡೆ

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ಇ-ಕೆವೈಸಿ ಪೂರ್ಣಗೊಳಿಸುವುದು ಹೇಗೆ?
* ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ಇ-ಕೆವೈಸಿ ಪೂರ್ಣಗೊಳಿಸಾಲು ಮೊದಲು ಪಿಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್‌ಸೈಟ್ pmkisan.gov.in ಗೆ ಹೋಗಿ.
* ಇಲ್ಲಿ ಫಾರ್ಮರ್ ಕಾರ್ನರ್ ಗೆ ಹೋಗಿ ಇ-ಕೆವೈಸಿ ಟ್ಯಾಬ್ ಮೇಲೆ ಕ್ಲಿಕ್ ಮಾಡಿ.
* ಹೊಸ ವೆಬ್ ಪುಟದಲ್ಲಿ, ಆಧಾರ್ ಸಂಖ್ಯೆಯನ್ನು ನಮೂದಿಸಿ ಮತ್ತು ಹುಡುಕಾಟ ಟ್ಯಾಬ್ ಅನ್ನು ಕ್ಲಿಕ್ ಮಾಡಿ. 
* ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ಒಟಿಪಿ ಬರುತ್ತದೆ.
* ಒಟಿಪಿ ಸಲ್ಲಿಸಿದ ನಂತರ ಇಲ್ಲಿ ಕ್ಲಿಕ್ ಮಾಡಿ.
* ಆಧಾರ್ ನೋಂದಾಯಿತ ಮೊಬೈಲ್  ಒಟಿಪಿ ಅನ್ನು ನಮೂದಿಸಿ ಸಲ್ಲಿಸಿ. ಬಳಿಕ ನಿಮ್ಮ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News