ರೈತರಿಗೆ ಹೊಸ ವರ್ಷದ ಗಿಫ್ಟ್: ಇಂದು ಪಿಎಂ-ಕಿಸಾನ್ ಯೋಜನೆಯ 10ನೇ ಕಂತು ಬಿಡುಗಡೆ

ಶನಿವಾರ ಮಧ್ಯಾಹ್ನ 12 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ‘ಪಿಎಂ-ಕಿಸಾನ್ ಯೋಜನೆ’(PM Kisan)ಯ 10ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ

Written by - Puttaraj K Alur | Last Updated : Jan 1, 2022, 10:46 AM IST
  • ಹೊಸ ವರ್ಷದ ಮೊದಲ ದಿನವೇ ದೇಶದ ರೈತರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸಿಗಲಿದೆ
  • ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ ಯೋಜನೆಯಡಿ ರೈತರಿಗೆ 10ನೇ ಕಂತಿನ ಹಣ ಬಿಡುಗಡೆ
  • ಇಂದು ಮಧ್ಯಾಹ್ನ 12 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮಾಡಲಿರುವ ಪ್ರಧಾನಿ ಮೋದಿ
ರೈತರಿಗೆ ಹೊಸ ವರ್ಷದ ಗಿಫ್ಟ್: ಇಂದು ಪಿಎಂ-ಕಿಸಾನ್ ಯೋಜನೆಯ 10ನೇ ಕಂತು ಬಿಡುಗಡೆ   title=
‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ ಯೋಜನೆ

ನವದೆಹಲಿ: ಇಂದು ರೈತರಿಗೆ ಪ್ರಧಾನಿ ನರೇಂದ್ರ ಮೋದಿ ಹೊಸ ವರ್ಷದ ಗಿಫ್ಟ್ ನೀಡಲಿದ್ದಾರೆ. ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ’(Pradhan Mantri Kisan Samman  Nidhi Scheme) ಯೋಜನೆಯಡಿ ಫಲಾನುಭವಿ ರೈತರಿಗೆ 10ನೇ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ.

ಶನಿವಾರ(ಜ.1)ಮಧ್ಯಾಹ್ನ 12 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ‘ಪಿಎಂ-ಕಿಸಾನ್ ಯೋಜನೆ’(PM Kisan)ಯ 10ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ತಿಳಿಸಿದೆ. ರೈತರು pmindiawebcast.nic.in ಅಥವಾ ದೂರದರ್ಶನ ಮೂಲಕ ಈ ಕಾರ್ಯಕ್ರಮಕ್ಕೆ ಸೇರಿಕೊಳ್ಳಬಹುದು.

ಇದನ್ನೂ ಓದಿ: LPG Cylinder Price : ಹೊಸ ವರ್ಷದ ದಿನವೇ ಭರ್ಜರಿ ಗಿಫ್ಟ್ : LPG ಸಿಲಿಂಡರ್ ಬೆಲೆಯಲ್ಲಿ ₹100 ಇಳಿಕೆ!

‘ಪ್ರಧಾನ ಮಂತ್ರಿ ಕಿಸಾನ್ ಯೋಜನೆ’ಯಡಿ ದೇಶಾದ್ಯಂತ ರೈತರು ವರ್ಷಕ್ಕೆ 6000 ರೂ. ಪಡೆಯುತ್ತಾರೆ. ದೇಶದಲ್ಲಿನ 10 ಕೋಟಿಗೂ ಹೆಚ್ಚಿನ ರೈತರ ಕುಟುಂಬಗಳಿಗೆ ಸುಮಾರು 20,000 ಸಾವಿರ ಕೋಟಿ ರೂ. ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ ಎಂದು ಪಿಎಂಒ ಕಚೇರಿಯು ಮಾಹಿತಿ ನೀಡಿದೆ.

ಇದುವರೆಗೂ ಬರೋಬ್ಬರಿ 1.6 ಲಕ್ಷ ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಇದೀಗ ‘ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ’ಯ 10ನೇ ಕಂತಿನ ಹಣ ಬಿಡುಗಡೆ ಮಾಡಲಾಗುವುದು. ಆನ್‌ಲೈನ್‌ನಲ್ಲಿ ನೇರವಾಗಿ ರೈತರ ಖಾತೆಗೆ ಹಣವನ್ನು ವರ್ಗಾಯಿಸಲಾಗುತ್ತದೆ.

ಇದನ್ನೂ ಓದಿ: 4th Quarter 2022: ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರದಲ್ಲಿ ಯಾವುದೇ ಬದಲಾವಣೆಯಿಲ್ಲ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News