PM Kisan ₹6OOO ಬೇಕಿದ್ದರೆ ತಕ್ಷಣ ಈ ಕೆಲಸ ಮಾಡಿ, ನೇರವಾಗಿ ಖಾತೆಗೆ ಹಣ ಬರುತ್ತದೆ

PM Kisan Yojana : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಒಂದು ಕೇಂದ್ರ ಸರ್ಕಾರಿ ಯೋಜನೆಯಾಗಿದ್ದು, ಇದರ ಮೂಲಕ ಸರ್ಕಾರವು ಎಲ್ಲಾ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕನಿಷ್ಠ ಆದಾಯದ ಬೆಂಬಲವನ್ನು ನೀಡುತ್ತದೆ.

Written by - Channabasava A Kashinakunti | Last Updated : Dec 11, 2022, 09:52 PM IST
  • ಪಿಎಂ ಕಿಸಾನ್ ನೋಂದಣಿ
  • 6 ಸಾವಿರ ರೂಪಾಯಿ ಸಹಾಯಧನ
  • ಪ್ರಧಾನ ಮಂತ್ರಿ ಕಿಸಾನ್ ಯೋಜನೆಗೆ ಯಾರು ಅರ್ಹರು?
PM Kisan ₹6OOO ಬೇಕಿದ್ದರೆ ತಕ್ಷಣ ಈ ಕೆಲಸ ಮಾಡಿ, ನೇರವಾಗಿ ಖಾತೆಗೆ ಹಣ ಬರುತ್ತದೆ title=

PM Kisan Yojana : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಒಂದು ಕೇಂದ್ರ ಸರ್ಕಾರಿ ಯೋಜನೆಯಾಗಿದ್ದು, ಇದರ ಮೂಲಕ ಸರ್ಕಾರವು ಎಲ್ಲಾ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕನಿಷ್ಠ ಆದಾಯದ ಬೆಂಬಲವನ್ನು ನೀಡುತ್ತದೆ. ಇದರಲ್ಲಿ ಸರ್ಕಾರದಿಂದ ರೈತರಿಗೆ ವರ್ಷಕ್ಕೆ 6 ಸಾವಿರ ರೂ. ದೇಶದ ರೈತರಿಗೆ ಆರ್ಥಿಕ ಪ್ರಯೋಜನಗಳನ್ನು ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಹಾಗೆ, ಈ ಯೋಜನೆಯಡಿ ಪಡೆದ ಪ್ರಯೋಜನವು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಬರುತ್ತದೆ.

ಪಿಎಂ ಕಿಸಾನ್ ನೋಂದಣಿ

ದೇಶದಲ್ಲಿ ಇನ್ನೂ ಅನೇಕ ರೈತರು ಇದ್ದಾರೆ, ಅವರು ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಅಡಿಯಲ್ಲಿ ವಾರ್ಷಿಕ 6,000 ರೂಪಾಯಿಗಳ ಆರ್ಥಿಕ ಸಹಾಯದ ಪ್ರಯೋಜನವನ್ನು ಪಡೆಯುತ್ತಿಲ್ಲ. ಅಂತಹ ಪರಿಸ್ಥಿತಿಯಲ್ಲಿ, 6,000 ರೂಪಾಯಿಗಳ ಆರ್ಥಿಕ ಲಾಭವನ್ನು ಬಯಸುವ ರೈತರು ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಅಡಿಯಲ್ಲಿ ನೋಂದಾಯಿಸಿಕೊಳ್ಳಬೇಕಾಗುತ್ತದೆ. ಇದಕ್ಕಾಗಿ, ರೈತರು ತಮ್ಮ ನೋಂದಣಿಯನ್ನು https://pmkisan.gov.in/ ಗೆ ಭೇಟಿ ನೀಡುವ ಮೂಲಕ ಈ ಯೋಜನೆಗೆ ನೋಂದಣಿ ಮಾಡಿಕೊಳ್ಳಬಹುದು.

ಇದನ್ನೂ ಓದಿ : Extra Income: ವೇತನದ ಜೊತೆಗೆ ತಿಂಗಳಿಗೆ 30 ಸಾವಿರ ಹೆಚ್ಚುವರಿ ಆದಾಯ ಗಳಿಸಬೇಕೆ? ಇಲ್ಲಿದೆ ಉಪಾಯ

6 ಸಾವಿರ ರೂಪಾಯಿ ಸಹಾಯಧನ

ಪ್ರಧಾನಮಂತ್ರಿ ಕಿಸಾನ್ ಯೋಜನೆ ಅಡಿಯಲ್ಲಿ, ದೇಶದಾದ್ಯಂತ ಎಲ್ಲಾ ಅರ್ಹ ರೈತ ಕುಟುಂಬಗಳಿಗೆ ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂಪಾಯಿಗಳ ಮೂರು ಸಮಾನ ಕಂತುಗಳಲ್ಲಿ ವರ್ಷಕ್ಕೆ 6000 ರೂಪಾಯಿಗಳ ಆರ್ಥಿಕ ಸಹಾಯವನ್ನು ನೀಡಲಾಗುತ್ತದೆ. ಈ ಯೋಜನೆಯಲ್ಲಿ, ಕುಟುಂಬವನ್ನು ಗಂಡ, ಹೆಂಡತಿ ಮತ್ತು ಅಪ್ರಾಪ್ತ ಮಕ್ಕಳು ಎಂದು ವ್ಯಾಖ್ಯಾನಿಸಲಾಗಿದೆ. 2,000 ಮೊತ್ತವನ್ನು ನೇರವಾಗಿ ರೈತರು/ರೈತರ ಕುಟುಂಬದ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ.

ಪ್ರಧಾನ ಮಂತ್ರಿ ಕಿಸಾನ್ ಯೋಜನೆಗೆ ಯಾರು ಅರ್ಹರು?

- ಈ ಯೋಜನೆಯಡಿ, ಕೃಷಿಯೋಗ್ಯ ಭೂಮಿ ಹೊಂದಿರುವ ಭೂಹಿಡುವಳಿದಾರ ರೈತ ಕುಟುಂಬಗಳು ತಮ್ಮ ಹೆಸರಿನಲ್ಲಿ ಅರ್ಜಿ ಸಲ್ಲಿಸಬಹುದು.
- ನಗರ ಮತ್ತು ಗ್ರಾಮೀಣ ಪ್ರದೇಶಗಳ ರೈತರು.
- ಸಣ್ಣ ಮತ್ತು ಅತಿ ಸಣ್ಣ ರೈತ ಕುಟುಂಬಗಳು.

ಪ್ರಧಾನ ಮಂತ್ರಿ ಕಿಸಾನ್ ಯೋಜನೆಗೆ ಯಾರು ಅರ್ಹರಲ್ಲ?

- ಸಾಂಸ್ಥಿಕ ಜಮೀನುದಾರ
- ರಾಜ್ಯ/ಕೇಂದ್ರ ಸರ್ಕಾರ ಹಾಗೂ ಸಾರ್ವಜನಿಕ ವಲಯದ ಉದ್ಯಮಗಳು ಮತ್ತು ಸರ್ಕಾರಿ ಸ್ವಾಯತ್ತ ಸಂಸ್ಥೆಗಳ ಪ್ರಸ್ತುತ ಅಥವಾ ನಿವೃತ್ತ ಅಧಿಕಾರಿಗಳು ಮತ್ತು ನೌಕರರು.
- ಉನ್ನತ ಆರ್ಥಿಕ ಸ್ಥಿತಿಯ ಫಲಾನುಭವಿಗಳು ಅರ್ಹರಲ್ಲ.
- ಆದಾಯ ತೆರಿಗೆ ಪಾವತಿಸುವವರು.
- ಸಾಂವಿಧಾನಿಕ ಹುದ್ದೆಗಳನ್ನು ಹೊಂದಿರುವ ರೈತ ಕುಟುಂಬಗಳು.
- ವೈದ್ಯರು, ಎಂಜಿನಿಯರ್‌ಗಳು ಮತ್ತು ವಕೀಲರಂತಹ ವೃತ್ತಿಪರರು.
- 10,000 ಕ್ಕಿಂತ ಹೆಚ್ಚಿನ ಮಾಸಿಕ ಪಿಂಚಣಿ ಹೊಂದಿರುವ ನಿವೃತ್ತ ಪಿಂಚಣಿದಾರರು.

ಇದನ್ನೂ ಓದಿ : Arecanut Today Price: ರಾಜ್ಯದಲ್ಲಿ ಭಾರೀ ಕುಸಿತ ಕಂಡ ಅಡಿಕೆ ಧಾರಣೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News