PM Kisan Update: ಈ ದಿನ ರೈತರ ಖಾತೆ ಸೇರಲಿದೆ 12ನೇ ಕಂತು, ಟ್ವೀಟ್ ಮೂಲಕ ಮಹತ್ವದ ಹೇಳಿಕೆ ನೀಡಿದ ಪ್ರಧಾನಿ

PM Kisan 12th Installment: ಪಿಎಂ ಕಿಸಾನ್ ಫಲಾನುಭಾವಿಗಳಿಗೆ ಮಹತ್ವದ ಮಾಹಿತಿಯೊಂದು ಪ್ರಕಟವಾಗಿದೆ. ಪ್ರಧಾನಿ ನರೇಂದ್ರ ಮೋದಿ ಶೀಘ್ರದಲ್ಲಿಯೇ ಪಿಎಂ ಕಿಸಾನ್ ಸಮ್ಮಾನ್ ನಿಧಿಯ 12ನೇ ಕಂತನ್ನು ಬಿಡುಗಡೆಗೊಳಿಸಲಿದ್ದಾರೆ. ಏತನ್ಮಧ್ಯೆ ಟ್ವೀಟ್ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ರೈತರೊಂದಿಗೆ ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ.  

Written by - Nitin Tabib | Last Updated : Aug 26, 2022, 02:03 PM IST
  • ಪಿಎಂ ಕಿಸಾನ್ ಫಲಾನುಭಾವಿಗಳಿಗೆ ಮಹತ್ವದ ಮಾಹಿತಿಯೊಂದು ಪ್ರಕಟವಾಗಿದೆ.
  • ಪ್ರಧಾನಿ ನರೇಂದ್ರ ಮೋದಿ ಶೀಘ್ರದಲ್ಲಿಯೇ ಪಿಎಂ ಕಿಸಾನ್ ಸಮ್ಮಾನ್ ನಿಧಿಯ 12ನೇ ಕಂತನ್ನು ಬಿಡುಗಡೆಗೊಳಿಸಲಿದ್ದಾರೆ.
  • ಏತನ್ಮಧ್ಯೆ ಟ್ವೀಟ್ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ರೈತರೊಂದಿಗೆ ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ.
PM Kisan Update: ಈ ದಿನ ರೈತರ ಖಾತೆ ಸೇರಲಿದೆ 12ನೇ ಕಂತು, ಟ್ವೀಟ್ ಮೂಲಕ ಮಹತ್ವದ ಹೇಳಿಕೆ ನೀಡಿದ ಪ್ರಧಾನಿ title=
PM Kisan Samman Nidhi Update

PM Kisan 12th Installment Update: ನೀವು ಕೂಡ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಫಲಾನುಭವಿಗಳಾಗಿದ್ದರೆ, ಈ ಸುದ್ದಿ ನಿಮಗೆ ಭಾರಿ ನೆಮ್ಮದಿ ನೀಡಲಿದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 12 ನೇ ಕಂತನ್ನು ಪಿಎಂ ಮೋದಿ ಶೀಘ್ರದಲ್ಲೇ ಬಿಡುಗಡೆ ಮಾಡಲಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಕೇಂದ್ರ  ಸರ್ಕಾರ ನಡೆಸುತ್ತಿರುವ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿದೆ. ಈ ಯೋಜನೆಗೆ ಸಂಬಂಧಿಸಿದಂತೆ, ಪ್ರಧಾನಿ ಮೋದಿ ಅವರೇ ಹಲವು ವೇದಿಕೆಗಳಿಂದ ರೈತರ ಹಿತಾಸಕ್ತಿಯ ಬಗ್ಗೆ ಮಾತನಾಡಿದ್ದಾರೆ.

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ರೈತರಿಗಾಗಿ ಟ್ವೀಟ್ ವೊಂದನ್ನು ಮಾಡುವ ಮೂಲಕ, 'ದೇಶವು ನಮ್ಮ ರೈತ ಬಾಂಧವರು ಹಾಗೂ ಭಗಿನಿಯರ ಬಗ್ಗೆ ಹೆಮ್ಮೆಪಡುತ್ತದೆ. ಅವರು ಬಲಿಷ್ಠರಾದಷ್ಟು, ನಮ್ಮ ನವ ಭಾರತವು ಹೆಚ್ಚು ಸಮೃದ್ಧವಾಗಿರುತ್ತದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಮತ್ತು ಕೃಷಿಗೆ ಸಂಬಂಧಿಸಿದ ಇತರ ಯೋಜನೆಗಳು ದೇಶದ ಕೋಟ್ಯಂತರ ರೈತರಿಗೆ ಹೊಸ ಶಕ್ತಿ ನೀಡುತ್ತಿರುವುದು ನನಗೆ ಖುಷಿ ತಂದಿದೆ' ಎಂದು ಹೇಳಿದ್ದರು.

12ನೇ ಕಂತಿನ ಹಣ ಯಾವಾಗ ಬರುತ್ತದೆ?
ಪಿಎಂ ಕಿಸಾನ್‌ ಸಮ್ಮಾನ್ ನಿಧಿಯ 12ನೇ ಕಂತು ಮುಂದಿನ ತಿಂಗಳು ಬಿಡುಗಡೆಯಾಗುವ ನಿರೀಕ್ಷೆ ಇದೆ. ವಾಸ್ತವದಲ್ಲಿ ಈ ಯೋಜನೆಯಡಿಯಲ್ಲಿ, ರೈತರಿಗೆ ವರ್ಷದ ಮೊದಲ ಕಂತನ್ನು ಏಪ್ರಿಲ್ 1 ರಿಂದ ಜುಲೈ 31 ರ ನಡುವೆ ವರ್ಗಾಯಿಸಲಾಗುತ್ತದೆ ಮತ್ತು ಎರಡನೇ ಕಂತನ್ನು ಆಗಸ್ಟ್ 1 ರಿಂದ ನವೆಂಬರ್ 30 ರ ನಡುವೆ ಮತ್ತು ಮೂರನೇ ಕಂತಿನ ಹಣವನ್ನು ಡಿಸೆಂಬರ್ 1 ಮತ್ತು ಮಾರ್ಚ್ 31 ರ ನಡುವೆ ವರ್ಗಾಯಿಸಲಾಗುತ್ತದೆ. ಇದರಂತೆಯೇ ಪಿಎಂ ಕಿಸಾನ್ ನ 12ನೇ ಕಂತು ಮುಂದಿನ ತಿಂಗಳಲ್ಲಿ ರೈತರ ಖಾತೆಗೆ ಬರಬಹುದು.

ಇದನ್ನೂ ಓದಿ-ಸರ್ಕಾರದಿಂದ ಅಗ್ಗದ ಬೆಲೆಗೆ ಚಿನ್ನ ಖರೀದಿಸಲು ಕೊನೆಯ ಅವಕಾಶ..! 10 ಗ್ರಾಂ ಬಂಗಾರದ ಮೇಲೆ 2186 ರೂ. ಲಾಭ

ನಿಮ್ಮ ಅಪ್ಲಿಕೇಶನ್ ಅನ್ನು ಅಪ್ಡೇಟ್ ಮಾಡಿ
>> ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ನೀವು ಯಾವುದೇ ಸಮಸ್ಯೆಯನ್ನು ಎದುರಿಸುತ್ತಿದ್ದರೆ, ಅದನ್ನು ಶೀಘ್ರದಲ್ಲಿಯೇ ಪರಿಹರಿಸಿ. ಇದಕ್ಕಾಗಿ ನೀವು ಸಹಾಯವಾಣಿ ಸಂಖ್ಯೆಗೆ ಕರೆ ಮಾಡುವ ಮೂಲಕ ಅಥವಾ ಮೇಲ್ ಐಡಿಗೆ ಮೇಲ್ ಮಾಡುವ ಮೂಲಕ ನೀವು ಪರಿಹಾರವನ್ನು ಕೊರಬಹುದಾಗಿದೆ.
>> ಇದಕ್ಕಾಗಿ PM ಕಿಸಾನ್ ಸಮ್ಮಾನ್ ಸಹಾಯವಾಣಿ ಸಂಖ್ಯೆ- 155261 ಅಥವಾ 1800115526 (ಟೋಲ್ ಫ್ರೀ) ಅಥವಾ 011-23381092 ನಲ್ಲಿ ನೀವು ಸಂಪರ್ಕಿಸಬಹುದು. ನಿಮ್ಮ ದೂರನ್ನು ನೀವು ಇ-ಮೇಲ್ ಐಡಿ (pmkisan-ict@gov.in) ಗೆ ಮೇಲ್ ಕೂಡ ಮಾಡಬಹುದು.
>> ಈ ಯೋಜನೆಗೆ ನೀವು ಇದುವರೆಗೆ ಅರ್ಜಿ ಸಲ್ಲಿಸಿಲ್ಲ ಎಂದಾದರೆ, ಅಧಿಕೃತ ವೆಬ್‌ಸೈಟ್ pmkisan.gov.in ಗೆ ಭೇಟಿ ನೀಡುವ ಮೂಲಕ ನಿಮ್ಮನ್ನು ಹೆಸರನ್ನು ನೀವು ನೊಂದಾಯಿಸಿಕೊಳ್ಳಬಹುದು.

ಇದನ್ನೂ ಓದಿ-India's Cheapest 125 CC Bike Launch: ಸದ್ದಿಲ್ಲದೇ ಅಗ್ಗದ, ಸುಂದರ ಹಾಗೂ ದೀರ್ಘ ಬಾಳಿಕೆಯ ಬೈಕ್ ಬಿಡುಗಡೆ ಮಾಡಿದ ಬಜಾಜ್

ನಿಮ್ಮ ಕಂತಿನ ಸ್ಥಿತಿಯನ್ನು ಈ ರೀತಿ ಪರಿಶೀಲಿಸಿ
1. ಕಂತಿನ ಸ್ಥಿತಿಯನ್ನು ನೋಡಲು, ನೀವು PM ಕಿಸಾನ್ ವೆಬ್‌ಸೈಟ್‌ಗೆ ಹೋಗಿ.
2. ಈಗ ರೈತರ ಕಾರ್ನರ್ ಮೇಲೆ ಕ್ಲಿಕ್ ಮಾಡಿ.
3. ಈಗ ಬೆನಿಫಿಶಿಯರಿ ಸ್ಟೇಟಸ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
4. ಇದೀಗ ನಿಮ್ಮ ಮುಂದೆ ಹೊಸ ಪುಟ ತೆರೆದುಕೊಳ್ಳುತ್ತದೆ.
5. ಅದರಲ್ಲಿ ನೀವು ನಿಮ್ಮ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆಯನ್ನು ನಮೂದಿಸಿ.
6. ಬಳಿಕ ನಿಮ್ಮ ಸ್ಕ್ರೀನ್ ಮೇಲೆ ನಿಮ್ಮ ಸ್ಥಿತಿಯ ಬಗ್ಗೆ ಸಂಪೂರ್ಣ ಮಾಹಿತಿ ಬಿತ್ತರಗೊಳ್ಳಲಿದೆ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News