PM Kisan Yojana: ಪಿಎಂ ಕಿಸಾನ್‌ ಫಲಾನುಭವಿಗಳಿಗೆ ಕೈಗೆಟುಕುವ ದರದಲ್ಲಿ ಸಾಲ, ಅರ್ಜಿ ಸಲ್ಲಿಸುವುದು ಹೇಗೆ ತಿಳಿಯಿರಿ

‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ’ ಮತ್ತು ‘ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ’ಗಳು ಸ್ವಾವಲಂಬಿ ಭಾರತ ಯೋಜನೆಯಡಿ ಒಟ್ಟಿಗೆ ಲಿಂಕ್ ಆಗಿವೆ.

Written by - Puttaraj K Alur | Last Updated : Jan 4, 2022, 04:47 PM IST
  • ಪಿಎಂ ಕಿಸಾನ್‌ ಫಲಾನುಭವಿ ರೈತರಿಗೆ ಕಡಿಮೆ ದರದಲ್ಲಿ ಸಾಲ ಸೌಲಭ್ಯ
  • ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ನೀಡುವ ಈ ಸಾಲಕ್ಕೆ ಬಡ್ಡಿ ದರ ಕಡಿಮೆ
  • ಪ್ರಧಾನಮಂತ್ರಿ ಕಿಸಾನ್ ಯೋಜನೆ & ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ ಒಟ್ಟಿಗೆ ಲಿಂಕ್ ಆಗಿವೆ
PM Kisan Yojana: ಪಿಎಂ ಕಿಸಾನ್‌ ಫಲಾನುಭವಿಗಳಿಗೆ ಕೈಗೆಟುಕುವ ದರದಲ್ಲಿ ಸಾಲ, ಅರ್ಜಿ ಸಲ್ಲಿಸುವುದು ಹೇಗೆ ತಿಳಿಯಿರಿ title=
ರೈತರಿಗೆ ಕಡಿಮೆ ದರದಲ್ಲಿ ಸಾಲ ಸೌಲಭ್ಯ

ನವದೆಹಲಿ: ಕೇಂದ್ರ ಸರ್ಕಾರ ಇತ್ತೀಚೆಗೆ ಪಿಎಂ ಕಿಸಾನ್ ಯೋಜನೆಯ 10ನೇ ಕಂತು ಬಿಡುಗಡೆ ಮಾಡಿದೆ. ಸರ್ಕಾರದ ಈ ಯೋಜನೆಯ ಲಾಭವನ್ನು ದೇಶದ ಕೋಟ್ಯಂತರ ರೈತರು ಪಡೆಯುತ್ತಿದ್ದಾರೆ. ಈ ಯೋಜನೆಯಡಿ ಸರ್ಕಾರವು ರೈತರಿಗೆ ಕೈಗೆಟುಕುವ ದರದಲ್ಲಿ ಸಾಲವನ್ನು ಸಹ ನೀಡುತ್ತಿದೆ.

ವಾಸ್ತವವಾಗಿ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ’ ಮತ್ತು ‘ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ’ಗಳು ಸ್ವಾವಲಂಬಿ ಭಾರತ ಯೋಜನೆಯಡಿ ಒಟ್ಟಿಗೆ ಲಿಂಕ್ ಆಗಿವೆ. ಈ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಲ್ಲಿ ಸರ್ಕಾರವು ರೈತರಿಗೆ ಕೈಗೆಟುಕುವ ದರದಲ್ಲಿ ಸಾಲವನ್ನು ನೀಡುತ್ತಿದೆ. ಈ ಯೋಜನೆಯ ಲಾಭವನ್ನು ನೀವು ಹೇಗೆ ಪಡೆಯಬಹುದು ಎಂಬುದನ್ನು ತಿಳಿದುಕೊಳ್ಳಿರಿ.

ಇದನ್ನೂ ಓದಿ: Saving Account ಮೇಲೆ ಆಕರ್ಷಕ ಬಡ್ಡಿ ನೀಡುತ್ತಿವೆ ಈ ಬ್ಯಾಂಕುಗಳು, ತಕ್ಷಣ ಪರಿಶೀಲಿಸಿ

ಕಡಿಮೆ ಬಡ್ಡಿ ದರ

ರೈತರು ಬಿತ್ತನೆ ಬೆಳೆಗಳಿಗೆ ಬ್ಯಾಂಕ್‌ಗಳಿಂದ ಅತಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯುತ್ತಾರೆ. ಈ ಸಾಲವನ್ನು ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಮಾತ್ರ ನೀಡಲಾಗುತ್ತದೆ. ಈ ಯೋಜನೆಯಲ್ಲಿ ರೈತರಿಗೆ ಖಾತರಿಯಿಲ್ಲದೆ 3 ಲಕ್ಷ ರೂ.ವರೆಗೆ ಸಾಲ ನೀಡಲಾಗುತ್ತದೆ. ಅದೇ ರೀತಿ 5-3 ಲಕ್ಷ ರೂ.ಗಳ ಅಲ್ಪಾವಧಿ ಸಾಲಗಳನ್ನು ಕೇವಲ ಶೇ.4ರಷ್ಟು ಬಡ್ಡಿದರದಲ್ಲಿ ನೀಡಲಾಗುತ್ತದೆ. ಈ ಸಾಲಕ್ಕೆ ಸರ್ಕಾರ ಶೇ.2ರಷ್ಟು ಸಹಾಯಧನ ನೀಡುತ್ತದೆ. ಅದೇ ರೀತಿ ಸಾಲವನ್ನು ಸಮಯಕ್ಕೆ ಮರುಪಾವತಿಸಿದರೆ ಶೇ.3ರಷ್ಟು ರಿಯಾಯಿತಿಯನ್ನು ನೀಡಲಾಗುತ್ತದೆ. ಈ ರೀತಿ ಈ ಸಾಲವು ಕೇವಲ ಶೇ.4ರಷ್ಟು ಬಡ್ಡಿದರದಲ್ಲಿ ಲಭ್ಯವಿರುತ್ತದೆ. ಆದರೆ ಸಾಲದ ಮರುಪಾವತಿಯಲ್ಲಿ ವಿಳಂಬವಾದರೆ ಈ ಸಾಲದ ಬಡ್ಡಿದರವು ಶೇ.7ರಷ್ಟಾಗುತ್ತದೆ.

ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯುವುದು ಹೇಗೆ..?

1) ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆದುಕೊಳ್ಳಲು ಮೊದಲು ನೀವು ತಾಲೂಕು ಕಚೇರಿಗೆ ಹೋಗಿ ಲೇಖ್‌ಪಾಲ್ ಅವರನ್ನು ಭೇಟಿ ಮಾಡಬೇಕು.

2) ಈಗ ಅವರಿಂದ ನಿಮ್ಮ ಜಮೀನಿನ ದಾಖಲಾತಿ (Khasra Khatauni) ಪಡೆಯಿರಿ.

3) ಇದರ ನಂತರ ಯಾವುದೇ ಬ್ಯಾಂಕ್‌ಗೆ ಹೋಗಿ ಮತ್ತು ವ್ಯವಸ್ಥಾಪಕರನ್ನು ಭೇಟಿ ಮಾಡಿ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡುವಂತೆ ಮನವಿ ಮಾಡಿರಿ.  

4) ಕಿಸಾನ್ ಕ್ರೆಡಿಟ್ ಕಾರ್ಡ್ ಅನ್ನು ಗ್ರಾಮೀಣ ಬ್ಯಾಂಕ್‌ನಿಂದ ನೀಡಿದರೆ ಸರ್ಕಾರದಿಂದ ಪ್ರೋತ್ಸಾಹಕಗಳು ಇತ್ಯಾದಿಗಳನ್ನು ನೀಡಲಾಗುತ್ತದೆ. ಇದು ರೈತರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ ಎಂಬುದನ್ನು ನೆನಪಿನಲ್ಲಿಡಿ.

5) ಇದರ ನಂತರ ಬ್ಯಾಂಕ್ ಮ್ಯಾನೇಜರ್ ನಿಮ್ಮನ್ನು ವಕೀಲರ ಹತ್ತಿರ ಕಳುಹಿಸುತ್ತಾರೆ ಮತ್ತು ಅಗತ್ಯ ಮಾಹಿತಿಯನ್ನು ತೆಗೆದುಕೊಳ್ಳುತ್ತಾರೆ.

6) ಇದರ ನಂತರ ನೀವು ಬ್ಯಾಂಕ್‌ಗೆ ಹೋಗಿ ಫಾರ್ಮ್ ಅನ್ನು ಭರ್ತಿ ಮಾಡಬೇಕು.

7) ಇದರೊಂದಿಗೆ ಕೆಲವು ದಾಖಲೆಗಳಿರುತ್ತವೆ. ಅವುಗಳ ಪ್ರಕ್ರಿಯೆ ಮುಗಿದ ಬಳಿಕ ನಿಮಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಅನ್ನು ನೀಡಲಾಗುತ್ತದೆ.

8) ಇದರಲ್ಲಿ ಎಷ್ಟು ಸಾಲ ಸೌಲಭ್ಯ ದೊರೆಯುತ್ತದೆ ಅನ್ನೋದು ನಿಮ್ಮ ಬಳಿ ಎಷ್ಟು ಜಮೀನಿದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ.

ಇದನ್ನೂ ಓದಿ: Arecanut Price today: ಇಂದಿನ ರಾಶಿ ಅಡಿಕೆ ಬೆಲೆ ಎಷ್ಟಿದೆ ಎಂದು ತಿಳಿಯಿರಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News