PMGKY Extended: ‘ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ’ ಮಾರ್ಚ್ 2022 ರವರೆಗೆ ವಿಸ್ತರಣೆ

Garib Kalyan Yojana: 80 ಕೋಟಿಗೂ ಹೆಚ್ಚು ಜನರಿಗೆ ಪರಿಹಾರವನ್ನು ನೀಡುವ ಪ್ರಯತ್ನದಲ್ಲಿ, ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ಮಾರ್ಚ್ 2022 ರವರೆಗೆ ವಿಸ್ತರಿಸಿದೆ.

Written by - Zee Kannada News Desk | Last Updated : Nov 29, 2021, 12:27 PM IST
  • ಕೇಂದ್ರದ ‘ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ’ ವಿಸ್ತರಣೆ
  • ಮಾರ್ಚ್ 2022 ರವರೆಗೆ ವಿಸ್ತರಿಸುವುದಾಗಿ ಪ್ರಧಾನಿ ಮೋದಿ ಘೋಷಣೆ
  • ಯೋಜನೆ ವಿಸ್ತರಣೆಯಿಂದ 80 ಕೋಟಿಗೂ ಹೆಚ್ಚು ಜನರಿಗೆ ಲಾಭ
PMGKY Extended: ‘ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ’ ಮಾರ್ಚ್ 2022 ರವರೆಗೆ ವಿಸ್ತರಣೆ   title=
PMGKY ಯೋಜನೆಯನ್ನು ವಿಸ್ತರಿಸಲಾಗಿದೆ

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ(Covid 19 Pandemic) ಸಮಯದಲ್ಲಿ 80 ಕೋಟಿಗೂ ಹೆಚ್ಚು ಜನರಿಗೆ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ‘ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ’(PMGKY)ಯನ್ನು ಮಾರ್ಚ್ 2022ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ.

ಚಳಿಗಾಲದ ಅಧಿವೇಶ(Winter Session)ನ ಆರಂಭಕ್ಕೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಪ್ರಧಾನಿ ಮೋದಿ, ‘ದೇಶದ 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಧಾನ್ಯಗಳನ್ನು ಒದಗಿಸಲು ನಾವು ‘ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ’(Pradhan Mantri Garib Kalyan Yojana)ಯನ್ನು ಜಾರಿಗೆ ತಂದಿದ್ದೇವೆ. ಇದರಿಂದ ದೇಶದ ಜನರು ಹೆಚ್ಚಿನ ಸಮಸ್ಯೆಗಳನ್ನು ಎದುರಿಸುವುದಿಲ್ಲ. ಯೋಜನೆಯನ್ನು ಇದೀಗ ಮಾರ್ಚ್ 2022ರವರೆಗೆ ವಿಸ್ತರಿಸಲಾಗಿದೆ’ ಎಂದು ಹೇಳಿದರು.

ಈ ವರ್ಷದ ಆರಂಭದಲ್ಲಿ ‘ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ’ (4ನೇ ಹಂತ) ಅಡಿಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ (NFSA) ಫಲಾನುಭವಿಗಳಿಗೆ ನವೆಂಬರ್ ವರೆಗೆ ಹೆಚ್ಚುವರಿ ಆಹಾರ ಧಾನ್ಯವನ್ನು ಹಂಚಿಕೆ ಮಾಡಲು ಕೇಂದ್ರವು ಅನುಮೋದನೆ ನೀಡಿತು.

ಇದನ್ನೂ ಓದಿ: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್!: ಸರ್ಕಾರ ಮೊದಲ ಬಾರಿಗೆ ಈ ಸೌಲಭ್ಯಗಳನ್ನು ನೀಡುತ್ತಿದ್ದು, ಎಲ್ಲರಿಗೂ ಪ್ರಯೋಜನವಾಗಲಿದೆ

ಯೋಜನೆಯ ನೇರ ಲಾಭ ವರ್ಗಾವಣೆ (Direct Benefit Transfer) ಅಡಿಯಲ್ಲಿ ಒಳಗೊಂಡಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಕುಟುಂಬಗಳ ವ್ಯಾಪ್ತಿಗೆ ಒಳಪಡುವ ಗರಿಷ್ಠ 81.35 ಕೋಟಿ ಫಲಾನುಭವಿಗಳಿಗೆ ಸರ್ಕಾರವು ಪ್ರತಿ ವ್ಯಕ್ತಿಗೆ ತಿಂಗಳಿಗೆ 5 ಕೆಜಿ ಆಹಾರಧಾನ್ಯಗಳನ್ನು ಉಚಿತವಾಗಿ ನೀಡುತ್ತದೆ.

COVID-19 ಹೊಸ ರೂಪಾಂತರ Omicron ಕುರಿತು ಹೆಚ್ಚುತ್ತಿರುವ ಕಳವಳಗಳ ಮಧ್ಯೆ, ಜನರು ಜಾಗರೂಕರಾಗಿರುವಂತೆ ಪ್ರಧಾನಿ ಮೋದಿ ಇದೇ ವೇಳೆ ಸಲಹೆ ನೀಡಿದ್ದಾರೆ. ‘ಸಾಂಕ್ರಾಮಿಕ ರೋಗದ ಸವಾಲಿನ ಸಮಯದಲ್ಲಿ ನಾವು 100 ಕೋಟಿಗೂ ಹೆಚ್ಚು ಕೋವಿಡ್ ಲಸಿಕೆ(COVID-19 vaccine)ಗಳನ್ನು ನೀಡಿದ್ದೇವೆ. ಈಗ ನಾವು 150 ಕೋಟಿ ಡೋಸ್‌ಗಳತ್ತ ಸಾಗುತ್ತಿದ್ದೇವೆ. ಹೊಸ ಕೊರೊನಾ ವೈರಸ್ ರೂಪಾಂತರದ ಭೀತಿ ನಮ್ಮನ್ನು ಹೆಚ್ಚು ಜಾಗೃತಗೊಳಿಸುತ್ತದೆ. ನಾವೆಲ್ಲರೂ ಇದರ ಬಗ್ಗೆ ಎಚ್ಚರದಿಂದಿರಬೇಕು’ ಎಂದು ಹೇಳಿದರು.

ಸೋಮವಾರ ಸಂಸತ್ತಿನ ಚಳಿಗಾಲದ ಅಧಿವೇಶನ(Winter Session)ದ ಮೊದಲ ದಿನದಂದು ಲೋಕಸಭೆಯು ಅಂಗೀಕರಿಸಿದ ನಂತರ ಭಾರತ ಸರ್ಕಾರವು 3 ‘ಕೃಷಿ ಕಾನೂನುಗಳ ರದ್ದತಿ ಮಸೂದೆ 2021’ ಅನ್ನು ರಾಜ್ಯಸಭೆಯಲ್ಲಿ ಮಂಡಿಸುವ ಸಾಧ್ಯತೆಯಿದೆ. 

ಇದನ್ನೂ ಓದಿ: ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News