ATM: ಈಗ ನೀವು ಕಾರ್ಡ್ ಇಲ್ಲದೆಯೂ ಯಾವುದೇ ಎಟಿಎಂನಿಂದ ಹಣ ಡ್ರಾ ಮಾಡಬಹುದು

ATM: ಈಗ ಡೆಬಿಟ್ ಕಾರ್ಡ್ ಇಲ್ಲದೆ ಎಟಿಎಂನಿಂದ ಹಣ ಡ್ರಾ ಮಾಡುವ ಸೌಲಭ್ಯವನ್ನು ಎಲ್ಲಾ ಬ್ಯಾಂಕ್‌ಗಳಲ್ಲಿ ನೀಡಲಾಗುವುದು ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ. ಇದುವರೆಗೆ ಕಾರ್ಡ್ ಇಲ್ಲದೇ ಎಟಿಎಂನಿಂದ ಹಣ ಡ್ರಾ ಮಾಡುವ ಸೌಲಭ್ಯ ಕೆಲವೇ ಬ್ಯಾಂಕ್‌ಗಳಲ್ಲಿ ಮಾತ್ರ ಲಭ್ಯವಿತ್ತು.

Written by - Yashaswini V | Last Updated : Apr 8, 2022, 12:25 PM IST
  • ಡೆಬಿಟ್ ಕಾರ್ಡ್ ಇಲ್ಲದೆಯೇ ನೀವು ಎಟಿಎಂನಿಂದ ಹಣವನ್ನು ಹಿಂಪಡೆಯಲು ಸಾಧ್ಯವಾಗುತ್ತದೆ
  • ಇದುವರೆಗೆ ಕೆಲವು ಬ್ಯಾಂಕ್‌ಗಳಲ್ಲಿ ಮಾತ್ರ ಈ ಸೌಲಭ್ಯ ಇತ್ತು
  • ಯುಪಿಐ ಮೂಲಕ ಎಲ್ಲಾ ಬ್ಯಾಂಕ್‌ಗಳ ಎಟಿಎಂಗಳಲ್ಲಿ ಸೌಲಭ್ಯ ಲಭ್ಯವಾಗಲಿದೆ
ATM: ಈಗ ನೀವು ಕಾರ್ಡ್ ಇಲ್ಲದೆಯೂ ಯಾವುದೇ ಎಟಿಎಂನಿಂದ ಹಣ ಡ್ರಾ ಮಾಡಬಹುದು   title=
Money withdraw without ATM card

ATM: ಬ್ಯಾಂಕ್ ಗ್ರಾಹಕರು ಇನ್ನು ಮುಂದೆ ಡೆಬಿಟ್ ಕಾರ್ಡ್ ಇಲ್ಲದೆಯೂ ಎಟಿಎಂನಿಂದ ಹಣವನ್ನು ಹಿಂಪಡೆಯಲು ಸಾಧ್ಯವಾಗುತ್ತದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಘೋಷಿಸಿದ್ದಾರೆ. 

ಮೂರು ದಿನಗಳ ಹಣಕಾಸು ನೀತಿ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಧಾರಗಳನ್ನು ಆರ್‌ಬಿಐ ಗವರ್ನರ್ ಪ್ರಕಟಿಸಿದರು. ಇದುವರೆಗೆ ಕಾರ್ಡ್ ಇಲ್ಲದೇ ಎಟಿಎಂನಿಂದ ಹಣ ಡ್ರಾ ಮಾಡುವ ಸೌಲಭ್ಯ ಕೆಲವೇ ಬ್ಯಾಂಕ್‌ಗಳಲ್ಲಿ ಮಾತ್ರ ಲಭ್ಯವಿತ್ತು. ಇದೀಗ ಯೂನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ ಅಥವಾ ಯುಪಿಐ ಮೂಲಕ ಈ ಸೌಲಭ್ಯವನ್ನು ಲಭ್ಯವಾಗುವಂತೆ ಮಾಡಲು ಉದ್ದೇಶಿಸಲಾಗಿದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.

ಇದನ್ನೂ ಓದಿ- Aadhaar Card: ನಿಮ್ಮ ಮೊಬೈಲ್ ಸಂಖ್ಯೆ ಬದಲಾಗಿದೆಯೇ- ತಕ್ಷಣವೇ ಆಧಾರ್ ಕಾರ್ಡ್‌ಗೆ ಲಿಂಕ್ ಮಾಡಿ

ಕಾರ್ಡ್ ಇಲ್ಲದೆ ಎಟಿಎಂನಿಂದ ಹಣವನ್ನು ಹಿಂಪಡೆಯಲಾಗುತ್ತದೆ:
ಪ್ರಸ್ತುತ ಎಟಿಎಂ ಮೂಲಕ ಕಾರ್ಡ್ ರಹಿತವಾಗಿ ನಗದು ಹಿಂಪಡೆಯುವ ಸೌಲಭ್ಯವು ಕೆಲವು ಬ್ಯಾಂಕ್‌ಗಳಿಗೆ ಮಾತ್ರ ಸೀಮಿತವಾಗಿದೆ. ಯುಪಿಐ ಅನ್ನು ಬಳಸಿಕೊಂಡು ಎಲ್ಲಾ ಬ್ಯಾಂಕ್‌ಗಳು ಮತ್ತು ಎಟಿಎಂ ನೆಟ್‌ವರ್ಕ್‌ಗಳಲ್ಲಿ ಕಾರ್ಡ್‌ಲೆಸ್ ನಗದು ಹಿಂಪಡೆಯುವ ಸೌಲಭ್ಯವನ್ನು ಲಭ್ಯವಾಗುವಂತೆ ಮಾಡಲು ಈಗ ಪ್ರಸ್ತಾಪಿಸಲಾಗಿದೆ ಎಂದವರು ತಿಳಿಸಿದ್ದಾರೆ.

ಇದನ್ನೂ ಓದಿ- LIC ಈ ವಿಶೇಷ ಯೋಜನೆಯಲ್ಲಿ ಕೇವಲ ₹29 ಹೂಡಿಕೆ ಮಾಡಿ, ₹4 ಲಕ್ಷ ಲಾಭ ಪಡೆಯಿರಿ 

ಕಾರ್ಡ್ ಕ್ಲೋನ್ ವಂಚನೆಗಳು ಕಡಿಮೆಯಾಗುತ್ತವೆ:
ಈ ಕ್ರಮವು ವಹಿವಾಟುಗಳ ಸುಲಭತೆಯನ್ನು ಹೆಚ್ಚಿಸುವುದರ ಜೊತೆಗೆ, ಅಂತಹ ವಹಿವಾಟುಗಳಿಗೆ ಭೌತಿಕ ಕಾರ್ಡ್‌ಗಳ ಅಗತ್ಯವಿಲ್ಲದಿರುವುದು ಕಾರ್ಡ್ ಸ್ಕಿಮ್ಮಿಂಗ್, ಕಾರ್ಡ್ ಕ್ಲೋನಿಂಗ್ ಇತ್ಯಾದಿಗಳಂತಹ ವಂಚನೆಗಳನ್ನು ತಡೆಯಲು ಸಹಾಯ ಮಾಡುತ್ತದೆ  ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News