SBI: ವಿಶೇಷ ನಿಶ್ಚಿತ ಠೇವಣಿ ಯೋಜನೆ ಅನ್ನು ಮಾರ್ಚ್ 31, 2023 ರವರೆಗೆ ವಿಸ್ತರಿಸಿದ ಎಸ್‌ಬಿಐ

SBI FD Rates: ಭಾರತದ ಅತಿದೊಡ್ಡ ಸರ್ಕಾರಿ ವಲಯದ ಬ್ಯಾಂಕ್  ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ  ಹಿರಿಯ ನಾಗರಿಕರಿಗಾಗಿ ಆರಂಭಿಸಿರುವ 'SBI Wecare'ಎಂಬ ವಿಶೇಷ ನಿಶ್ಚಿತ ಠೇವಣಿ ಯೋಜನೆ ಅನ್ನು ಮಾರ್ಚ್ 31, 2023 ರವರೆಗೆ ವಿಸ್ತರಿಸುವುದಾಗಿ ಘೋಷಿಸಿದೆ.

Written by - Yashaswini V | Last Updated : Sep 20, 2022, 02:20 PM IST
  • ಎಸ್‌ಬಿಐ ಹಿರಿಯ ನಾಗರಿಕರಿಗೆ 'SBI Wecare' ಎಂಬ ವಿಶೇಷ ಫಿಕ್ಸೆಡ್ ಡೆಪಾಸಿಟ್ (ಎಫ್‌ಡಿ) ಮೇಲೆ ಹೆಚ್ಚಿನ ಆದಾಯವನ್ನು ನೀಡುತ್ತಿದೆ.
  • ಎಸ್‌ಬಿಐ ಈ ಯೋಜನೆಯನ್ನು ಸೆಪ್ಟೆಂಬರ್ 2020 ರಲ್ಲಿ ಪ್ರಾರಂಭಿಸಿತು.
  • ಇದಕ್ಕೆ ಹಿರಿಯ ನಾಗರಿಕರಿಂದ ಉತ್ತಮ ಸ್ಪಂದನೆ ಕೂಡ ವ್ಯಕ್ತವಾಗಿತ್ತು.
SBI: ವಿಶೇಷ ನಿಶ್ಚಿತ ಠೇವಣಿ ಯೋಜನೆ ಅನ್ನು ಮಾರ್ಚ್ 31, 2023 ರವರೆಗೆ ವಿಸ್ತರಿಸಿದ ಎಸ್‌ಬಿಐ title=
sbi special fd scheme

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ: ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರಾಗಿದ್ದರೆ  ನಿಮಗೊಂದು ಗುಡ್ ನ್ಯೂಸ್ ಇದೆ. ಭಾರತದ ಅತಿದೊಡ್ಡ ಸರ್ಕಾರಿ ವಲಯದ ಬ್ಯಾಂಕ್  ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ  ಹಿರಿಯ ನಾಗರಿಕರಿಗಾಗಿ ಆರಂಭಿಸಿರುವ 'SBI Wecare'ಎಂಬ ವಿಶೇಷ ನಿಶ್ಚಿತ ಠೇವಣಿ ಯೋಜನೆ ಅನ್ನು ಮಾರ್ಚ್ 31, 2023 ರವರೆಗೆ ವಿಸ್ತರಿಸುವುದಾಗಿ ಘೋಷಿಸಿದೆ.

ಹಿರಿಯ ನಾಗರಿಕರಿಗಾಗಿ ವಿಶೇಷ ನಿಶ್ಚಿತ ಠೇವಣಿ ಯೋಜನೆ 'SBI Wecare' ಅನ್ನು ಮಾರ್ಚ್ 31, 2023 ರವರೆಗೆ ವಿಸ್ತರಿಸಲಾಗುವುದು ಎಂದು ಘೋಷಿಸಲಾಗಿದೆ.  ಎಸ್‌ಬಿಐ ಈ ಯೋಜನೆಯನ್ನು ಸೆಪ್ಟೆಂಬರ್ 2020 ರಲ್ಲಿ ಪ್ರಾರಂಭಿಸಿತು. ಇದಕ್ಕೆ ಹಿರಿಯ ನಾಗರಿಕರಿಂದ ಉತ್ತಮ ಸ್ಪಂದನೆ ಕೂಡ ವ್ಯಕ್ತವಾಗಿತ್ತು. 

ಇದನ್ನೂ ಓದಿ- ಕಿಸಾನ್ ಕ್ರೆಡಿಟ್ ಕಾರ್ಡ್‌ಗಾಗಿ ಬ್ಯಾಂಕ್ ಸುತ್ತುವ ಅವಶ್ಯಕತೆ ಇಲ್ಲ, ಮೊಬೈಲ್‌ನಿಂದ ಈ ಕೆಲಸ ಮಾಡಿದರಷ್ಟೇ ಸಾಕು

ವಾಸ್ತವವಾಗಿ, ಎಸ್‌ಬಿಐ ಹಿರಿಯ ನಾಗರಿಕರಿಗೆ 'SBI Wecare' ಎಂಬ ವಿಶೇಷ ಫಿಕ್ಸೆಡ್ ಡೆಪಾಸಿಟ್ (ಎಫ್‌ಡಿ) ಮೇಲೆ ಹೆಚ್ಚಿನ ಆದಾಯವನ್ನು ನೀಡುತ್ತಿದೆ. ಇದೀಗ ಯೋಜನೆ ಬಗ್ಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುವ ಹಿನ್ನಲೆಯಲ್ಲಿ ವಿಶೇಷ ನಿಶ್ಚಿತ ಠೇವಣಿ ಯೋಜನೆಯನ್ನು ಎಸ್‌ಬಿಐ ಮತ್ತೊಮ್ಮೆ ವಿಸ್ತರಿಸಿದೆ.  

30 ಬೇಸಿಸ್ ಪಾಯಿಂಟ್‌ಗಳ ಹೆಚ್ಚುವರಿ ಬಡ್ಡಿ
ಎಸ್‌ಬಿಐನ ಹಿರಿಯ ನಾಗರಿಕರ ವಿಶೇಷ ಎಫ್‌ಡಿ ಯೋಜನೆ 'SBI Wecare' ನಲ್ಲಿ, ಐದು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಎಫ್‌ಡಿಗಳ ಮೇಲೆ 30 ಬೇಸಿಸ್ ಪಾಯಿಂಟ್‌ಗಳ ಹೆಚ್ಚುವರಿ ಬಡ್ಡಿ ಲಭ್ಯವಿದೆ. 5 ವರ್ಷಗಳವರೆಗೆ ಎಫ್‌ಡಿ ಮೇಲೆ 5.65 ಪ್ರತಿಶತ ಬಡ್ಡಿಯನ್ನು ಬ್ಯಾಂಕ್ ನೀಡುತ್ತದೆ. ಆದರೆ ವಿಶೇಷ ಯೋಜನೆಯಡಿ, ಐದು ವರ್ಷಗಳವರೆಗೆ ಎಫ್‌ಡಿಯಲ್ಲಿ ಹಿರಿಯ ನಾಗರಿಕರಿಗೆ ಶೇಕಡಾ 6.45 ಬಡ್ಡಿಯನ್ನು ನೀಡಲಾಗುತ್ತದೆ.

ಇದನ್ನೂ ಓದಿ- ಡಿಮ್ಯಾಟ್ ಖಾತೆದಾರರೇ ಗಮನಿಸಿ: ಸೆಪ್ಟೆಂಬರ್ 30ರ ಮೊದಲು ಈ ಕೆಲಸ ಮಾಡಿ, ಇಲ್ಲದಿದ್ದರೆ ಲಾಕ್ ಆಗುತ್ತೆ ಖಾತೆ

ಎಸ್‌ಬಿಐ ಎಫ್‌ಡಿ ದರ:
ಎಸ್‌ಬಿಐ 2 ಕೋಟಿ ರೂ.ವರೆಗಿನ ಎಫ್‌ಡಿಗಳ ಮೇಲಿನ ಬಡ್ಡಿ ದರವನ್ನು 7 ದಿನಗಳಿಂದ 10 ವರ್ಷಗಳಿಗೆ 15 ಬೇಸಿಸ್ ಪಾಯಿಂಟ್‌ಗಳಿಂದ ಹೆಚ್ಚಿಸಿದೆ. ಹೆಚ್ಚಿಸಿದ ದರಗಳು ಆಗಸ್ಟ್ 13 ರಿಂದ ಜಾರಿಗೆ ಬಂದಿವೆ. ಎಸ್‌ಬಿಐ ಸಾಮಾನ್ಯ ನಾಗರಿಕರಿಗೆ ಎಫ್‌ಡಿಗಳ ಮೇಲೆ ಶೇಕಡಾ 2.90 ರಿಂದ ಶೇಕಡಾ 5.65 ರವರೆಗಿನ ಬಡ್ಡಿಯನ್ನು ನೀಡುತ್ತದೆ. ಹಿರಿಯ ನಾಗರಿಕರಿಗಾಗಿ ಮಾಡಿದ ಎಫ್‌ಡಿಗೆ ಬ್ಯಾಂಕ್ ಶೇಕಡಾ 3.40 ರಿಂದ ಶೇಕಡಾ 6.45 ರವರೆಗೆ ಬಡ್ಡಿಯನ್ನು ನೀಡುತ್ತದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News