Budget 2024: ಈ ಬಾರಿ ಬಜೆಟ್ ನಲ್ಲಿ ಮಹಿಳೆಯರಿಗಾಗಿ ಘೋಷಣೆಯಾಗಲಿದೆ ಈ ಯೋಜನೆಗಳು!

Budget 2024:ಈ ಬಾರಿ ಅವರು ಬಜೆಟ್‌ನಲ್ಲಿ ಮಹಿಳೆಯರು ಮತ್ತು ರೈತರಿಗೆ ಪರಿಹಾರವನ್ನು ನೀಡಬಹುದು ಎನ್ನುವ ನಿರೀಕ್ಷೆ ಹೆಚ್ಚಾಗಿದೆ.   

Written by - Ranjitha R K | Last Updated : Jan 12, 2024, 02:59 PM IST
  • ಫೆಬ್ರವರಿ 1 ರಂದು 024-25 ರ ಹಣಕಾಸು ವರ್ಷಕ್ಕೆ ಬಜೆಟ್
  • ಬಜೆಟ್ ಅಧಿವೇಶನ ಜನವರಿ 31ರಿಂದ ಜನವರಿ 9 ರವರೆಗೆ ನಡೆಯಲಿದೆ.
  • ಚುನಾವಣಾ ವರ್ಷವಾಗಿರುವುದರಿಂದ ಬಜೆಟ್ ನಲ್ಲಿ ನಿರೀಕ್ಷೆಗಳು ಕೂಡಾ ಹೆಚ್ಚಿವೆ.
Budget 2024: ಈ ಬಾರಿ ಬಜೆಟ್ ನಲ್ಲಿ ಮಹಿಳೆಯರಿಗಾಗಿ ಘೋಷಣೆಯಾಗಲಿದೆ ಈ ಯೋಜನೆಗಳು! title=

Budget 2024: ಫೆಬ್ರವರಿ 1 ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2024-25 ರ ಹಣಕಾಸು ವರ್ಷಕ್ಕೆ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಅಧಿವೇಶನ ಜನವರಿ 31 ರಂದು ಆರಂಭವಾಗಲಿದ್ದು, ಜನವರಿ 9 ರವರೆಗೆ ನಡೆಯಲಿದೆ. ಫೆ.1ರಂದು ಮಧ್ಯಂತರ ಬಜೆಟ್ ಮಂಡನೆಯಾಗಲಿದ್ದು, ಇದು ಚುನಾವಣಾ ವರ್ಷವಾಗಿರುವುದರಿಂದ ಬಜೆಟ್ ನಲ್ಲಿ ನಿರೀಕ್ಷೆಗಳು ಕೂಡಾ ಹೆಚ್ಚಿವೆ. ಆದಾಯ ತೆರಿಗೆಯಲ್ಲಿ ವಿನಾಯಿತಿ ಅಥವಾ ಬದಲಾವಣೆಗೆ ಸಂಬಂಧಿಸಿದಂತೆ ಹಣಕಾಸು ಸಚಿವರು ಪ್ರಮುಖ ಘೋಷಣೆಗಳನ್ನು ಮಾಡಬಹುದು ಎನ್ನುವ ಭರವಸೆ ಕಡಿಮೆಯಾಗಿದೆ. ಆದರೆ, ಈ ಬಾರಿ ಅವರು ಬಜೆಟ್‌ನಲ್ಲಿ ಮಹಿಳೆಯರು ಮತ್ತು ರೈತರಿಗೆ ಪರಿಹಾರವನ್ನು ನೀಡಬಹುದು ಎನ್ನುವ ನಿರೀಕ್ಷೆ ಹೆಚ್ಚಾಗಿದೆ. 

ಈ ಯೋಜನೆಗಳನ್ನು ಘೋಷಣೆ ಮಾಡಬಹುದು :
ಈ ಬಾರಿಯ ಬಜೆಟ್‌ನಲ್ಲಿ ದುಡಿಯುವ ಜನರನ್ನು ಮೆಚ್ಚಿಸುವುದು ಹಣಕಾಸು ಸಚಿವರಿಗೆ  ಸಾಧ್ಯವಾಗದಿರಬಹುದು. ಆದರೆ, ರೈತರಿಗೆ ಮತ್ತು ಮಹಿಳೆಯರಿಗೆ ದೊಡ್ಡ ಮಟ್ಟದ ಉಡುಗೊರೆ ನೀಡಬಹುದು ಎನ್ನಲಾಗಿದೆ. ಈ ಬಾರಿಯ ಬಜೆಟ್‌ನಲ್ಲಿ ಸರ್ಕಾರ ಮಹಿಳಾ ರೈತರಿಗೆ ನೀಡುವ ವಾರ್ಷಿಕ ಮೊತ್ತವನ್ನು 12000 ರೂ.ಗೆ ಹೆಚ್ಚಿಸಬಹುದು ಎನ್ನಲಾಗಿದೆ. ಈ ಬಾರಿಯ ಬಜೆಟ್‌ನಲ್ಲಿ ಮಹಿಳೆಯರು, ಬಡವರು, ಯುವಕರು, ರೈತರು ಮತ್ತು ಆದಿವಾಸಿಗಳತ್ತ ಸರ್ಕಾರ ತನ್ನ ಗಮನವನ್ನು ಕೇಂದ್ರೀಕರಿಸಬಹುದು ಎಂದು ನಿರೀಕ್ಷಿಸಲಾಗಿದೆ. ಬಜೆಟ್‌ನಲ್ಲಿ ಮಹಿಳಾ ರೈತರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಮೊತ್ತವನ್ನು 6000 ರೂ.ನಿಂದ 12000 ರೂ.ಗೆ ಹೆಚ್ಚಿಸಬಹುದು. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ಸರ್ಕಾರವು ರೈತರಿಗೆ ವಾರ್ಷಿಕ 6 ಸಾವಿರ ರೂಪಾಯಿಗಳನ್ನು ಮೂರು ಕಂತುಗಳಲ್ಲಿ ನೀಡುತ್ತದೆ. 

ಇದನ್ನೂ ಓದಿ : Arecanut Price Today: ರಾಜ್ಯದಲ್ಲಿ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗಿದೆ!

ಮಹಿಳೆಯರತ್ತ ಸರ್ಕಾರದ ಚಿತ್ತ : 
ಬಜೆಟ್‌ನಲ್ಲಿ ಹಣಕಾಸು ಸಚಿವರು ಆರ್ಥಿಕವಾಗಿ ವಂಚಿತ ಮಹಿಳೆಯರಿಗಾಗಿ ನಗದು ವರ್ಗಾವಣೆ ಯೋಜನೆಯನ್ನು ಪ್ರಾರಂಭಿಸಬಹುದು ಎಂದು ಹೇಳಲಾಗಿದೆ. MNREGA ಯಲ್ಲಿ ಮಹಿಳಾ ಕಾರ್ಮಿಕರಿಗೆ ಸರ್ಕಾರ ಆದ್ಯತೆ ನೀಡಬಹುದು ಎಂದು ನಿರೀಕ್ಷಿಸಲಾಗಿದೆ. ಪ್ರಸ್ತುತ MNREGAಯಲ್ಲಿ ಮಹಿಳೆಯರ ಪಾಲು 59.26% ಆಗಿದ್ದು, ಇದನ್ನು ಹೆಚ್ಚಿಸಬಹುದು. ಇತ್ತೀಚಿನ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿನಲ್ಲಿ ಮಹಿಳೆಯರೇ ಪ್ರಮುಖ ಪಾತ್ರ ವಹಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಮತ್ತಷ್ಟು ಹೆಚ್ಚಿಸಲು ಸರ್ಕಾರವು ಮಹಿಳೆಯರ ಕಲ್ಯಾಣಕ್ಕಾಗಿ ಈ ಘೋಷಣೆಗಳನ್ನು ಘೋಷಿಸಬಹುದು. 

ಇದನ್ನೂ ಓದಿ :  Children ticket in Train : ಬದಲಾಗಿದೆ ರೈಲ್ವೆ ನಿಯಮ ! ಮಕ್ಕಳೊಂದಿಗೆ ಪ್ರಯಾಣಿಸುವ ಮುನ್ನ ತಿಳಿದುಕೊಳ್ಳಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News