BPL Card ಹೊಂದಿರುವವರಿಗೆ ಗುಡ್ ನ್ಯೂಸ್: ಇನ್ಮುಂದೆ ನಿಮ್ಮ ಜಿಲ್ಲಾ ಕೇಂದ್ರಗಳಲ್ಲೇ ಸಿಗುತ್ತೆ ಈ ಎಲ್ಲಾ ಪ್ರಯೋಜನಗಳು!

BPL Card: ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಎಂಆರ್‌ಐಗಳಿಗೆ ಅಲೆದಾಡಬೇಕಾದ ಪರಿಸ್ಥಿತಿ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಎಂಆರ್‌ಐ ಮತ್ತು ಸಿಟಿ ಸ್ಕ್ಯಾನಿಂಗ್ ಸೆಂಟರ್ ಸ್ಥಾಪಿಸಲು ಮುಂದಾಗಿದೆ.

Written by - Yashaswini V | Last Updated : Jan 17, 2025, 03:53 PM IST
  • ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಎಂಆರ್‌ಐ ಮತ್ತು ಸಿಟಿ ಸ್ಕ್ಯಾನಿಂಗ್ ಸೇವೆಗಳು ಉಚಿತವಾಗಿ ಸಿಗುತ್ತವೆ. ಆದರೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಎಂಆರ್‌ಐ ಮತ್ತು ಸಿಟಿ ಸ್ಕ್ಯಾನಿಂಗ್ ಸೆಂಟರ್ ಗಳಿಲ್ಲ.
  • ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಎಂಆರ್‌ಐ ಮತ್ತು ಸಿಟಿ ಸ್ಕ್ಯಾನಿಂಗ್ ಸೆಂಟರ್ ಗಳನ್ನು ನಿರ್ಮಾಣ ಮಾಡಲು ನಿರ್ಧರಿಸಿದೆ.
  • ಎಂಆರ್‌ಐ ಮತ್ತು ಸಿಟಿ ಸ್ಕ್ಯಾನಿಂಗ್ ಗಳಿಗಾಗಿ ಬೇರೆ ಮಹಾನಗರಗಳಿಗೆ ಓಡಾಡಬೇಕಾದ ಕಷ್ಟ ತಪ್ಪಿಸಿ ಹತ್ತಿರದ ಊರುಗಳಲ್ಲೇ ಈ ಸೇವೆಗಳು ಸಿಗುವಂತಾಗಬೇಕು ಎಂದು ನಿರ್ಧರಿಸಿದೆ.
BPL Card ಹೊಂದಿರುವವರಿಗೆ ಗುಡ್ ನ್ಯೂಸ್: ಇನ್ಮುಂದೆ ನಿಮ್ಮ ಜಿಲ್ಲಾ ಕೇಂದ್ರಗಳಲ್ಲೇ ಸಿಗುತ್ತೆ ಈ ಎಲ್ಲಾ ಪ್ರಯೋಜನಗಳು! title=

BPL Card: ರಾಜ್ಯದ ಎಷ್ಟೋ ಜಿಲ್ಲಾ ಕೇಂದ್ರಗಳಲ್ಲಿ ಈಗಲೂ ಎಂಆರ್‌ಐ ಮತ್ತು ಸಿಟಿ ಸ್ಕ್ಯಾನಿಂಗ್ ಸೆಂಟರ್ ಗಳಿಲ್ಲ. ಪರಿಣಾಮಯಾಗಿ ಈ ಸೇವೆಗಳಿಗಾಗಿ ದೂರದ ಮಹಾನಗರಗಳಿಗೆ ಅಲೆದಾಡಬೇಕಾದ ಪರಿಸ್ಥಿತಿ ಇದೆ. ಆದರೀಗ ರಾಜ್ಯ ಸರ್ಕಾರ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಎಂಆರ್‌ಐ ಮತ್ತು ಸಿಟಿ ಸ್ಕ್ಯಾನಿಂಗ್ ಸೆಂಟರ್ ಗಳನ್ನು ತೆರೆಯುತ್ತಿದ್ದು ಇದು ನಿಜಕ್ಕೂ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಸಿಹಿ ಸುದ್ದಿಯಾಗಿದೆ.

ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದ ಸದಸ್ಯರಿಗೆ ಎಂಆರ್‌ಐ ಮತ್ತು ಸಿಟಿ ಸ್ಕ್ಯಾನಿಂಗ್ ಸೇವೆಗಳು ಉಚಿತವಾಗಿ ಸಿಗುತ್ತವೆ. ಆದರೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಎಂಆರ್‌ಐ ಮತ್ತು ಸಿಟಿ ಸ್ಕ್ಯಾನಿಂಗ್ ಸೆಂಟರ್ ಗಳಿಲ್ಲ. ಈ ಗಂಭೀರ ಸಮಸ್ಯೆಯನ್ನು ಅರಿತ ರಾಜ್ಯ ಸರ್ಕಾರ ಈಗ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ  ಎಂಆರ್‌ಐ ಮತ್ತು ಸಿಟಿ ಸ್ಕ್ಯಾನಿಂಗ್ ಸೆಂಟರ್ ಗಳನ್ನು ಸ್ಥಾಪಿಸುತ್ತಿದೆ. ಇದರಿಂದಾಗಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಹಲವು ಪ್ರಯೋಜನಗಳು ಲಭಿಸುವಂತಾಗುತ್ತದೆ.

ಇದನ್ನೂ ಓದಿ- Free Electricity Bill: ಕೇಂದ್ರ ಸರಕಾರದಿಂದ ಬಂಪರ್ ಆಫರ್: 300 ಯೂನಿಟ್ ಉಚಿತ ವಿದ್ಯುತ್, 78,000 ರೂ.ವರೆಗೆ ಸಬ್ಸಿಡಿ!

ಗುರುವಾರ (ಜನವರಿ 16)  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಎಂಆರ್‌ಐ ಮತ್ತು ಸಿಟಿ ಸ್ಕ್ಯಾನಿಂಗ್ ಸೆಂಟರ್ ಗಳನ್ನು ನಿರ್ಮಾಣ ಮಾಡಬೇಕು. ಆ ಮೂಲಕ ಜನರು ಎಂಆರ್‌ಐ ಮತ್ತು ಸಿಟಿ ಸ್ಕ್ಯಾನಿಂಗ್ ಗಳಿಗಾಗಿ ಬೇರೆ ಮಹಾನಗರಗಳಿಗೆ ಓಡಾಡಬೇಕಾದ ಕಷ್ಟವನ್ನು ತಪ್ಪಿಸಬೇಕು. ಜನರಿಗೆ ಅವರ ಹತ್ತಿರದ ಊರು-ಪಟ್ಟಣಗಳಲ್ಲೇ ಎಂಆರ್‌ಐ ಮತ್ತು ಸಿಟಿ ಸ್ಕ್ಯಾನಿಂಗ್ ಸೇವೆಗಳು ಸಿಗುವಂತಾಗಬೇಕು ಎಂದು ನಿರ್ಧಾರ ಮಾಡಿದೆ. 

ಇದನ್ನೂ ಓದಿ- ಗೃಹಲಕ್ಷ್ಮೀ ಯೋಜನೆಯಂತೆ ಮೋದಿ ಸರ್ಕಾರದಿಂದಲೂ ಮನೆಯೊಡತಿಗೆ ಹಣ: 2025ರ ಬಜೆಟ್ ನಲ್ಲಿ ಘೋಷಣೆ ಸಾಧ್ಯತೆ!

ಜಿಲ್ಲಾ ಆಸ್ಪತ್ರೆಗಳಲ್ಲೇ ಎಂಆರ್‌ಐ ಮತ್ತು ಸಿಟಿ ಸ್ಕ್ಯಾನಿಂಗ್ ಸೆಂಟರ್ ಗಳಿದ್ದರೆ ಮೊದಲನೆಯದಾಗಿ ಜನರಿಗೆ ಸುಲಭವಾಗಿ ಆರೋಗ್ಯ ಸೇವೆಗಳು ಸಿಗುವಂತಾಗುತ್ತವೆ. ಇತ್ತೀಚಿಗೆ ಹಲವಾರು ಅರೋಗ್ಯ ಸಮಸ್ಯೆಗಳಿಗೆ ಎಂಆರ್‌ಐ ಮತ್ತು ಸಿಟಿ ಸ್ಕ್ಯಾನಿಂಗ್ ಮಾಡಿಸುವುದು ಅನಿವಾರ್ಯವಾಗಿರುವುದರಿಂದ ಇದು ಅತ್ಯಂತ ಉಪಯೋಗಿ ಕ್ರಮವಾಗಿದೆ. ಜೊತೆಗೆ ಮಹಾನಗರಗಳ ಆಸ್ಪತ್ರೆ ಮೇಲಿನ ಒತ್ತಡವನ್ನು ಕಡಿಮೆ ಮಾಡಿದಂತಾಗುತ್ತದೆ ಎನ್ನುವ ಅಭಿಪ್ರಾಯಗಳು ವ್ಯಕ್ತವಾಗಿವೆ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News