Good News: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC) ಸಿಬ್ಬಂದಿಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಇದು ತಿಂಗಳಿಗೆ ಸರಿಯಾಗಿ ಸಂಬಳ ಸಿಗದೆ ಪರಿತಪಿಸುತ್ತಿದ್ದ ಹಿಂದುಳಿದ ಪ್ರದೇಶ ಕಲ್ಯಾಣ ಕರ್ನಾಟಕ ಭಾಗದ ಕೆಕೆಆರ್ ಟಿಸಿ ಸಿಬ್ಬಂದಿಗೆ ಸಿಹಿ ಸುದ್ದಿಯಾಗಿ ಪರಿಣಮಿಸಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಪ್ರತಿ ತಿಂಗಳು 1ನೇ ತಾರೀಖು ಎಲ್ಲಾ ಸಿಬ್ಬಂದಿಗೆ ಸಂಬಳ ಆಗುತ್ತದೆ. ಆದರೆ ಬೇರೆ ನಿಗಮಗಳಲ್ಲಿ ತಿಂಗಳ ಆರಂಭದಲ್ಲಿ ಸಂಬಳ ಆಗುತ್ತಿರಲಿಲ್ಲ. ನಿಗದಿತ ಸಮಯವೂ ಇರಲಿಲ್ಲ. ಈ ಸಮಸ್ಯೆಯನ್ನು ಮನಗೊಂಡ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು ಈಗ ಪ್ರತಿ ತಿಂಗಳು 1ನೇ ತಾರೀಖಿನಂದೇ ಎಲ್ಲಾ ಸಿಬ್ಬಂದಿಗೆ ಸಂಬಳ ನೀಡಲು ನಿರ್ಧರಿಸಿದೆ.
ಇದನ್ನೂ ಓದಿ- ಶ್ರೀರಾಮಚಂದ್ರ ಮತ್ತು ಲಕ್ಷಣ್ ಹೆಸರಿನ ಬ್ಯಾಂಕ್ ಚೆಕ್ ಭಾರೀ ವೈರಲ್!
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಎಲ್ಲಾ ಸಿಬ್ಬಂದಿಗೆ ಪ್ರತಿ ತಿಂಗಳು 1ನೇ ತಾರೀಖಿನಂದೇ ಸಂಬಳ ನೀಡಲು ಸಾಮಾನ್ಯ ಸ್ಥಾಯಿ ಆದೇಶ ಸಂಖ್ಯೆ 817ರ ಅನ್ವಯ ವೇತನ ಪಾವತಿಸುವಂತೆ ಸೂಚಿಸಲಾಗಿದೆ. ಈವರೆಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗೆ ತಿಂಗಳ 3 ಅಥವಾ 4ನೇ ವಾರದಲ್ಲಿ ಸಂಬಳ ಆಗುತ್ತಿದ್ದುದರಿಂದ ಅವರು ತೀವ್ರ ತೊಂದರೆ ಅನುaಭವಿಸುತ್ತಿದ್ದರು. ಈಗ ಅದಕ್ಕೆ ಪರಿಹಾರ ಸಿಕ್ಕಂತಾಗಿದೆ.
ಇದನ್ನೂ ಓದಿ- 2025ರ ಬಜೆಟ್ನಲ್ಲಿ ಹಳೆ ತೆರಿಗೆ ಪದ್ಧತಿ ಬದಲಿಸ್ತಾರಾ ನಿರ್ಮಲಾ ಸೀತಾರಾಮನ್? ತೆರಿಗೆದಾರರ ಮೇಲೆ ಏನು ಪರಿಣಾಮ..!
ಸಾಮಾನ್ಯ ಸ್ಥಾಯಿ ಆದೇಶ ಸಂಖ್ಯೆ 817ರ ಅನ್ವಯ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಎಲ್ಲಾ ಸಿಬ್ಬಂದಿಗೆ ಪ್ರತಿ ತಿಂಗಳು 1ನೇ ತಾರೀಖಿನಂದೇ ಸಂಬಳ ನೀಡಬೇಕು ಎಂದು ನಿರ್ದೇಶಿಸಿರುವ ನಿಗಮದ ಮುಖ್ಯ ಲೆಕ್ಕಾಧಿಕಾರಿಗಳು ಈ ಆದೇಶದನ್ವಯ ಪ್ರತಿ ತಿಂಗಳ 1ನೇ ತಾರೀಖಿನಂದೇ ಸಂಬಳ ನೀಡದಿದ್ದರೆ ಸಂಬಂಧಪಟ್ಟವರನ್ನು ನೇರ ಹೊಣೆ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.