ಸನ್ಸೇರಾ ಕಂಪನಿಯಿಂದ ₹2,100 ಕೋಟಿ ಹೂಡಿಕೆ, ಒಡಂಬಡಿಕೆಗೆ ಸಹಿ: ಸುಮಾರು 3,500 ಉದ್ಯೋಗ ಸೃಷ್ಟಿ ನಿರೀಕ್ಷೆ

ಎಲಿವೇಟರುಗಳನ್ನು ತಯಾರಿಸುವ ಓಟಿಸ್ ಕಂಪನಿ ಕೂಡ ರಾಜ್ಯದಲ್ಲಿ 135 ಕೋಟಿ ರೂಪಾಯಿ ಹೂಡಲು ಒಲವು ವ್ಯಕ್ತಪಡಿಸಿದೆ ಎಂದು ಸಚಿವರು ತಿಳಿಸಿದ್ದಾರೆ. ಈ ಸಂಬಂಧವಾಗಿ ಕಂಪನಿಯ ಹಿರಿಯ ನಿರ್ದೇಶಕ ರವಿಶಂಕರ್ ನೇತೃತ್ವದ ತಂಡದೊಂದಿಗೆ ಮಾತುಕತೆ ನಡೆಸಿದರು.

Written by - Yashaswini V | Last Updated : Jul 31, 2024, 02:13 PM IST
  • ಕಂಪನಿಯು ರಾಮನಗರ ಜಿಲ್ಲೆಯ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ 55 ಎಕರೆ ಪ್ರದೇಶದಲ್ಲಿ ತನ್ನ ಉತ್ಪಾದನಾ ಘಟಕ ಆರಂಭಿಸಲಿದೆ.
  • ಇದರಿಂದ ರಾಜ್ಯದ ರಫ್ತು ವಹಿವಾಟಿಗೂ ಅನುಕೂಲ ಆಗಲಿದೆ ಎಂದು ಸಚಿವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.
  • ಕಂಪನಿಯು ದೇಶದಲ್ಲಿ 16 ತಯಾರಿಕಾ ಘಟಕಗಳನ್ನು ಹೊಂದಿದ್ದು, ಅವುಗಳ ಪೈಕಿ 12 ಘಟಕಗಳು ರಾಜ್ಯದಲ್ಲೇ ಇವೆ ಎಂದು ಅವರು ಮಾಹಿತಿ ನೀಡಿದರು.
ಸನ್ಸೇರಾ ಕಂಪನಿಯಿಂದ ₹2,100 ಕೋಟಿ ಹೂಡಿಕೆ, ಒಡಂಬಡಿಕೆಗೆ ಸಹಿ: ಸುಮಾರು 3,500 ಉದ್ಯೋಗ ಸೃಷ್ಟಿ ನಿರೀಕ್ಷೆ  title=

ಬೆಂಗಳೂರು: ವಾಹನಗಳ ಮತ್ತು ವೈಮಾನಿಕ‌ ಬಿಡಿಭಾಗಗಳನ್ನು ತಯಾರಿಸುವ ಸನ್ಸೇರಾ ಕಂಪನಿಯು ರಾಜ್ಯದಲ್ಲಿ ₹2,100 ಕೋಟಿ ಹೂಡಲಿದೆ. ಈ ಸಂಬಂಧ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಅವರ ಸಮ್ಮುಖದಲ್ಲಿ ಬುಧವಾರ (ಜುಲೈ 31) ಒಡಂಬಡಿಕೆಗೆ ಅಂಕಿತ ಹಾಕಲಾಯಿತು.

ಖನಿಜ ಭವನದಲ್ಲಿ ನಡೆದ ಸಮಾರಂಭದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಸೆಲ್ವಕುಮಾರ್ ಮತ್ತು ಸೆನ್ಸೇರಾ ಕಂಪನಿಯ ಸಿಇಒ ಶೇಖರ್ ವಾಸನ್ ಒಡಂಬಡಿಕೆಗೆ ಸಹಿ ಹಾಕಿದರು.

ಈ ಸಂದರ್ಭದಲ್ಲಿ ಮಾತನಾಡಿದ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ (Heavy and Medium Industries Minister MB Patil), ಸನ್ಸೇರಾ ಎಂಜಿನಿಯರಿಂಗ್ ಲಿಮಿಟೆಡ್ ಸಂಸ್ಥೆಯು ಮುಂದಿನ ಐದು ವರ್ಷಗಳಲ್ಲಿ ಹಂತಹಂತವಾಗಿ ಈ ಹೂಡಿಕೆ ಮಾಡಲಿದೆ. ಇದರಿಂದ 3,500 ಉದ್ಯೋಗಗಳು ಸೃಷ್ಟಿ ಆಗಲಿವೆ ಎಂದರು.

ಇದನ್ನೂ ಓದಿ- ಉಳಿತಾಯ ಖಾತೆಯಲ್ಲಿ ಎಫ್‌ಡಿ ಬಡ್ಡಿ ಪಡೆಯಲು ನಿಮ್ಮ ಖಾತೆಗೆ ಇಂದೇ ಸೇರಿಸಿ ಈ ವೈಶಿಷ್ಟ್ಯ!

ಕಂಪನಿಯು ರಾಮನಗರ ಜಿಲ್ಲೆಯ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ 55 ಎಕರೆ ಪ್ರದೇಶದಲ್ಲಿ ತನ್ನ ಉತ್ಪಾದನಾ ಘಟಕ ಆರಂಭಿಸಲಿದೆ. ಇದರಿಂದ ರಾಜ್ಯದ ರಫ್ತು ವಹಿವಾಟಿಗೂ ಅನುಕೂಲ ಆಗಲಿದೆ ಎಂದು ಸಚಿವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು. 

ಕಂಪನಿಯು ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ತರಬೇತಿ ಕೇಂದ್ರ ಆರಂಭಿಸಲಿದ್ದು, ಇದರಿಂದ ಸ್ಥಳೀಯರ ಕೌಶಲ ವೃದ್ಧಿಯಾಗಲಿದೆ. ಕಂಪನಿಯು ದೇಶದಲ್ಲಿ 16 ತಯಾರಿಕಾ  ಘಟಕಗಳನ್ನು ಹೊಂದಿದ್ದು, ಅವುಗಳ ಪೈಕಿ 12 ಘಟಕಗಳು ರಾಜ್ಯದಲ್ಲೇ ಇವೆ ಎಂದು ಅವರು ಮಾಹಿತಿ ನೀಡಿದರು.  

ಕಾರ್ಯಕ್ರಮದಲ್ಲಿ ವಾಣಿಜ್ಯ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಕಂಪನಿಯ ಜಂಟಿ ವ್ಯವಸ್ಥಾಪಕ ನಿರ್ದೇಶಕ ಎಫ್‌. ಆರ್‌. ಸಿಂಘ್ವಿ, ಕಾರ್ಯದರ್ಶಿ ರಾಜೇಶ್‌ ಮೋದಿ ಉಪಸ್ಥಿತರಿದ್ದರು.

ಇದನ್ನೂ ಓದಿ- ಬಂಜರು ಭೂಮಿಯಲ್ಲಿ 'ಚಿನ್ನ' ಬೆಳೆದ್ರಾ ಮುಖೇಶ್ ಅಂಬಾನಿ! ಇಲ್ಲಿದೆ ರೋಚಕ ಸ್ಟೋರಿ

ಓಟಿಸ್ ಕಂಪನಿಯಿಂದ ₹135 ಕೋಟಿ ಹೂಡಿಕೆ: 
ಎಲಿವೇಟರುಗಳನ್ನು ತಯಾರಿಸುವ ಓಟಿಸ್ ಕಂಪನಿ ಕೂಡ ರಾಜ್ಯದಲ್ಲಿ 135 ಕೋಟಿ ರೂಪಾಯಿ ಹೂಡಲು ಒಲವು ವ್ಯಕ್ತಪಡಿಸಿದೆ ಎಂದು ಸಚಿವರು ತಿಳಿಸಿದ್ದಾರೆ. ಈ ಸಂಬಂಧವಾಗಿ ಕಂಪನಿಯ ಹಿರಿಯ ನಿರ್ದೇಶಕ ರವಿಶಂಕರ್ ನೇತೃತ್ವದ ತಂಡದೊಂದಿಗೆ ಮಾತುಕತೆ ನಡೆಸಿದರು.

ಇದಕ್ಕಾಗಿ ಕಂಪನಿಯು ಹಾರೋಹಳ್ಳಿಯಲ್ಲಿ 12 ಎಕರೆ ಭೂಮಿಯನ್ನು ಕೇಳಿದ್ದು, ಇದನ್ನು ಒದಗಿಸಲಾಗುವುದು. ಇದರಿಂದ 200ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ ಆಗಲಿದೆ ಎಂದು ಅವರು ಮಾಹಿತಿ ನೀಡಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News