ಇನ್ಮುಂದೆ ಕೇವಲ 500 ರೂ.ಗೆ ಗ್ಯಾಸ್ ಸಿಲಿಂಡರ್… ಫಲಾನುಭವಿಗಳಾಗಲು ಈ ಪ್ರಕ್ರಿಯೆ ಕಡ್ಡಾಯ! ಕಂಪ್ಲೀಟ್ ಡೀಟೆಲ್ಸ್ ಹೀಗಿದೆ

Mahalakshmi Scheme Gas Cylinder: ತೇಜಸ್ವಿ ಗ್ಯಾಸ್ ಸಂಪರ್ಕ ಹೊಂದಿರುವವರಿಗೂ ಈ ಯೋಜನೆ ಸಿಗಲಿದೆ. ಈ ಕಾರ್ಯಕ್ರಮದಲ್ಲಿ ತೆಲಂಗಾಣ ನಾಗರಿಕ ಸರಬರಾಜು ಅಧಿಕಾರಿಗಳು ಹಲವು ಸಲಹೆಗಳನ್ನು ನೀಡಿದ್ದಾರೆ. ಫಲಾನುಭವಿಗಳು ಗ್ಯಾಸ್ ಸಿಲಿಂಡರ್ ವಿತರಣೆಯ ಸಮಯದಲ್ಲಿ ಪೂರ್ಣ ಮೊತ್ತವನ್ನು ಪಾವತಿಸಬೇಕು.

Written by - Bhavishya Shetty | Last Updated : Feb 26, 2024, 04:07 PM IST
    • ತೆಲಂಗಾಣದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ
    • ಮಹಿಳೆಯರಿಗೆ ಈಗಾಗಲೇ ಉಚಿತ ಬಸ್ ಪ್ರಯಾಣದ ವ್ಯವಸ್ಥೆ
    • ತೇಜಸ್ವಿ ಗ್ಯಾಸ್ ಸಂಪರ್ಕ ಹೊಂದಿರುವವರಿಗೂ ಈ ಯೋಜನೆ ಸಿಗಲಿದೆ
ಇನ್ಮುಂದೆ ಕೇವಲ 500 ರೂ.ಗೆ ಗ್ಯಾಸ್ ಸಿಲಿಂಡರ್… ಫಲಾನುಭವಿಗಳಾಗಲು ಈ ಪ್ರಕ್ರಿಯೆ ಕಡ್ಡಾಯ! ಕಂಪ್ಲೀಟ್ ಡೀಟೆಲ್ಸ್ ಹೀಗಿದೆ title=
Gas Cylinder

Mahalakshmi Scheme Gas Cylinder: ತೆಲಂಗಾಣದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ಆಡಳಿತದಲ್ಲಿ ತನ್ನದೇ ಆದ ಛಾಪು ಮೂಡಿಸಲು ಪ್ರಯತ್ನಿಸುತ್ತಿದೆ. ಮಹಿಳೆಯರಿಗೆ ಈಗಾಗಲೇ ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಮಾಡಲಾಗಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇತ್ತೀಚೆಗೆ ಇನ್ನೆರಡು ಗ್ಯಾರಂಟಿಗಳನ್ನು ಜಾರಿಗೆ ತರಲಾಗಿದೆ. ಅದರಲ್ಲಿ ಒಂದು ಮಹಾಲಕ್ಷ್ಮಿ ಯೋಜನೆ. ಇದರ ಸಲುವಾಗಿ ಇದೇ ತಿಂಗಳ 27ರಂದು ರೂ. 500ಗೆ ಗ್ಯಾಸ್ ಸಿಲಿಂಡರ್ ಒದಗಿಸಲು ಯೋಜನೆ ಆರಂಭಿಸಲಾಗುತ್ತದೆ.

ಇದನ್ನೂ ಓದಿ: ನಿದ್ರಾದೇವಿ Next Door: ಪ್ರವೀರ್ ಶೆಟ್ಟಿ-ಶೈನ್ ಶೆಟ್ಟಿ ಹೊಸ ಚಿತ್ರಕ್ಕೆ ಕ್ರೇಜಿಸ್ಟಾರ್ ಕ್ಲಾಪ್

ತೇಜಸ್ವಿ ಗ್ಯಾಸ್ ಸಂಪರ್ಕ ಹೊಂದಿರುವವರಿಗೂ ಈ ಯೋಜನೆ ಸಿಗಲಿದೆ. ಈ ಕಾರ್ಯಕ್ರಮದಲ್ಲಿ ತೆಲಂಗಾಣ ನಾಗರಿಕ ಸರಬರಾಜು ಅಧಿಕಾರಿಗಳು ಹಲವು ಸಲಹೆಗಳನ್ನು ನೀಡಿದ್ದಾರೆ. ಫಲಾನುಭವಿಗಳು ಗ್ಯಾಸ್ ಸಿಲಿಂಡರ್ ವಿತರಣೆಯ ಸಮಯದಲ್ಲಿ ಪೂರ್ಣ ಮೊತ್ತವನ್ನು ಪಾವತಿಸಬೇಕು. ಆ ಬಳಿಕ 500 ರೂ. ಅನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:  17 ವರ್ಷಗಳ ಪರಂಪರೆ… ಕ್ರಿಕೆಟ್ ಚರಿತ್ರೆಯಲ್ಲಿ ಈ ಶ್ರೇಷ್ಠ ದಾಖಲೆ ಬರೆದ ವಿಶ್ವದ ಮೊದಲ ದೇಶ ಭಾರತ!

ಹೆಚ್ಚುವರಿ ಸಾರಿಗೆ ಶುಲ್ಕ ಸೇರಿದಂತೆ ಉಳಿದ ಮೊತ್ತವನ್ನು ಸರಕಾರವೇ ಭರಿಸಲಿದೆ ಎನ್ನಲಾಗಿದೆ. ಇದೇ ವೇಳೆ ಸಿಎಂ ರೇವಂತ್ ರೆಡ್ಡಿ ಭಾನುವಾರ ತೈಲ ಮಾರುಕಟ್ಟೆ ಕಂಪನಿಗಳೊಂದಿಗೆ ಸಭೆ ನಡೆಸಿದ್ದಾರೆ. ಇನ್ನೊಂದೆಡೆ ಕೂಡಲೇ ಯೋಜನೆ ಅನುಷ್ಠಾನಕ್ಕೆ 80 ಕೋಟಿ ಬಿಡುಗಡೆಗೆ ಅವಕಾಶ ನೀಡಿ ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News