PM Kisan ಇ-ಕೆವೈಸಿ ಪೂರ್ಣಗೊಳಿಸುವಾಗ ನೆನಪಿರಲಿ ಈ ವಿಷಯಗಳು, ಇಲ್ಲದಿದ್ರೆ ಸಿಗಲ್ಲ 17ನೇ ಕಂತು

PM Kisan New update: ದೇಶದ ಕೋಟ್ಯಾಂತರ ರೈತರು ಪಿಎಂ ಕಿಸಾನ್‌ ಯೋಜನೆಯ 17ನೇ ಕಾಂತಿಗಾಗಿ ಕಾಯುತ್ತಿದ್ದಾರೆ. ಆದರೆ, ಇದಕ್ಕಾಗಿ ರೈತರು ಇ-ಕೆವೈಸಿ ಪೂರ್ಣಗೊಳಿಸುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲ, ಇ-ಕೆವೈಸಿ ಪೂರ್ಣಗೊಳಿಸುವ ವೇಳೆ ಕೆಲವು ವಿಷಯಗಳ ಬಗ್ಗೆ ಎಚ್ಚರಿಕೆ ವಹಿಸುವುದು ಕೂಡ ಅತ್ಯಗತ್ಯವಾಗಿದೆ. 

Written by - Yashaswini V | Last Updated : May 21, 2024, 11:57 AM IST
  • ಪಿಎಂ ಕಿಸಾನ್ ಯೋಜನೆಯ ಫಲಾನುಭವಿ ಆಗಿದ್ದು ಇನ್ನೂ ಇ-ಕೆವೈಸಿ ಪೂರ್ಣಗೊಳಿಸದಿದ್ದರೆ ಕೂಡಲೇ ಈ ಕೆಲಸವನ್ನು ಪೂರ್ಣಗೊಳಿಸುವುದು ಅವಶ್ಯಕ.
  • ಅಷ್ಟೇ ಅಲ್ಲ, ಪಿಎಂ ಕಿಸಾನ್ ಇ-ಕೆವೈಸಿ ಪೂರ್ಣಗೊಳಿಸುವಾಗ ಕೆಲವು ವಿಷಯಗಳನ್ನು ನೆನಪಿನಲ್ಲಿಡುವುದು ಅವಶ್ಯಕ
  • ಇವುಗಳನ್ನು ನಿರ್ಲಕ್ಷಿಸಿದರೆ ನೀವು ಭಾರೀ ನಷ್ಟವನ್ನು ಅನುಭವಿಸಬೇಕಾಗಬಹುದು.
PM Kisan ಇ-ಕೆವೈಸಿ ಪೂರ್ಣಗೊಳಿಸುವಾಗ ನೆನಪಿರಲಿ ಈ ವಿಷಯಗಳು, ಇಲ್ಲದಿದ್ರೆ ಸಿಗಲ್ಲ 17ನೇ ಕಂತು  title=

PM Kisan: ದೇಶದ ರೈತರಿಗೆ ಸಹಾಯಕವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ, ಪ್ರತಿ ರೈತರಿಗೆ ವಾರ್ಷಿಕವಾಗಿ   ₹ 6000 ಧನ ಸಹಾಯವನ್ನು ನೀಡುತ್ತದೆ. ಈ ಹಣವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುತ್ತದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ಇದುವರೆಗೂ ದೇಶದ 11 ಕೋಟಿ ರೈತ ಕುಟುಂಬಗಳು ಈ ಯೋಜನೆಯ ಪ್ರಯೋಜನವನ್ನು ಪಡೆದಿವೆ. ಸದ್ಯ  ದೇಶದ ರೈತರು ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ. ಆದರೆ, ಪಿಎಂ ಕಿಸಾನ್ ಯೋಜನೆಯ ಮುಂದಿನ ಕಂತನ್ನು ಪಡೆಯಲು ಇ-ಕೆವೈಸಿ (e-KYC) ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. 

ನೀವು ಪಿಎಂ ಕಿಸಾನ್ ಯೋಜನೆಯ (PM Kisan Yojane) ಫಲಾನುಭವಿ ಆಗಿದ್ದು ಇನ್ನೂ ಇ-ಕೆವೈಸಿ ಪೂರ್ಣಗೊಳಿಸದಿದ್ದರೆ ಕೂಡಲೇ ಈ ಕೆಲಸವನ್ನು ಪೂರ್ಣಗೊಳಿಸುವುದು ಅವಶ್ಯಕ. ಅಷ್ಟೇ ಅಲ್ಲ, ಪಿಎಂ ಕಿಸಾನ್ ಇ-ಕೆವೈಸಿ (PM Kisan e-KYC) ಪೂರ್ಣಗೊಳಿಸುವಾಗ ಕೆಲವು ವಿಷಯಗಳನ್ನು ನೆನಪಿನಲ್ಲಿಡುವುದು ಅವಶ್ಯಕವಾಗಿದ್ದು, ಇವುಗಳನ್ನು ನಿರ್ಲಕ್ಷಿಸಿದರೆ ನೀವು ಭಾರೀ ನಷ್ಟವನ್ನು ಅನುಭವಿಸಬೇಕಾಗಬಹುದು. 

ಪಿಎಂ ಕಿಸಾನ್:  ಇ-ಕೆವೈಸಿ ಮಾಡುವಾಗ ನೆನಪಿದಬೇಕಾದ ಅಂಶಗಳೆಂದರೆ: 
ಸಕ್ರಿಯ ಮೊಬೈಲ್ ಸಂಖ್ಯೆ: 

ಪಿಎಂ ಕಿಸಾನ್ ಫಲಾನುಭವಿಗಳು ಇ-ಕೆವೈಸಿ (PM Kisan Beneficiaries e-KYC) ಪೂರ್ಣಗೊಳಿಸುವ ಮೊದಲು ನಿಮ್ಮ ಆಧಾರ್ ಕಾರ್ಡ್‌ಗೆ ಲಿಂಕ್ ಮಾಡಲಾಗಿರುವ ಮೊಬೈಲ್ ನಂಬರ್ ಸಕ್ರಿಯವಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. 

ಇದನ್ನೂ ಓದಿ- ಎಟಿಎಂನಿಂದ ಹಣ ವಿತ್ ಡ್ರಾ ಅಷ್ಟೇ ಅಲ್ಲ, ಈ ಕೆಲಸಗಳಲ್ಲೂ ಮಾಡಬಹುದು

ಬಯೋಮೆಟ್ರಿಕ್ ಪರಿಶೀಲನೆ: 
ಇ-ಕೆವೈಸಿ ಪರಿಶೀಲನೆ ವೇಳೆ ಆಧಾರ್ ಒಟಿಪಿ ಪಡೆಯಲು ಸಾಧ್ಯವಾಗದಿದ್ದರೆ ಅಂತಹ ಸಂದರ್ಭದಲ್ಲಿ ಬಯೋಮೆಟ್ರಿಕ್ ಪರಿಶೀಲನೆ ಮಾಡಬಹುದು ಎಂಬುದನ್ನೂ ನೆನಪಿನಲ್ಲಿಡಿ. 

ಸಿ‌ಎಸ್‌ಸಿ ಕೇಂದ್ರಕ್ಕೆ ಭೇಟಿ ನೀಡಿ: 
ಒಂದೊಮ್ಮೆ ಪಿಎಂ ಕಿಸಾನ್ ಪೋರ್ಟಲ್ (PM Kisan Portal) ನಲ್ಲಿ ಆನ್ಲೈನ್ ಮೂಲಕ ನಿಮ್ಮ ಇ-ಕೆವೈಸಿ ಪೂರ್ಣಗೊಳಿಸಲು ಸಾಧ್ಯವಾಗದಿದ್ದರೆ ಅಂತಹ ಸಂದರ್ಭದಲ್ಲಿ ನಿಮ್ಮ ಹತ್ತಿರದ ಸಿ‌ಎಸ್‌ಸಿ ಕೇಂದ್ರಕ್ಕೆ ಭೇಟಿ ನೀಡುವ ಮೂಲಕ ಈ ಕೆಲಸವನ್ನು ಪೂರ್ಣಗೊಳಿಸಿ. 

ಇದನ್ನೂ ಓದಿ- ಆರ್‌ಬಿಐ ಗವರ್ನರ್ ಮತ್ತು ಎಸ್‌ಬಿಐ ಮುಖ್ಯಸ್ಥ ಇವರಿಬ್ಬರಲ್ಲಿ ಹೆಚ್ಚು ವೇತನ ಯಾರಿಗೆ ? ಯಾರ ವಿದ್ಯಾರ್ಹತೆ ಎಷ್ಟು ? 

ಸ್ಥಿತಿ ಪರಿಶೀಲನೆ: 
ನೀವು ಇ-ಕೆವೈಸಿಯನ್ನು ಪೂರ್ಣಗೊಳಿಸಿದ ನಂತರ ಪಿಎಂ ಕಿಸಾನ್  ಪೋರ್ಟಲ್‌ನಲ್ಲಿ ನಿಮ್ಮ ಇ-ಕೆವೈಸಿ ಸ್ಥಿತಿಯನ್ನು ಪರಿಶೀಲಿಸಬಹುದಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News