ಬ್ಯಾಂಕ್ ಗ್ರಾಹಕರಿಗೆ ಸಂತಸದ ಸುದ್ದಿ ಪ್ರಕಟಿಸಿದ ಆರ್‌ಬಿಐ ! ಸಾಲ ಪಡೆದವರು ಈಗ ನಿರಾಳ

RBI Repo Rate: ರೆಪೊ ದರವನ್ನು ಶೇ.6.5ರಲ್ಲೇ ಮುಂದುವರಿಸಲು ವಿತ್ತೀಯ ನೀತಿ ಸಮಿತಿ ಸರ್ವಾನುಮತದಿಂದ ನಿರ್ಧರಿಸಿದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ.  2022-23ರಲ್ಲಿ ಆರ್ಥಿಕ ಬೆಳವಣಿಗೆ ದರ ಶೇ.7 ಆಗಲಿದೆ ಎಂದು ಆರ್‌ಬಿಐ ಅಂದಾಜಿಸಿದೆ.

Written by - Ranjitha R K | Last Updated : Apr 6, 2023, 11:08 AM IST
  • ಏರುತ್ತಿರುವ ಬಡ್ಡಿ ದರದಿಂದ ಜನರಿಗೆ ರಿಲೀಫ್
  • ರೆಪೊ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
  • ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಮಾಹಿತಿ
ಬ್ಯಾಂಕ್ ಗ್ರಾಹಕರಿಗೆ ಸಂತಸದ ಸುದ್ದಿ ಪ್ರಕಟಿಸಿದ ಆರ್‌ಬಿಐ ! ಸಾಲ ಪಡೆದವರು ಈಗ ನಿರಾಳ  title=

Reserve Bank of India : ಕೆಲ ಸಮಯದಿಂದ ನಿರಂತರವಾಗಿ ಏರುತ್ತಿರುವ ಬಡ್ಡಿ ದರದಿಂದ  ಭಾರತೀಯ ರಿಸರ್ವ್ ಬ್ಯಾಂಕ್ ಜನರಿಗೆ ರಿಲೀಫ್ ನೀಡಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ದ್ವೈಮಾಸಿಕ ಹಣಕಾಸು ನೀತಿ ಪರಾಮರ್ಶೆಯ ನಂತರ ಆರ್‌ಬಿಐ ರೆಪೊ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆರ್‌ಬಿಐನಿಂದ ರೆಪೊ ದರವನ್ನು ಕೇವಲ 6.5 ಪ್ರತಿಶತದಲ್ಲಿಯೇ ಉಳಿಸಿಕೊಳ್ಳಲಾಗಿದೆ. ದ್ವೈಮಾಸಿಕ ಹಣಕಾಸು ನೀತಿ ಪರಾಮರ್ಶೆಯ ಮಾಹಿತಿಯನ್ನು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್,   ನೀಡಿದ್ದಾರೆ. 

ಹಿಂದಿನ ಮಟ್ಟದಲ್ಲಿಯೇ ಇರಿಸಲಾಗಿದೆ ರೆಪೊ ದರ : 
ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಮಾತನಾಡಿ, ರೆಪೊ ದರವನ್ನು ಶೇ.6.5ರಲ್ಲೇ ಮುಂದುವರಿಸಲು ವಿತ್ತೀಯ ನೀತಿ ಸಮಿತಿ ಸರ್ವಾನುಮತದಿಂದ ನಿರ್ಧರಿಸಿದೆ ಎಂದು ಹೇಳಿದ್ದಾರೆ. ಆರ್ಥಿಕತೆಯ ಬೆಳವಣಿಗೆಯನ್ನು ಮುಂದುವರಿಸಲು, ರೆಪೊ ದರವನ್ನು ಹಿಂದಿನ ಹಂತದಲ್ಲಿಯೇ ಉಳಿಸಿಕೊಳ್ಳಲಾಗಿದೆ. ಅಗತ್ಯ ಬಿದ್ದರೆ ಪರಿಸ್ಥಿತಿಗೆ ತಕ್ಕಂತೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಇದೇ ವೇಳೆ ಬ್ಯಾಂಕಿಂಗ್ ಮತ್ತು ಎನ್‌ಬಿಎಫ್‌ಸಿ ಹಣಕಾಸು ವ್ಯವಸ್ಥೆ ಬಲಿಷ್ಠವಾಗಿದೆ ಎಂದು ಆರ್‌ಬಿಐ ಗವರ್ನರ್  ತಿಳಿಸಿದ್ದಾರೆ. 

ಇದನ್ನೂ ಓದಿ : Gold Price: ಚಿನ್ನದ ಬೆಲೆಯಲ್ಲಿ ದಿಢೀರ್ ಏರಿಕೆ, 10 ಗ್ರಾಂ ದರ ಕೇಳಿದ್ರೆ ಶಾಕ್ ಆಗ್ತೀರಾ! ಬಂಗಾರ ಇನ್ನು ಕನಸು ಮಾತ್ರ

ಆರ್ಥಿಕ ಬೆಳವಣಿಗೆ ದರ ಶೇ.7 ತಲುಪುವ ನಿರೀಕ್ಷೆ : 
2022-23ರಲ್ಲಿ ಆರ್ಥಿಕ ಬೆಳವಣಿಗೆ ದರ ಶೇ.7 ಆಗಲಿದೆ ಎಂದು ಆರ್‌ಬಿಐ ಅಂದಾಜಿಸಿದೆ. ಹಣದುಬ್ಬರ ದರ ಇನ್ನೂ ಹೆಚ್ಚೇ ಇದೆ ಎಂದು ಆರ್‌ಬಿಐ ಗವರ್ನರ್ ಹೇಳಿದ್ದಾರೆ. ಹಣದುಬ್ಬರ ದರವನ್ನು ಹೆಚ್ಚಿಸದ ಕಾರಣ, ಮೇ 2022 ರಿಂದ ಪ್ರಾರಂಭವಾದ ಬಡ್ಡಿದರವನ್ನು ಹೆಚ್ಚಿಸುವ ಪ್ರಕ್ರಿಯೆಯು ಸ್ಥಗಿತಗೊಂಡಿದೆ. ಮೇ 2022 ರಿಂದ, ಕೇಂದ್ರ ಬ್ಯಾಂಕ್ ರೆಪೊ ದರವನ್ನು 2.5 ಪ್ರತಿಶತದಷ್ಟು ಹೆಚ್ಚಿಸಿದೆ.  

ಇದನ್ನೂ ಓದಿ : ಹಿರಿಯ ನಾಗರಿಕರಿಗೆ ಜಾಕ್‌ಪಾಟ್ ! ಹಿರಿಯ ಪ್ರಯಾಣಿಕರ ಟಿಕೆಟ್ ದರದಲ್ಲಿ ಮತ್ತಷ್ಟು ಇಳಿಕೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News