ಶೀಘ್ರದಲ್ಲೇ ಸರ್ಕಾರಿ ನೌಕರರಿಗೆ ಸಿಗಲಿದೆಯಾ ಈ ಸಂತಸದ ಸುದ್ದಿ !

Government Employees: ನಿವೃತ್ತಿ ವಯಸ್ಸನ್ನು ಹೆಚ್ಚಿಸಲು ಸರಕಾರದಿಂದ ಯೋಜನೆ ರೂಪಿಸಲಾಗುತ್ತಿದೆ ಎನ್ನಲಾಗಿದೆ. ಪಿಎಸ್‌ಬಿ ಮತ್ತು ಭಾರತೀಯ ಜೀವ ವಿಮಾ ನಿಗಮದ (ಎಲ್‌ಐಸಿ) ಮುಖ್ಯಸ್ಥರ ನಿವೃತ್ತಿ ವಯಸ್ಸಿನ ನಿರ್ಧಾರವನ್ನು ಶೀಘ್ರದಲ್ಲೇ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಬನ್ನಿ ಈ ಕುರಿತಾದ ವರದಿ ಏನು ಹೇಳುತ್ತದೆ ತಿಳಿದುಕೊಳ್ಳೋಣ (Business News In Kannada),   

Written by - Nitin Tabib | Last Updated : Aug 27, 2023, 01:50 PM IST
  • ಪಿಎಸ್‌ಬಿ ಮತ್ತು ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಮುಖ್ಯಸ್ಥರ ನಿವೃತ್ತಿ ವಯಸ್ಸನ್ನು ಹೆಚ್ಚಿಸುವ ಕುರಿತು ಚರ್ಚೆ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.
  • ಇದರೊಂದಿಗೆ ಪಿಎಸ್‌ಬಿ ಎಂಡಿಗಳ ನಿವೃತ್ತಿ ವಯಸ್ಸನ್ನು 60 ವರ್ಷದಿಂದ 62 ವರ್ಷಕ್ಕೆ ಹೆಚ್ಚಿಸುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ ಎನ್ನಲಾಗುತ್ತಿದೆ.
  • ಪಿಎಸ್‌ಬಿ ಮತ್ತು ಎಲ್‌ಐಸಿ ಮುಖ್ಯಸ್ಥರ ನಿವೃತ್ತಿ ವಯಸ್ಸಿನ ಕುರಿತು ಇನ್ನೂ ಅಂತಿಮ ನಿರ್ಧಾರ ಹೊರಬೀಳುವುದು ಬಾಕಿ ಇದೆ ಎಂದು ಅವರು ಹೇಳಿದ್ದಾರೆ.
ಶೀಘ್ರದಲ್ಲೇ ಸರ್ಕಾರಿ ನೌಕರರಿಗೆ ಸಿಗಲಿದೆಯಾ ಈ ಸಂತಸದ ಸುದ್ದಿ ! title=

ನವದೆಹಲಿ: ಕೇಂದ್ರ ಸರ್ಕಾರವು ಕಾಲಕಾಲಕ್ಕೆ ಸರ್ಕಾರಿ ನೌಕರರ ವೇತನ ಮತ್ತು ನಿವೃತ್ತಿ ವಯಸ್ಸಿಗೆ ಸಂಬಂಧಿಸಿದಂತೆ ವಿವಿಧ ತಿದ್ದುಪಡಿಗಳನ್ನು ಮಾಡುತ್ತದೆ. ಈಗ ಮತ್ತೊಮ್ಮೆ ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಮುಖ್ಯಸ್ಥರು ಮತ್ತು ಎಂಡಿಗಳ ನಿವೃತ್ತಿ ವಯಸ್ಸನ್ನು ಹೆಚ್ಚಿಸಲು ಸರ್ಕಾರ ಯೋಜಿಸುತ್ತಿದೆ, ಆದರೆ ಕೆಳ ಹಂತದ ಉದ್ಯೋಗಿಗಳಿಗೆ ಇದರ ಪ್ರಯೋಜನ ಸಿಗುವುದಿಲ್ಲ ಎನ್ನಲಾಗುತ್ತಿದೆ. 

ಎಲ್ಐಸಿ ಸೇರಿದಂತೆ ಈ ಮುಖ್ಯಸ್ಥರ ನಿವೃತ್ತಿ ವಯಸ್ಸು ಹೆಚ್ಚಾಗಬಹುದು
ಪಿಟಿಐನಿಂದ ಬಂದ ಮಾಹಿತಿ ಪ್ರಕಾರ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧ್ಯಕ್ಷ ದಿನೇಶ್ ಖಾರಾ ಅವರ ನಿವೃತ್ತಿಯ ವಯಸ್ಸು ವಿಸ್ತರಣೆಯಾಗುವ ಸಾಧ್ಯತೆಯಿದೆ, ಅಂದರೆ ಸರ್ಕಾರ ಅವರ ನಿವೃತ್ತಿಯ ವಯಸ್ಸನ್ನು ಹೆಚ್ಚಿಸಬಹುದು. ಸಾರ್ವಜನಿಕ ವಲಯದ ಬ್ಯಾಂಕ್‌ಗಳು (ಪಿಎಸ್‌ಬಿ) ಮತ್ತು ಎಲ್‌ಐಸಿ ಮುಖ್ಯಸ್ಥರ ನಿವೃತ್ತಿ ವಯಸ್ಸನ್ನು ಹೆಚ್ಚಿಸಲು ಸರ್ಕಾರ ಪರಿಗಣಿಸುತ್ತಿದೆ.

MD ಅವರ ನಿವೃತ್ತಿ ವಯಸ್ಸು 62 ಆಗುವ ಸಾಧ್ಯತೆ ಇದೆ
ಈ ಕುರಿತು ಮಾಹಿತಿ ನೀಡಿರುವ ಅನಾಮಧೇಯ ಹಿರಿಯ ಅಧಿಕಾರಿಯೊಬ್ಬರು, ಪಿಎಸ್‌ಬಿ ವ್ಯವಸ್ಥಾಪಕ ನಿರ್ದೇಶಕರ (ಎಂಡಿ) ನಿವೃತ್ತಿ ವಯಸ್ಸನ್ನು ಈಗಿರುವ 60 ವರ್ಷದಿಂದ 62 ವರ್ಷಕ್ಕೆ ಹೆಚ್ಚಿಸುವ ಪ್ರಸ್ತಾವನೆಯೂ ಸರ್ಕಾರದ ಮುಂದಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ-ಕಡಿಮೆ ವೆಚ್ಚದಲ್ಲಿ ಅತ್ಯುತ್ತಮ ಬಿಸ್ನೆಸ್ ಮಾಡುವ ಯೋಚನೆಯೇ? ಈ ವ್ಯಾಪಾರ ಪರಿಕಲ್ಪನೆ ಒಮ್ಮೆ ಟ್ರೈ ಮಾಡಿ!

2020 ರಲ್ಲಿ ಹುದ್ದೆಯನ್ನು ಅಲಂಕರಿಸಿದ್ದರು
2020 ರ ಅಕ್ಟೋಬರ್‌ನಲ್ಲಿ ಎಸ್‌ಬಿಐ ಅಧ್ಯಕ್ಷರಾಗಿ ಹಿರಿಯ ಬ್ಯಾಂಕರ್ ಖಾರಾ ಮೂರು ವರ್ಷಗಳ ಕಾಲ ಅಧಿಕಾರ ವಹಿಸಿಕೊಂಡಿದ್ದರು ಎಂಬುದು ಇಲ್ಲಿ ಗಮನಾರ್ಹ.  ಈಗಿರುವ ನಿಯಮಗಳ ಪ್ರಕಾರ, ಎಸ್‌ಬಿಐ ಅಧ್ಯಕ್ಷರು 63 ವರ್ಷ ವಯಸ್ಸಿನವರೆಗೆ ಹುದ್ದೆಯಲ್ಲಿರಬಹುದು. ಮುಂದಿನ ವರ್ಷ ಆಗಸ್ಟ್‌ನಲ್ಲಿ ಖಾರಾ 63 ನೇ ವರ್ಷಕ್ಕೆ ಕಾಲಿಡಲಿದ್ದಾರೆ.

ಇದನ್ನೂ ಓದಿ-ಅತ್ಯಲ್ಪ ಹೂಡಿಕೆ ಮಾಡಿ ಈ ಉದ್ಯಮ ಆರಂಭಿಸಿ ತಿಂಗಳಿಗೆ 60 ಸಾವಿರಕ್ಕೂ ಅಧಿಕ ಸಂಪಾದನೆ ಮಾಡಿ!

ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ
ಪಿಎಸ್‌ಬಿ ಮತ್ತು ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಮುಖ್ಯಸ್ಥರ ನಿವೃತ್ತಿ ವಯಸ್ಸನ್ನು ಹೆಚ್ಚಿಸುವ ಕುರಿತು ಚರ್ಚೆ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ. ಇದರೊಂದಿಗೆ ಪಿಎಸ್‌ಬಿ ಎಂಡಿಗಳ ನಿವೃತ್ತಿ ವಯಸ್ಸನ್ನು 60 ವರ್ಷದಿಂದ 62 ವರ್ಷಕ್ಕೆ ಹೆಚ್ಚಿಸುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ ಎನ್ನಲಾಗುತ್ತಿದೆ. ಪಿಎಸ್‌ಬಿ ಮತ್ತು ಎಲ್‌ಐಸಿ ಮುಖ್ಯಸ್ಥರ ನಿವೃತ್ತಿ ವಯಸ್ಸಿನ ಕುರಿತು ಇನ್ನೂ ಅಂತಿಮ ನಿರ್ಧಾರ ಹೊರಬೀಳುವುದು ಬಾಕಿ ಇದೆ ಎಂದು ಅವರು ಹೇಳಿದ್ದಾರೆ. ಪ್ರಸ್ತುತ LIC ಅಧ್ಯಕ್ಷರ ಪ್ರಸ್ತುತ ನಿವೃತ್ತಿ ವಯಸ್ಸು 62 ವರ್ಷಗಳು ಎಂಬುದು ಇಲ್ಲಿ ಉಲ್ಲೇಖನೀಯ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News