ITR ಫೈಲ್ ಮಾಡುವ ಮುನ್ನ ಗಮನಿಸಿ! ಈ ಕೆಲಸ ಮಾಡದೇ ಹೋದರೆ ಆಗುವುದಿಲ್ಲ ಟ್ಯಾಕ್ಸ್ ರಿಟರ್ನ್

Pan-Aadhaar Link Last Date: ಹೊಸ ಹಣಕಾಸು ವರ್ಷವು ಏಪ್ರಿಲ್ 1 ರಿಂದ ಪ್ರಾರಂಭವಾಗುತ್ತದೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಆದಾಯ ತೆರಿಗೆ ರಿಟರ್ನ್ ಅನ್ನು ಸಲ್ಲಿಸಬೇಕಾಗುತ್ತದೆ.

Written by - Ranjitha R K | Last Updated : Mar 9, 2023, 09:48 AM IST
  • ಮುಂಗಡ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಬಗ್ಗೆಯೂ ಪ್ರಚಾರ
  • ಪ್ಯಾನ್ ಕಾರ್ಡ್ - ಆಧಾರ್ ಲಿಂಕ್ ಮಾಡದಿದ್ದಲ್ಲಿ ಭಾರೀ ನಷ್ಟ
  • KYC ಅನ್ನು ಪೂರ್ಣಗೊಳಿಸುವುದು ಅನಿವಾರ್ಯ
ITR ಫೈಲ್ ಮಾಡುವ ಮುನ್ನ ಗಮನಿಸಿ! ಈ ಕೆಲಸ ಮಾಡದೇ ಹೋದರೆ ಆಗುವುದಿಲ್ಲ ಟ್ಯಾಕ್ಸ್  ರಿಟರ್ನ್  title=

Pan-Aadhaar Link Last Date : 2022-23ರ ಆರ್ಥಿಕ ವರ್ಷ  ಕೆಲವೇ ದಿನಗಳಲ್ಲಿ ಕೊನೆಗೊಳ್ಳುತ್ತದೆ. ಹೊಸ ಹಣಕಾಸು ವರ್ಷವು ಏಪ್ರಿಲ್ 1 ರಿಂದ ಪ್ರಾರಂಭವಾಗುತ್ತದೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಆದಾಯ ತೆರಿಗೆ ರಿಟರ್ನ್ ಅನ್ನು ಸಲ್ಲಿಸಬೇಕಾಗುತ್ತದೆ. ಮುಂಗಡ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಬಗ್ಗೆಯೂ ಸರ್ಕಾರದ ವತಿಯಿಂದ ಪ್ರಚಾರ ಮಾಡಲಾಗುತ್ತಿದೆ. ಮುಂದಿನ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ, ಆದಾಯ ತೆರಿಗೆ ರಿಟರ್ನ್ ಕಾರ್ಯ ಪೂರ್ಣಗೊಳ್ಳಲಿದೆ. ಆದರೆ, ನೀವು ಇನ್ನು ಕೂಡಾ  ಪ್ಯಾನ್ ಕಾರ್ಡ್ ಅನ್ನು ಆಧಾರ್ ನೊಂದಿಗೆ ಲಿಂಕ್ ಮಾಡದಿದ್ದಲ್ಲಿ ಭಾರೀ ನಷ್ಟವನ್ನು ಎದುರಿಸಬೇಕಾಗುತ್ತದೆ. 

ವಹಿವಾಟುಗಳನ್ನು ನಿಷೇಧಿಸಬಹುದು :
ಷೇರು ಮಾರುಕಟ್ಟೆಯಲ್ಲಿ ನಿರಂತರ ವಹಿವಾಟು ನಡೆಸುವುಸು ಸಾಧ್ಯವಾಗಬೇಕಾದರೆ ಮಾರ್ಚ್ ಅಂತ್ಯದೊಳಗೆ ಪ್ಯಾನ್ ಕಾರ್ಡ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವಂತೆ ಎಲ್ಲಾ ಹೂಡಿಕೆದಾರರನ್ನು  ಸೆಬಿ ಕೇಳಿದೆ. ಈ ಸೂಚನೆಯನ್ನು ಅನುಸರಿಸದಿದ್ದಲ್ಲಿ ಪ್ಯಾನ್ ಮತ್ತು ಆಧಾರ್ ಅನ್ನು ಲಿಂಕ್ ಮಾಡುವವರೆಗೆ ವಹಿವಾಟುಗಳನ್ನು ನಿಷೇಧಿಸಬೇಕಾಗಿ ಬರಬಹುದು ಎಂದು SEBI ಹೊರಡಿಸಿದ ಹೇಳಿಕೆಯಲ್ಲಿ  ತಿಳಿಸಿದೆ. 

ಇದನ್ನೂ ಓದಿ : EPFO ಚಂದಾದಾರರಿಗೊಂದು ಮಹತ್ವದ ಮಾಹಿತಿ!

KYC ಅನ್ನು ಪೂರ್ಣಗೊಳಿಸುವುದು  ಅನಿವಾರ್ಯ : 
ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (CBDT) ಮಾರ್ಚ್ 2022 ರಲ್ಲಿ ಈ ಬಗ್ಗೆ ಅಧಿಸೂಚನೆ ಹೊರಡಿಸಿದೆ. ಮಾರ್ಚ್ 31, 2023 ರೊಳಗೆ ಪ್ಯಾನ್ ಅನ್ನು ಆಧಾರ್‌ಗೆ ಲಿಂಕ್ ಮಾಡದಿದ್ದರೆ, ಪ್ಯಾನ್ ಕಾರ್ಡ್ ನಿಷ್ಕ್ರಿಯವಾಗಲಿದೆ ಎಂದು ಎಚ್ಚರಿಕೆ ಕೂಡಾ ನೀಡಿತ್ತು. 'ಪಾನ್ ಪ್ರಮುಖ ಗುರುತಿನ ಸಂಖ್ಯೆಯಾಗಿರುವುದರಿಂದ ಷೇರು ಮಾರುಕಟ್ಟೆಯಲ್ಲಿನ ವಹಿವಾಟುಗಳಿಗೆ KYC ಅವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ ಮಾರುಕಟ್ಟೆ ಮೂಲಸೌಕರ್ಯ ಸಂಸ್ಥೆಗಳಿಗೆ ಮಾನ್ಯ KYC ಅನ್ನು ಖಚಿತಪಡಿಸಿಕೊಳ್ಳುವುದು ಅವಶ್ಯಕ.

ನೀವು ಮಾರ್ಚ್ 2022 ರಲ್ಲಿ SEBI ಹೊರಡಿಸಿದ ಅಧಿಸೂಚನೆಯ ಪ್ರಕಾರ,  PAN ಕಾರ್ಡ್ ನಿಷ್ಕ್ರಿಯವಾದರೆ, ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ಸಾಧ್ಯವಾಗುವುದಿಲ್ಲ. ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ಪ್ಯಾನ್ ಕಾರ್ಡ್ ಸಕ್ರಿಯವಾಗಿರುವುದು ಬಹಳ ಮುಖ್ಯ. ಮುಂದೆ ಸಂಭವಿಸಬಹುದಾದ ಸಮಸ್ಯೆಯನ್ನು ತಪ್ಪಿಸಲು ಮಾರ್ಚ್ 31 ರೊಳಗೆ ಆಧಾರ್ ಅನ್ನು ಪ್ಯಾನ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಿಕೊಳ್ಳುವುದು ಅವಶ್ಯಕವಾಗಿದೆ.

ಇದನ್ನೂ ಓದಿ : ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸಲು ಇಲ್ಲಿದೆ ಸುಲಭ ಮಾರ್ಗ

ಪ್ಯಾನ್ ಕಾರ್ಡ್ ಅನ್ನು ನಿಷ್ಕ್ರಿಯಗೊಳಿಸಿದ ನಂತರ, ಅದನ್ನು ಬಳಸಿದರೆ, ನಿಮಗೆ  10,000 ರೂಪಾಯಿ ದಂಡ ವಿಧಿಸಲಾಗುವುದು. ಆದಾಯ ತೆರಿಗೆಯ ಸೆಕ್ಷನ್ 272B ಅಡಿಯಲ್ಲಿ ಈ ದಂಡವನ್ನು ಪಾವತಿಸಬೇಕಾಗುತ್ತದೆ. ಅದಕ್ಕಾಗಿಯೇ ಮಾರ್ಚ್ 31, 2023 ರೊಳಗೆ 1000 ರೂಪಾಯಿಗಳ ಲೇಟ್  ಫೈನ್ ಪಾವತಿಸುವ ಮೂಲಕ ಆಧಾರ್ ಕಾರ್ಡ್‌ನೊಂದಿಗೆ ಪ್ಯಾನ್ ಅನ್ನು ಲಿಂಕ್ ಮಾಡಬೇಕಾಗುತ್ತದೆ. 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News