CRPF Job: 11,000 ಕಾನ್‌ಸ್ಟೆಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ; SSLC ಪಾಸಾದವರು ಅರ್ಜಿ ಸಲ್ಲಿಸಿ

CRPF Recruitment 2024: CRPFನಲ್ಲಿ ಖಾಲಿಯಿರುವ ಒಟ್ಟು 11,541 ಕಾನ್‌ಸ್ಟೆಬಲ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಪುರುಷರ 11,299 ಮತ್ತು ಮಹಿಳೆಯರ 242 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

Written by - Puttaraj K Alur | Last Updated : Sep 9, 2024, 07:13 PM IST
  • CRPFನಲ್ಲಿ ಖಾಲಿಯಿರುವ 11000ಕ್ಕೂ ಹೆಚ್ಚು ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿ
  • 11,299 ಪುರುಷ ಮತ್ತು 242 ಮಹಿಳಾ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ
  • SSLC ಪಾಸಾದ ಅಭ್ಯರ್ಥಿಗಳು ಅಕ್ಟೋಬರ್ 14ರೊಳಗೆ ಅರ್ಜಿ ಸಲ್ಲಿಸಬಹುದು
CRPF Job: 11,000 ಕಾನ್‌ಸ್ಟೆಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ; SSLC ಪಾಸಾದವರು ಅರ್ಜಿ ಸಲ್ಲಿಸಿ title=
SSLC ಪಾಸಾದವರಿಗೆ ಗುಡ್ ನ್ಯೂಸ್

CRPF Recruitment 2024: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಪೊಲೀಸ್ ಪಡೆಗಳಲ್ಲಿ ನಿರುದ್ಯೋಗಿ ಅಭ್ಯರ್ಥಿಗಳಿಗೆ ಉದ್ಯೋಗ ಪಡೆಯಲು ಸುವರ್ಣ ಅವಕಾಶವಿದೆ. ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (CRPF)ನಲ್ಲಿ ಖಾಲಿಯಿರುವ 11000ಕ್ಕೂ ಹೆಚ್ಚು ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.

ಈ ಹುದ್ದೆಗಳಿಗೆ ನೇಮಕಾತಿಯನ್ನು ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಜಿಡಿ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯ ಮೂಲಕ ಮಾಡಲಾಗುತ್ತದೆ. ಈ ಹುದ್ದೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, 10ನೇ ತರಗತಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. CRPFನಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಸೆಪ್ಟೆಂಬರ್ 5ರಿಂದ ಪ್ರಾರಂಭವಾಗಿದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಅಕ್ಟೋಬರ್ 14 ಕೊನೆಯ ದಿನವಾಗಿರುತ್ತದೆ. ಅರ್ಜಿ ಶುಲ್ಕ ಪಾವತಿಸಲು ಅ.15ರವರೆಗೂ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ಸೆ.8ರಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿಗಳ ನಿಮಜ್ಜನೆಯ ವಿವರ

ಹುದ್ದೆಯ ವಿವರ: CRPFನಲ್ಲಿ ಖಾಲಿಯಿರುವ ಒಟ್ಟು 11,541 ಕಾನ್‌ಸ್ಟೆಬಲ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಪುರುಷರ 11,299 ಮತ್ತು ಮಹಿಳೆಯರ 242 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಪುರುಷರಲ್ಲಿ ಸಾಮಾನ್ಯ ವರ್ಗದ 4,765 ಹುದ್ದೆಗಳು, EWSನ 1,130 ಹುದ್ದೆಗಳು, OBCಯ 2,510 ಹುದ್ದೆಗಳು, SCಯ 1,681 ಮತ್ತು STಯ 1,213 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ವಿದ್ಯಾರ್ಹತೆ: SSC ಹೊರಡಿಸಿದ ಅಧಿಸೂಚನೆಯ ಪ್ರಕಾರ, SSLC ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಕಾನ್‌ಸ್ಟೆಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅದೇ ರೀತಿ ಅಭ್ಯರ್ಥಿಗಳ ವಯಸ್ಸು ಜನವರಿ 1, 2025ರಂತೆ 18 ವರ್ಷಕ್ಕಿಂತ ಹೆಚ್ಚು ಮತ್ತು 23 ವರ್ಷಕ್ಕಿಂತ ಕಡಿಮೆ ಇರಬೇಕು.  

ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಮಟ್ಟ 1ರಡಿ 18,000-56,900 ರೂ.ವರೆಗಿನ ಮೂಲ ವೇತನ ನೀಡಲಾಗುತ್ತದೆ. ಇದಲ್ಲದೆ ಇತರ ಸರ್ಕಾರಿ ಭತ್ಯೆಗಳ ಪ್ರಯೋಜನಗಳು ಸಹ ಲಭ್ಯವಿರುತ್ತವೆ.

ಅರ್ಜಿ ಸಲ್ಲಿಸುವುದು ಹೇಗೆ..?

  • ssc.gov.inಗೆ ಭೇಟಿ ನೀಡಬೇಕುವೆಬ್‌ಸೈಟ್ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮೊದಲು ನೀವು SSC ಪರೀಕ್ಷೆಯ ಅಧಿಕೃತ
  • ವೆಬ್‌ಸೈಟ್‌ನ ಮುಖಪುಟದಲ್ಲಿ ʼNew Updatesʼ ಲಿಂಕ್ ಕ್ಲಿಕ್ ಮಾಡಬೇಕು.
  • ನಂತರ CRPF ನೇಮಕಾತಿ 2024ರಲ್ಲಿ SSC ಕಾನ್ಸ್‌ಟೇಬಲ್ GD ಲಿಂಕ್ ಕ್ಲಿಕ್ ಮಾಡಬೇಕು
  • ಮುಂದಿನ ಪುಟದಲ್ಲಿ ಆನ್‌ಲೈನ್‌ನಲ್ಲಿ Apply ಲಿಂಕ್ ಕ್ಲಿಕ್ ಮಾಡಿ
  • ಈಗ ಕೇಳಲಾದ ವಿವರಗಳೊಂದಿಗೆ ನಿಮ್ಮ ಹೆಸರನ್ನು ನೋಂದಾಯಿಸಿರಿ
  • ನೋಂದಣಿ ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
  • ಅರ್ಜಿ ʼSubmitʼ ಮಾಡಿ ಪ್ರಿಂಟ್ ತೆಗೆದುಕೊಳ್ಳಿರಿ

ಇದನ್ನೂ ಓದಿ: ಸಿ.ಟಿ.ರವಿ ಅವರದ್ದು ಬುರುಡೆ ಮಾತು: ಶಾಸಕ ಸಿ.ಪುಟ್ಟರಂಗಶೆಟ್ಟಿ ಕಿಡಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News