ವಿಜಯಪುರ: ಕಲಿಕೆಗೆ ವಯಸ್ಸು ಎಂಬುದಿಲ್ಲ. ದೇಹಕ್ಕೆ ವಯಸ್ಸಾಗಬಹುದೇ ಹೊರತು ಕಲಿಕಾಸಕ್ತಿಗೆ ಇಲ್ಲ ಎಂಬುದನ್ನು 81 ವರ್ಷದ ಹಿರಿಯ ನಾಗರಿಕರೊಬ್ಬರು ತೋರಿಸಿ ಕೊಟ್ಟಿದ್ದಾರೆ.
ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಇ ಸಂಸ್ಥೆಯ ನಸಿರ್ಂಗ್ ಕಾಲೇಜಿನಲ್ಲಿ ನಡೆಯುತ್ತಿರುವ ಇಗ್ನೋ(ಇಂದಿರಾ ಗಾಂಧಿ ಮುಕ್ತ ವಿಶ್ವವಿದ್ಯಾಲಯ) ಪರೀಕ್ಷೆಯಲ್ಲಿ ಎಂ. ಎ. ಇಂಗ್ಲೀಷ್ ಅಂತಿಮ ವರ್ಷದ ಪರೀಕ್ಷೆ ಬರೆಯುವ ಮೂಲಕ ನಿಂಗಯ್ಯ ಒಡೆಯರ ಎಂಬ 81 ವರ್ಷ ವಯಸ್ಸಿನ ಅಜ್ಜ ಎಲ್ಲರ ಗಮನ ಸೆಳೆದಿದ್ದಾರೆ. ನಿಂಗಯ್ಯ ಒಡೆಯರ ಅವರ 5ನೇ ಸ್ನಾತಕೋತ್ತರ ಪರೀಕ್ಷೆ ಇದಾಗಿದ್ದು, ಅವರಲ್ಲಿ ಓದಿನ ಬಗ್ಗೆ ಇರುವ ಹಂಬಲ ಮತ್ತು ಇಚ್ಛಾಶಕ್ತಿ, ವಿದ್ಯಾಭ್ಯಾಸವನ್ನು ಅರ್ಧಕ್ಕೆ ಮೊಟಕುಗೊಳಿಸುವವರಿಗೆ ಮಾದರಿಯಾಗಿದೆ.
ಬಾಗಲಕೋಟೆ ಜಿಲ್ಲೆಯ ಇಳಕಲ ತಾಲೂಕಿನ ಗುಡೂರು ಬಳಿಯ ಎಸ್. ಸಿ. ಹಳ್ಳಿಯವರಾಗಿರುವ ನಿಂಗಯ್ಯ ಒಡೆಯರ ಅವರಿಗೆ ಇಬ್ಬರು ಗಂಡು ಮತ್ತು ಓರ್ವ ಹೆಣ್ಣು ಮಕ್ಕಳು ಹಾಗೂ ಐದು ಜನ ಮೊಮ್ಮಕ್ಕಳಿದ್ದಾರೆ. ಆದರೆ, ಇವರ ವಿದ್ಯಾರ್ಜನೆಗೆ ಯಾವುದೂ ಅಡ್ಡಿಯಾಗಿಲ್ಲ. ಇವರ ಮಗಳು ಕೂಡ ಪಿ. ಎಚ್. ಡಿ. ಪದವಿ ಪಡೆದಿದ್ದಾರೆ. ಇವರ ಗಂಡು ಮಕ್ಕಳು ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ.
ಇದನ್ನೂ ಓದಿ- ಸಂವಿಧಾನ ಬದಲಾಯಿಸ್ತೀವಿ ಎಂದು ಅಹಂಕಾರ ಮೆರೆದವರನ್ನೇ ನೀವು ಬದಲಾಯಿಸಿದ್ದೀರಿ - ಸಿಎಂ ಸಿದ್ದರಾಮಯ್ಯ
ಸರಕಾರಿ ನೌಕರಿಯಲ್ಲಿದ್ದ ಇವರು ಸೇವಾ ನಿವೃತ್ತಿಯ ನಂತರ ಮತ್ತಷ್ಟು ಕಲಿಯಬೇಕು ಎಂಬ ಹಂಬಲದಿಂದ ಈಗಾಗಲೇ ಕನ್ನಡ, ಹಿಂದಿ ಮತ್ತು ಇಂಗ್ಲೀಷ್ ವಿಷಯಗಳಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅಲ್ಲದೇ, ಇಗ್ನೋದಿಂದ ಸಮಾಜಶಾಸ್ತ್ರ ಸ್ನಾತಕೋತ್ತರ ಪದವಿಯನ್ನೂ ಇವರು ಪಡೆದಿದ್ದಾರೆ. ಆದರೂ ಇವರಿಗೆ ಇನ್ನೂ ಓದುವ ಮತ್ತು ಪರೀಕ್ಷೆ ಬರೆಯುವ ಹವ್ಯಾಸ ಮಾತ್ರ ಕಡಿಮೆಯಾಗದಿರುವುದು ಗಮನಾರ್ಹವಾಗಿದೆ.
ತಮ್ಮ ಈ ಸಾಧನೆಗೆ ತಮ್ಮ ಧರ್ಮ ಪತ್ನಿ ಎಂದು ಸಂತಸದಿಂದ ಹೇಳುವ ನಿಂಗಯ್ಯ ಒಡೆಯರ, 81ರ ಇಳಿ ವಯಸ್ಸಿನಲ್ಲಿಯೂ ಯೋಗಪಟುವಾಗಿದ್ದಾರೆ. ವಿಶಿಷ್ಠವಾದ ಸಾಹಸಗಳನ್ನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.
ಇದೀಗ ಇವರು ಈಗ ನಡೆಯುತ್ತಿರುವ ಸ್ನಾತಕೋತ್ತರ ಪರೀಕ್ಷೆಯಲ್ಲಿ ಎಲ್ಲರ ಆಕರ್ಷಣೆಯ ಕೇಂದ್ರವಾಗಿದ್ದು, ಪರೀಕ್ಷೆಗೆ ಹಾಜರಾಗುತ್ತಿರುವ ಇತರ ಅಭ್ಯರ್ಥಿಗಳಿಗೆ ಸ್ಪೂರ್ತಿಯಾಗಿದ್ದಾರೆ ಎಂದು ಇಗ್ನೋ ಅಧ್ಯಯನ ಕೇಂದ್ರದ ಸಂಯೋಜಕ ಡಾ. ನಿಂಗನಗೌಡ ಪಾಟೀಲ ಹೇಳಿದ್ದಾರೆ.
ಇದನ್ನೂ ಓದಿ- ಆರ್‌ಎಸ್‌ಎಸ್ ಅಂಗ ಸಂಸ್ಥೆಗಳಿಗೆ ನೀಡಿದ್ದ ಎಲ್ಲಾ ಜಮೀನು ವಾಪಸ್..!
ನಿಂಗಯ್ಯ ಒಡೆಯರ ಅವರ ಈ ಹುಮ್ಮಸ್ಸಿನ ಬಗ್ಗೆ ಇಗ್ನೋ ಪ್ರಾಂತ ನಿರ್ದೇಶಕ ಡಾ. ಎ. ವರದರಾಜನ, ಸಹಾಯಕ ನಿರ್ದೇಶಕ ಡಾ. ಬಿ. ಎನ್. ದೇವೇಂದ್ರ, ಬಿ. ಎಲ್. ಡಿ. ಇ ನಸಿರ್ಂಗ್ ಕಾಲೇಜಿನ ಪ್ರಾಚಾರ್ಯ ಡಾ. ಶಾಲ್ಮೊನ್ ಚೋಪಡೆ, ಇಗ್ನೋ ಸಹ ಸಂಯೋಜಕ ಡಾ. ಸತೀಶ ನಡಗಡ್ಡಿ ಸಂತಸ ವ್ಯಕ್ತಪಡಿಸಿದ್ದು, ಅಭಿನಂದನೆ ಸಲ್ಲಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ