Job Alert: SSLC ಪಾಸ್ ಆಗಿದ್ರೆ ರೈಲ್ವೆ ಇಲಾಖೆಯ ಈ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿರಿ

Indian Railway Recruitment 2024: ಅಭ್ಯರ್ಥಿಗಳು ರೈಲ್ವೆ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ, ಡಿಪ್ಲೊಮಾ, ಬಿ.ಎಸ್ಸಿ, ಬಿಇ/ಬಿ.ಟೆಕ್​​ ಪೂರ್ಣಗೊಳಿಸಿರಬೇಕು

Written by - Puttaraj K Alur | Last Updated : Mar 15, 2024, 08:26 AM IST
  • ಭಾರತೀಯ ರೈಲ್ವೆ ನೇಮಕಾತಿ ಮಂಡಳಿಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಕ್ರಮ
  • 9,144 ಟೆಕ್ನಿಷಿಯನ್​ ಹುದ್ದೆ ಖಾಲಿ ಇದ್ದು, SSLC ಪಾಸಾದವರು ಅರ್ಜಿ ಸಲ್ಲಿಸಬಹುದು
  • ಏಪ್ರಿಲ್ 8 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆನ್​​ಲೈನ್ ಮೂಲಕ ಅರ್ಜಿ ಸಲ್ಲಿಸಿರಿ
Job Alert: SSLC ಪಾಸ್ ಆಗಿದ್ರೆ ರೈಲ್ವೆ ಇಲಾಖೆಯ ಈ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿರಿ title=
ಭಾರತೀಯ ರೈಲ್ವೆ ನೇಮಕಾತಿ

Indian Railway Recruitment 2024: ಭಾರತೀಯ ರೈಲ್ವೆ ನೇಮಕಾತಿ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 9,144 ಟೆಕ್ನಿಷಿಯನ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 8 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆನ್​​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.  

ಶೈಕ್ಷಣಿಕ ಅರ್ಹತೆ: ರೈಲ್ವೆ ನೇಮಕಾತಿ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ, ಡಿಪ್ಲೊಮಾ, ಬಿ.ಎಸ್ಸಿ, ಬಿಇ/ಬಿ.ಟೆಕ್​​ ಪೂರ್ಣಗೊಳಿಸಿರಬೇಕು. ಟೆಕ್ನಿಷಿಯನ್ ಗ್ರೇಡ್-I ಸಿಗ್ನಲ್‌ಗೆ ಡಿಪ್ಲೊಮಾ, ಬಿ.ಎಸ್ಸಿ, ಬಿಇ/ಬಿ.ಟೆಕ್​​ ಮತ್ತು ಟೆಕ್ನಿಷಿಯನ್ IIIಗೆ 10ನೇ ತರಗತಿ, 12ನೇ ತರಗತಿ, ಐಟಿಐ ವಿದ್ಯಾರ್ಹತೆ ಹೊಂದಿರಬೇಕು.

ಇದನ್ನೂ ಓದಿ: ಧಾನ ಧರ್ಮ ಮಾಡೋ ಕೈ ಅಧಿಕಾರದಲ್ಲಿದ್ದರೆ ಚೆಂದ

ವಯೋಮಿತಿ: ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ವಯಸ್ಸು ಜುಲೈ 1, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 36 ವರ್ಷ ಮೀರಿರಬಾರದು. ಟೆಕ್ನಿಷಿಯನ್ ಗ್ರೇಡ್-I ಸಿಗ್ನಲ್‌ಗೆ 18ರಿಂದ 36 ವರ್ಷ ಮತ್ತು ಟೆಕ್ನಿಷಿಯನ್ IIIಗೆ 18 ರಿಂದ 33 ವರ್ಷ

ವಯೋಮಿತಿ ಸಡಿಲಿಕೆ: OBC (NCL) ಅಭ್ಯರ್ಥಿಗಳಿಗೆ 3 ವರ್ಷ ಮತ್ತು SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ವೇತನ: ಟೆಕ್ನಿಷಿಯನ್ ಗ್ರೇಡ್-I ಸಿಗ್ನಲ್‌ಗೆ ಮಾಸಿಕ ₹29,200 ಮತ್ತು ಟೆಕ್ನಿಷಿಯನ್ IIIಗೆ ಮಾಸಿಕ ₹19,900

ಅರ್ಜಿ ಶುಲ್ಕ: SC/ST, ಮಾಜಿ ಸೈನಿಕರು, PwBD, ಮಹಿಳಾ, ಟ್ರಾನ್ಸ್ಜೆಂಡರ್, EBC ಅಭ್ಯರ್ಥಿಗಳಿಗೆ 250 ರೂ. ಮತ್ತು ಇತರೆ ಅಭ್ಯರ್ಥಿಗಳಿಗೆ 500 ರೂ. ಅಭ್ಯರ್ಥಿಳು ಆನ್‌ಲೈನ್ ಮೂಲಕವಷ್ಟೇ ಶುಲ್ಕವನ್ನು ಪಾವತಿಸಬೇಕು.

ಉದ್ಯೋಗದ ಸ್ಥಳ: ಕರ್ನಾಟಕ ಸೇರಿದಂತೆ ಭಾರತ

ಆಯ್ಕೆ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ಮೆಡಿಕಲ್ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ: ಉದ್ದಿಮೆದಾರರಿಗೆ ನೋಟಿಸ್ ಕೊಟ್ಟು ಲೈಸನ್ಸ್ ರದ್ದು

ಅರ್ಜಿ ಸಲ್ಲಿಸುವುದು ಹೇಗೆ..?: ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಈ ಲಿಂಕ್‌ https://www.rrbchennai.gov.in/ ಮೂಲಕ ಅಭ್ಯರ್ಥಿಗಳು ನೇರವಾಗಿ ಅರ್ಜಿ ಸಲ್ಲಿಸಬಹುದು. ರೈಲ್ವೆ ಇಲಾಖೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
 

Trending News