Indian Railway Jobs: ಭಾರತೀಯ ರೈಲ್ವೆ ಇಲಾಖೆಯಲ್ಲಿ 2.74 ಲಕ್ಷ ಉದ್ಯೋಗಗಳು ಖಾಲಿ

Indian Railway Jobs: ಮಧ್ಯಪ್ರದೇಶ ಮೂಲದ ಆರ್‌ಟಿಐ ಕಾರ್ಯಕರ್ತ ಚಂದ್ರಶೇಖರ್ ಗೌರ್ ಅವರು ಸಲ್ಲಿಸಿದ ಪ್ರಶ್ನೆಗೆ ಉತ್ತರಿಸಿದ ರೈಲ್ವೆ ಇಲಾಖೆಯು, ಗ್ರೂಪ್ ‘ಸಿ’ಯಲ್ಲಿ 2,74,580 ಹುದ್ದೆಗಳು ಖಾಲಿ ಇವೆ ಎಂದು ತಿಳಿಸಿದೆ.

Written by - Puttaraj K Alur | Last Updated : Jul 1, 2023, 03:11 PM IST
  • ಭಾರತೀಯ ರೈಲ್ವೆ ಇಲಾಖೆಯಲ್ಲಿ 2.74 ಲಕ್ಷ ಉದ್ಯೋಗಗಳು ಖಾಲಿ ಇವೆ
  • ಈ ಪೈಕಿ 1.7 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಸುರಕ್ಷತಾ ವರ್ಗದಲ್ಲಿ ಖಾಲಿ ಇವೆ
  • ಮಧ್ಯಪ್ರದೇಶದ ಆರ್‌ಟಿಐ ಕಾರ್ಯಕರ್ತ ಚಂದ್ರಶೇಖರ್ ಗೌರ್ ಪ್ರಶ್ನೆಗೆ ರೈಲ್ವೆ ಇಲಾಖೆಯಿಂದ ಉತ್ತರ
Indian Railway Jobs: ಭಾರತೀಯ ರೈಲ್ವೆ ಇಲಾಖೆಯಲ್ಲಿ 2.74 ಲಕ್ಷ ಉದ್ಯೋಗಗಳು ಖಾಲಿ title=
2.74 ಲಕ್ಷ ಉದ್ಯೋಗಗಳು ಖಾಲಿ

ನವದೆಹಲಿ: ಭಾರತೀಯ ರೈಲ್ವೆ ಇಲಾಖೆಯಲ್ಲಿ 2023ರ ಜೂನ್ ತಿಂಗಳ ಹೊತ್ತಿಗೆ ಸುಮಾರು 2.74 ಲಕ್ಷ ಹುದ್ದೆಗಳು ಖಾಲಿ ಇವೆ. ಈ ಪೈಕಿ 1.7 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಸುರಕ್ಷತಾ ವರ್ಗದಲ್ಲಿ ಖಾಲಿ ಇವೆ ಎಂದು ಆರ್‌ಟಿಐ ಅರ್ಜಿಯೊಂದಕ್ಕೆ ಸಿಕ್ಕಿರುವ ಉತ್ತರದಲ್ಲಿ ಬಹಿರಂಗವಾಗಿದೆ.

ಮಧ್ಯಪ್ರದೇಶ ಮೂಲದ ಆರ್‌ಟಿಐ ಕಾರ್ಯಕರ್ತ ಚಂದ್ರಶೇಖರ್ ಗೌರ್ ಸಲ್ಲಿಸಿದ ಪ್ರಶ್ನೆಗೆ ಉತ್ತರಿಸಿದ ರೈಲ್ವೆ ಇಲಾಖೆಯು, 1 ಹಂತ ಸೇರಿದಂತೆ ಗ್ರೂಪ್ ‘ಸಿ’ಯಲ್ಲಿ 2,74,580 ಹುದ್ದೆಗಳು ಖಾಲಿ ಇವೆ ಎಂದು ಹೇಳಿದೆ. ರೈಲ್ವೆ ಇಲಾಖೆಯ ಸುರಕ್ಷತಾ ವಿಭಾಗದಲ್ಲಿ ಒಟ್ಟು 1,77,924 ಹುದ್ದೆಗಳು ಖಾಲಿ ಇದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಉತ್ತರಾಖಂಡದಲ್ಲಿ ಶೀಘ್ರವೇ ಏಕರೂಪ ನಾಗರಿಕ ಸಂಹಿತೆ ಜಾರಿ: ಸಿಎಂ ಧಾಮಿ

01.06.2023 (ತಾತ್ಕಾಲಿಕ)ನಂತೆ ಭಾರತೀಯ ರೈಲ್ವೆಯಲ್ಲಿ ಗ್ರೂಪ್-ಸಿ (ಲೆವೆಲ್-1 ಸೇರಿದಂತೆ) ಖಾಲಿ ಇರುವ ಒಟ್ಟು ನಾನ್-ಗೆಜೆಟೆಡ್ ಹುದ್ದೆಗಳ ಸಂಖ್ಯೆ 2,74,580 ಎಂದು ಸಚಿವಾಲಯವು ಆರ್‍ಟಿಐ ಪ್ರಶ್ನೆಗೆ ಪ್ರತಿಕ್ರಿಯೆಯಾಗಿ ತನ್ನ ಉತ್ತರವನ್ನು ತಿಳಿಸಿದೆ

"01.06.2023ರಂತೆ ಈ ಕಚೇರಿಯಲ್ಲಿ ಲಭ್ಯವಿರುವಂತೆ (ತಾತ್ಕಾಲಿಕ) ಭಾರತೀಯ ರೈಲ್ವೆ ಇಲಾಖೆಯಲ್ಲಿ ಗ್ರೂಪ್-ಸಿ (ಲೆವೆಲ್-1 ಸೇರಿದಂತೆ) ಸುರಕ್ಷತಾ ವರ್ಗದಲ್ಲಿ ಮಂಜೂರಾದ ರೋಲ್ ಮತ್ತು ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ 982037, 804113 & 177924 ಎಂದು RTI ಅರ್ಜಿಗೆ ಉತ್ತರ ಹೇಳಿದೆ. ಡಿಸೆಂಬರ್ 2022ರಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ರೈಲ್ವೆಯಲ್ಲಿ 3.12 ಲಕ್ಷ ಗೆಜೆಟೆಡ್ ಅಲ್ಲದ ಹುದ್ದೆಗಳು ಖಾಲಿ ಇವೆ ಎಂದು ಸಂಸತ್ತಿಗೆ ತಿಳಿಸಿದ್ದರು.

ಇದನ್ನೂ ಓದಿ: Rain Alert: ರಾಜ್ಯದ ಈ ಭಾಗಗಳಲ್ಲಿ ಮುಂದಿನ 9 ದಿನ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ: ಇಲಾಖೆ ಮುನ್ಸೂಚನೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News