ಡೆಹರಾಡೂನ್ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ನಲ್ಲಿ 8ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಅಹ್ವಾನ

ಅಭ್ಯರ್ಥಿಗಳು ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದಿರುವ ಯಾವುದೇ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಹಾಗೂ ದಿನಾಂಕ 01-07-2025 ರಂತೆ 11½ ವರ್ಷದಿಂದ 13 ವರ್ಷದೊಳಗಿರುವ (ಅಂದರೆ ದಿನಾಂಕ 02-07-2012 ರಿಂದ 01-01-2024 ರೊಳಗೆ ಜನಿಸಿರುವ) ಬಾಲಕರು ಮತ್ತು ಬಾಲಕಿಯರು ಮಾತ್ರ ಪ್ರವೇಶ ಪರೀಕ್ಷೆಗೆ ಅರ್ಹರಿರುತ್ತಾರೆ.

Written by - Manjunath N | Last Updated : Jul 22, 2024, 06:59 PM IST
  • ಪ್ರಸಕ್ತ ವಿಧ್ಯಾಭ್ಯಾಸ ಶುಲ್ಕ ರೂ.98650/-ಗಳು (ಸಾಮಾನ್ಯ ವರ್ಗ) ಹಾಗೂ ರೂ 81850/- (ಎಸ್ಸಿ/ಎಸ್ಟಿ) ಗಳಾಗಿರುತ್ತದೆ.
  • ಇದು ಕಾಲ ಕಾಲಕ್ಕೆ ಹೆಚ್ಚಾಗಬಹುದು.
  • ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯು ಪ್ರವೇಶ ಸಮಯದಲ್ಲಿ ರೂ.50,000/-ಭದ್ರತಾ ಠೇವಣಿ ನೀಡಬೇಕಾಗುತ್ತದೆ
ಡೆಹರಾಡೂನ್ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ನಲ್ಲಿ 8ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಅಹ್ವಾನ title=

ಬೆಂಗಳೂರು: ಜುಲೈ 2025ನೇ ಅಧಿವೇಶನಕ್ಕಾಗಿ ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ನಲ್ಲಿ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಡಿಸೆಂಬರ್ 01, 2024 ರಂದು ನಡೆಸಲಾಗುವುದು.

ಅಭ್ಯರ್ಥಿಗಳು ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದಿರುವ ಯಾವುದೇ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಹಾಗೂ ದಿನಾಂಕ 01-07-2025 ರಂತೆ 11½ ವರ್ಷದಿಂದ 13 ವರ್ಷದೊಳಗಿರುವ (ಅಂದರೆ ದಿನಾಂಕ 02-07-2012 ರಿಂದ 01-01-2024 ರೊಳಗೆ ಜನಿಸಿರುವ) ಬಾಲಕರು ಮತ್ತು ಬಾಲಕಿಯರು ಮಾತ್ರ ಪ್ರವೇಶ ಪರೀಕ್ಷೆಗೆ ಅರ್ಹರಿರುತ್ತಾರೆ.

ಪ್ರಸಕ್ತ ವಿಧ್ಯಾಭ್ಯಾಸ ಶುಲ್ಕ ರೂ.98650/-ಗಳು (ಸಾಮಾನ್ಯ ವರ್ಗ) ಹಾಗೂ ರೂ 81850/- (ಎಸ್ಸಿ/ಎಸ್ಟಿ) ಗಳಾಗಿರುತ್ತದೆ. ಇದು ಕಾಲ ಕಾಲಕ್ಕೆ ಹೆಚ್ಚಾಗಬಹುದು. ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯು ಪ್ರವೇಶ ಸಮಯದಲ್ಲಿ ರೂ.50,000/-ಭದ್ರತಾ ಠೇವಣಿ ನೀಡಬೇಕಾಗುತ್ತದೆ (incl in annual fee) ಸದರಿ ಮೊತ್ತವನ್ನು ವಿದ್ಯಾರ್ಥಿಯು ಪದವೀಧರನಾದ ಮತ್ತು ವಿದ್ಯಾರ್ಥಿನಿ ಪದವೀಧರೆಯಾದ ಬಳಿಕ ಹಿಂತಿರುಗಿಸಲಾಗುವುದು.

ಇದನ್ನೂ ಓದಿ: SBI Recruitment 2024: ಪದವಿ ಪಾಸಾದವರಿಗೆ SBIನಲ್ಲಿ 1,040 ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕವನ್ನು ರಾಷ್ಟ್ರೀಯ ಭಾರತೀಯ ಮಿಲಿಟರಿ ಕಾಲೇಜು, ಗರಹಿ ಕ್ಯಾಂಟ್, ಡೆಹ್ರಾಡೂನ್, ಉತ್ತರಾಖಂಡ್, ಪಿನ್ – 248003 ಮೂಲಕ ಪಡೆಯಬಹುದು. ಅಲ್ಲದೇ ಆನ್ಲೈನ್ ಪಾವತಿ ಮೂಲಕವೂ ಸಹ ಪಡೆಯಬಹುದಾಗಿದ್ದು, ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600/-ಗಳು ಮತ್ತು ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ರೂ.555/-ಗಳನ್ನು ಪಾವತಿ ಮಾಡುವ ಮೂಲಕ ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರು ಪುಸ್ತಕಗಳನ್ನು ಸಹ ಪಡೆಯಬಹುದು. ವೆಬ್ ಸೈಟ್ www.rimc.gov.in ಪಾವತಿ ಸ್ವೀಕರಿಸಿದ ನಂತರ ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕಗಳನ್ನು ಸ್ಪೀಡ್ ಪೋಸ್ಟ್ ಮೂಲಕ ರವಾನಿಸಲಾಗುತ್ತದೆ.

ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕವನ್ನು ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600/-ಗಳ ಬೇಡಿಕೆಯ ಕರಡು ಮತ್ತು ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ರೂ.555/-ಗಳ ಬೇಡಿಕೆಯ ಕರಡು ಕಳುಹಿಸಿ ಲಿಖಿತ ವಿನಂತಿಯ ಪರವಾಗಿ ಜಾತಿ ಪ್ರಮಾಣಪತ್ರದೊಂದಿಗೆ ಕಳುಹಿಸಬಹುದು. “THE COMMANDANT RIMC FUND” PAYABLE AT HDFC BANK, BALLUPUR CHOWK, DEHRADUN (BANK CODE. 1399), UTTARAKHAND. ವಿಳಾಸ, ಪಿನ್ ಕೋಡ್ ಮತ್ತು ಸಂಪರ್ಕ ಸಂಖ್ಯೆಯೊಂದಿಗೆ ದೊಡ್ಡ ಅಕ್ಷರಗಳಲ್ಲಿ ಟಾಯಿಪ್ ಮಾಡಿ ಬರೆಯಬೇಕು. ಕಾನೂನು ಬಾಹಿರ ಅಥವಾ ಅಪೂರ್ಣ ವಿಳಾಸದಿಂದ ಉಂಟಾಗುವ ಪ್ರಾಸ್ಪೆಕ್ಟಸ್ನ ಸಾಗಾಣಿಕೆಯಲ್ಲಿ ಯಾವುದೇ ಅಂಚೆ ವಿಳಂಬ ಅಥವಾ ನಷ್ಟಕ್ಕೆ RIMC ಸಂಸ್ಥೆಯು ಜವಾಬ್ದಾರರಾಗಿರುವುದಿಲ್ಲ.

ಇದನ್ನೂ ಓದಿ: SBI Recruitment 2024: ಪದವಿ ಪಾಸಾದವರಿಗೆ SBIನಲ್ಲಿ 1,040 ಹುದ್ದೆಗಳಿಗೆ ಅರ್ಜಿ ಆಹ್ವಾನ

ಭರ್ತಿ ಮಾಡಿದ ನಿಗದಿತ ಅರ್ಜಿ ನಮೂನೆಯನ್ನು ದ್ವಿಪ್ರತಿಯಲ್ಲಿ ಅಡಕಗಳೊಂದಿಗೆ ಸಪ್ಟೆಂಬರ್ 30ರೊಳಗಾಗಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಮ್ ಕಾರ್ಯಪ್ಪ ಭವನ್, ನಂ.58 ಫೀಲ್ಡ್ ಮಾರ್ಷಲ್ ಕೆ.ಎಮ್ ಕಾರ್ಯಪ್ಪ ರಸ್ತೆ, ಬೆಂಗಳೂರು - 25, ಇವರಿಗೆ, ಸಲ್ಲಿಸಬಹುದು.

ಅರ್ಜಿಯೊಂದಿಗೆ ಮುನ್ಸಿಪಾಲಿಟಿ/ಗ್ರಾಮ ಪಂಚಾಯತ್ ಪ್ರಾಧಿಕಾರ ವತಿಯಿಂದ ಆಂಗ್ಲ ಭಾಷೆಯಲ್ಲಿ ಪಡೆದ ಅಭ್ಯರ್ಥಿಯ ಜನ್ಮ ಪ್ರಮಾಣ ಪತ್ರದ ಧೃಢೀಕೃತ ಪ್ರತಿ, ಪಾಸ್ಪೋರ್ಟ್ ಸೈಜಿನ ಭಾವಚಿತ್ರಗಳು.(ಅರ್ಜಿಗಳಲ್ಲಿ ಅಂಟಿಸಿದ ಭಾವಚಿತ್ರವನ್ನು ಸೇರಿಸಿ), ಎಸ್ಸಿ/ಎಸ್ಟಿ ಅಭ್ಯರ್ಥಿಗಳಾಗಿದ್ದಲ್ಲಿ, ಸಕ್ಷಮ ಪ್ರಾಧಿಕಾರದಿಂದ ನೀಡಿದ ಜಾತಿ ಪ್ರಮಾಣ ಪತ್ರದ ಧೃಢೀಕೃತ ಪ್ರತಿ (ಆಂಗ್ಲ ಭಾಷೆಯಲ್ಲಿ ಇರುವಂತೆ ಮಾತ್ರ), ಪರೀಕ್ಷಾ ಪ್ರವೇಶ ಪತ್ರವನ್ನು ತ್ವರಿತ/ನೊಂದಾಯಿತ ಅಂಚೆ ದ್ವಾರ ರವಾನಿಸಲು ರೂ. 42/- ರ ಅಂಚೆ ಚೀಟಿ ಅಂಟಿಸಿದ ಸ್ವವಿಳಾಸ ಲಕೋಟೆ, ಶಾಲಾ ಪ್ರಾಚಾರ್ಯರು/ಮುಖ್ಯೋಪಾಧ್ಯಾಯರಿಂದ ಅಭ್ಯರ್ಥಿಯ ಜನ್ಮ ದಿನಾಂಕ ಮತ್ತು ಓದುತ್ತಿರುವ ತರಗತಿ ಬಗ್ಗೆ ಪಡೆದ ಪ್ರಮಾಣ ಪತ್ರದ ಮೂಲ ಪ್ರತಿ (ಧೃಢೀಕರಿಸಿದ ಅಭ್ಯರ್ಥಿಯ ಭಾವ ಚಿತ್ರದೊಂದಿಗೆ), ಕರ್ನಾಟಕ ರಾಜ್ಯದ ವಾಸಸ್ಥಾನ ಧೃಡೀಕರಣ ಪತ್ರ, ಆಧಾರ್ ಕಾರ್ಡ್ ಪ್ರತಿಯನ್ನು ಕಡ್ಡಾಯವಾಗಿ ಸಲ್ಲಿಸಬೇಕು.

ಇದನ್ನೂ ಓದಿ: ಅಂಬಾನಿ ಮನೆಯ ಪ್ರೀತಿಯ ಶ್ವಾನಕ್ಕಾಗಿ 4 ಕೋಟಿ ರೂಪಾಯಿ ಕಾರು..Mercedes-Benz G 400D ಕಾರಿನಲ್ಲಿ 'ಹ್ಯಾಪಿ' ಲೈಫ್‌

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-25589459 ಅಥವಾ ಸಮೀಪದಲ್ಲಿರುವ ತಮ್ಮ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಾರ್ಯಾಲಯವನ್ನು ಸಂಪರ್ಕಿಸುವುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

 

Trending News