ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

2023-24 ನೇ ಸಾಲಿನ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಪ್ರಥಮ ವರ್ಷ ಮತ್ತು ಲ್ಯಾಟರಲ್ ಎಂಟ್ರಿ ಮುಖಾಂತರ 2ನೇ ವರ್ಷದ ಡಿಪೆÇ್ಲೀಮ ಕೋರ್ಸ್ (ಡಿ.ಹೆಚ್.ಟಿ.ಟಿ) ಪ್ರವೇಶಕ್ಕಾಗಿ 27 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Written by - Zee Kannada News Desk | Last Updated : May 19, 2023, 09:56 PM IST
  • ಅಭ್ಯರ್ಥಿಗಳು ಗಣಿತ, ಭೌತಶಾಸ್ತ್ರ ಮತ್ತು ರಾಸಾಯನಶಾಸ್ತ್ರದೊಂದಿಗೆ 10+2 ಉತ್ತಿರ್ಣರಾಗಿರಬೇಕು
  • ಅಥವಾ ಜವಳಿ ವಿಭಾಗದ ವೃತ್ತಿಪರ ವಿಭಾಗದಲ್ಲಿ 10+2 ಉತ್ತಿರ್ಣರಾಗಿರಬೇಕು
  • ಐ.ಐ.ಹೆಚ್.ಟಿ ನಡೆಸುವ ಗಣಿತ, ಭೌತಶಾಸ್ತ್ರ, ರಾಸಾಯನಶಾಸ್ತ್ರದಲ್ಲಿ ಬ್ರಿಡ್ಜ್ ಕೋರ್ಸ್ ಮಾಡಿರಬೇಕು.
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ title=
ಸಾಂದರ್ಭಿಕ ಚಿತ್ರ

ಧಾರವಾಡ : 2023-24 ನೇ ಸಾಲಿನ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಪ್ರಥಮ ವರ್ಷ ಮತ್ತು ಲ್ಯಾಟರಲ್ ಎಂಟ್ರಿ ಮುಖಾಂತರ 2ನೇ ವರ್ಷದ ಡಿಪೆÇ್ಲೀಮ ಕೋರ್ಸ್ (ಡಿ.ಹೆಚ್.ಟಿ.ಟಿ) ಪ್ರವೇಶಕ್ಕಾಗಿ 27 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಇದನ್ನೂ ಓದಿ: RCB ಪ್ಲೇ-ಆಫ್ ಕನಸಿಗೆ ಟರ್ನಿಂಗ್ ಪಾಯಿಂಟ್ ನೀಡಿದ್ದು ಆ ‘ಬಾಲ್’!

ಅರ್ಜಿ ಸಲಿಸುವ ಅಭ್ಯರ್ಥಿಗಳು ಗಣಿತ, ಭೌತಶಾಸ್ತ್ರ ಮತ್ತು ರಾಸಾಯನಶಾಸ್ತ್ರದೊಂದಿಗೆ 10+2 ಉತ್ತಿರ್ಣರಾಗಿರಬೇಕು ಅಥವಾ ಜವಳಿ ವಿಭಾಗದ ವೃತ್ತಿಪರ ವಿಭಾಗದಲ್ಲಿ 10+2 ಉತ್ತಿರ್ಣರಾಗಿರಬೇಕು, ಜವಳಿ ವಿಭಾಗದ ವೃತ್ತಿಪರ ಸ್ಟ್ರಮ್‍ನಲ್ಲಿ 10+2 ಅರ್ಹತೆ ಹೊಂದಿರಬೇಕು ಐ.ಐ.ಹೆಚ್.ಟಿ ನಡೆಸುವ ಗಣಿತ, ಭೌತಶಾಸ್ತ್ರ, ರಾಸಾಯನಶಾಸ್ತ್ರದಲ್ಲಿ ಬ್ರಿಡ್ಜ್ ಕೋರ್ಸ್ ಮಾಡಿರಬೇಕು. ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಪ್ರಾಂಶುಪಾಲರು, ಕರ್ನಾಟಕ ತಂತ್ರಜ್ಞಾನ ಸಂಸ್ಥೆ, ನರಸಾಪುರ ಗದಗ-582102 ಇವರಿಗೆ ಮೇ.31 ರೊಳಗಾಗಿ ಸಲ್ಲಿಸಬೇಕು. ವ್ಯಾಸಂಗದ ಸಮಯದಲ್ಲಿ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳಿಗೆ ರೂ.2,500/- ರಂತೆ ಶಿಷ್ಯ ವೇತನ ನೀಡಲಾಗುವುದು.

ಇದನ್ನೂ ಓದಿ: ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಯಾರ ಕೈ ಹಿಡಿಯಲಿದೆ ಮಂತ್ರಿಗಿರಿ..?

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿ ಫಾರ್ಮಗಳಿಗಾಗಿ ಗದಗ ಜಿಲ್ಲೆಯ ನರಸಾಪುರ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ ಪ್ರಾಂಶುಪಾಲರು ದೂ.ಸಂ.08372-297221 ಮೊಬೈಲ್ ಸಂ-9448644074 ಅಥವಾ ಉಪನಿರ್ದೇಶಕರು ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಮಿನಿವಿಧಾನಸೌಧ ಆವರಣ, ಧಾರವಾಡ ಕಚೇರಿ ಅಥವಾ ದೂ ಸಂ,0836-2448834 ಸಂಪರ್ಕಿಸಬಹುದು   ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
 

 

 

Trending News