ಗೃಹ ರಕ್ಷಕ ದಳದ ನೇಮಕಾತಿಗೆ ಅರ್ಜಿ ಆಹ್ವಾನ: SSLC ಪಾಸಾದವರು ಇಂದೇ ಅರ್ಜಿ ಸಲ್ಲಿಸಿ

Home Guard Recruitment 2024: ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಲಿ ಇರುವ ಗೃಹರಕ್ಷಕ ಸ್ಥಾನಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Written by - Puttaraj K Alur | Last Updated : Jan 2, 2024, 07:43 PM IST
  • ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಲಿಯಿರುವ ಗೃಹರಕ್ಷಕ ಸ್ಥಾನಗಳ ಭರ್ತಿಗೆ ಅರ್ಜಿ ಆಹ್ವಾನ
  • SSLC ಪಾಸಾದ ಅಭ್ಯರ್ಥಿಗಳು ಜನವರಿ 5ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ
  • 19 ವರ್ಷ ವಯಸ್ಸಿನ ಅಭ್ಯರ್ಥಿಗಳು SSLC ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು
ಗೃಹ ರಕ್ಷಕ ದಳದ ನೇಮಕಾತಿಗೆ ಅರ್ಜಿ ಆಹ್ವಾನ: SSLC ಪಾಸಾದವರು ಇಂದೇ ಅರ್ಜಿ ಸಲ್ಲಿಸಿ title=
ನಿರುದ್ಯೋಗಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಲಿ ಇರುವ ಗೃಹರಕ್ಷಕ ಸ್ಥಾನಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಪಡೆದುಕೊಳ್ಳಲು ಜನವರಿ 5 ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸಲು ನಿಯಮಗಳು

1)19 ವರ್ಷ ವಯಸ್ಸಿನ ಅಭ್ಯರ್ಥಿಗಳು SSLC ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

2) ಉತ್ತಮ ಆರೋಗ್ಯ ಮತ್ತು ದೇಹದಾರ್ಢ್ಯತೆ ಹೊಂದಿರಬೇಕು.

3) ಕಂಪ್ಯೂಟರ್ ಟೈಪಿಂಗ್ (ಕನ್ನಡ ಮತ್ತು ಇಂಗ್ಲೀಷ್) ಡ್ರೈವರ್ಸ್, ಅಡುಗೆ ಭಟ್ಟರು, ಕಾರ್ಪೆಂಟರ್, ಎಲೆಕ್ಟ್ರೀಷಿಯನ್, ಪೈಂಟರ್ ಮತ್ತು ಪ್ಲಂಬರ್ ಇತ್ಯಾದಿ ಕೌಶಲ್ಯಗಳ ತರಬೇತಿ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.

ಇದನ್ನೂ ಓದಿ: ಕೈ-ಕಮಲ ನಾಯಕರ ನಡುವೆ ರಾಮಮಂದಿರ ರಾಜಕೀಯ.. ಸಿದ್ದರಾಮಯ್ಯಗೆ ಆಹ್ವಾನ ಇಲ್ಲ ಯಾಕೆ..?

ಆಸಕ್ತರು ಅರ್ಜಿ ನಮೂನೆಗಳನ್ನು ಸಮಾದೇಷ್ಟರವರ ಕಚೇರಿ, ಗೃಹರಕ್ಷಕ ದಳ, ಬೆಂಗಳೂರು ಉತ್ತರ ಜಿಲ್ಲೆ, ವೆಸ್ಟ್ ಆಫ್ ಕಾರ್ಡ್ ರಸ್ತೆ, ಅಗ್ನಿಶಾಮಕ ಠಾಣೆ ಪಕ್ಕ, ರಾಜಾಜಿನಗರ, ಬೆಂಗಳೂರು-560010 ಇಲ್ಲಿಗೆ ಸಲ್ಲಿಸಬೇಕು. ಅರ್ಜಿಗಳನ್ನು ಜನವರಿ 5ರವರೆಗೆ ಮಧ್ಯಾಹ್ನ 2.30ರಿಂದ 5ಗಂಟೆವರೆಗೆ ಉಚಿತವಾಗಿ ವಿತರಿಸಲಾಗುವುದು. ಅರ್ಜಿಯನ್ನು ಪಡೆಯುವ ಸಂದರ್ಭದಲ್ಲಿ ಜನ್ಮ ದಿನಾಂಕವುಳ್ಳ ಶಾಲೆಯ ಒರಿಜಿನಲ್ ಟಿಸಿ ಅಥವಾ ಒರಿಜಿನಲ್ ಅಂಕಪಟ್ಟಿ ಹಾಜರುಪಡಿಸಿ ಅರ್ಜಿ ಪಡೆಯಬಹುದು ಎಂದು ಬೆಂಗಳೂರು ಉತ್ತರ ಜಿಲ್ಲಾ ಹೋಮ್ ಗಾರ್ಡ್ಸ್ ಕಮಾಂಡೆಂಟ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಮಾದೇಷ್ಟರವರ ಕಚೇರಿ, ಗೃಹರಕ್ಷಕ ದಳ, ಬೆಂಗಳೂರು ಉತ್ತರ ಜಿಲ್ಲೆ, ವೆಸ್ಟ್ ಆಫ್ ಕಾರ್ಡ್ ರೋಡ್, ರಾಜಾಜಿನಗರ, ಬೆಂಗಳೂರು-560010 ಅಥವಾ ದೂರವಾಣಿ ಸಂಖ್ಯೆ 080-23142542ಯನ್ನು ಸಂಪರ್ಕಿಸಬಹುದು.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಗೂಂಡಾಗಳ ಪೋಷಣೆಗೆ ನಿಂತಂತಿದೆ: ವಿಜಯೇಂದ್ರ ಆಕ್ರೋಶ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News