ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳ ತರಬೇತಿಗಾಗಿ ಅರ್ಜಿ ಆಹ್ವಾನ

Horticulture Training: ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾಜ್ಯವಲಯ) ಧಾರವಾಡ ಕಛೇರಿ ಅಥವಾ ದೂರವಾಣಿ: 0836-2957801 ಗೆ ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Written by - Manjunath N | Last Updated : Mar 12, 2024, 04:43 PM IST
  • ಅಭ್ಯರ್ಥಿಗಳು ಅರ್ಜಿಯನ್ನು, ತೋಟಗಾರಿಕೆ ಉಪ ನಿರ್ದೇಶಕರು, ಜಿಲ್ಲಾ ಪಂಚಾಯತ ಧಾರವಾಡ ಕಛೇರಿಗೆ ಸಲ್ಲಿಸಬೇಕು
  • ಬ್ಯಾಂಕ್ ಡಿಮ್ಯಾಂಡ್ ಡ್ರಾಪ್ಟ್‍ನ್ನು ತೋಟಗಾರಿಕೆ ಉಪ ನಿರ್ದೇಶಕರು (ಜಿಪಂ) ಧಾರವಾಡ ಅವರ ಹೆಸರಿನಲ್ಲಿ ಪಡೆದು, ಅರ್ಜಿ ಜೊತೆಗೆ ಲಗತ್ತಿಸಬೇಕು
ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳ ತರಬೇತಿಗಾಗಿ ಅರ್ಜಿ ಆಹ್ವಾನ title=
ಸಾಂಧರ್ಭಿಕ ಚಿತ್ರ

ಧಾರವಾಡ: ಜಿಲ್ಲೆಯ ರೈತ ಮಕ್ಕಳಿಗಾಗಿ 2024-25 ನೇ ಸಾಲಿಗೆ, 10 ತಿಂಗಳ ಅವಧಿಗೆ ಗದಗ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಮಹಿಳಾ 5 ಹಾಗೂ ಪುರುಷ 10 ಸೇರಿ ಒಟ್ಟು 15 ಅಭ್ಯರ್ಥಿಗಳಿಗೆ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 

ಇದನ್ನೂ ಓದಿ- Lok Sabha Election 2024: ಚುನಾವಣೆಗೂ ಮುನ್ನ ಆನ್‌ಲೈನ್‌ನಲ್ಲಿ ವೋಟರ್ ಐಡಿ ವಿಳಾಸವನ್ನು ಸುಲಭವಾಗಿ ಅಪ್ಡೇಟ್ ಮಾಡಿ

ಅಭ್ಯರ್ಥಿಗಳು ಅರ್ಜಿಯನ್ನು, ತೋಟಗಾರಿಕೆ ಉಪ ನಿರ್ದೇಶಕರು, ಜಿಲ್ಲಾ ಪಂಚಾಯತ ಧಾರವಾಡ ಕಛೇರಿಗೆ ಸಲ್ಲಿಸಬೇಕು. ಸಾಮಾನ್ಯ ಅಭ್ಯರ್ಥಿಗಳಿಗೆ ರೂ. 30 ಮತ್ತು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ.15 ಮೌಲ್ಯದ ಇಂಡಿಯನ್ ಪೋಸ್ಟಲ್ ಆರ್ಡರ್ (ಐಪಿಓ) ಅಥವಾ ಬ್ಯಾಂಕ್ ಡಿಮ್ಯಾಂಡ್ ಡ್ರಾಪ್ಟ್‍ನ್ನು ತೋಟಗಾರಿಕೆ ಉಪ ನಿರ್ದೇಶಕರು (ಜಿಪಂ) ಧಾರವಾಡ ಅವರ ಹೆಸರಿನಲ್ಲಿ ಪಡೆದು, ಅರ್ಜಿ ಜೊತೆಗೆ ಲಗತ್ತಿಸಬೇಕು. 

ಇದನ್ನೂ ಓದಿ- ಅಂಗನವಾಡಿ ಕಾರ್ಯಕರ್ತರಿಗೆ ಕನಿಷ್ಠ ಎರಡು ಸಾವಿರ ರೂಪಾಯಿ ವೇತನ ಹೆಚ್ಚಳ : ನಿಯೋಗದೊಂದಿಗೆ ಮುಖ್ಯಮಂತ್ರಿಗೆ ಮನವಿ

ಅರ್ಜಿ ಫಾರಂಗಳನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾಜ್ಯವಲಯ) ಸ್ಟೇಷನ್ ರಸ್ತೆ, ಧಾರವಾಡ ಅವರ ಕಛೇರಿಯಲ್ಲಿ ಅಥವಾ ಇಲಾಖೆಯ ವೆಬ್‍ಸೈಟ್   https://horticulturedir.karnataka.gov.in ನಲ್ಲಿ ಮಾರ್ಚ 1, 2024 ರಿಂದ ಡೌನ್‍ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿ ಪೂರ್ಣ ಪ್ರಮಾಣದ ದಾಖಲಾತಿಗಳೊಂದಿಗೆ ಎಪ್ರೀಲ್ 1, 2024 ರ ಸಂಜೆ 5:30 ಗಂಟೆಯೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾಜ್ಯವಲಯ) ಧಾರವಾಡ ಕಛೇರಿ ಅಥವಾ ದೂರವಾಣಿ: 0836-2957801 ಗೆ ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News