ಸೇನೆ, ಯುನಿಫಾರ್ಮ್ ಸೇವೆಯ ಪೂರ್ವ ಸಿದ್ದತೆ ತರಬೇತಿಗಾಗಿ ಅರ್ಜಿ ಆಹ್ವಾನ

ಭಾರತೀಯ ಸೇನೆ/ ಇತರೆ ಯುನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ 2022-23ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ಉಚಿತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

Written by - Zee Kannada News Desk | Last Updated : Jan 28, 2023, 07:14 PM IST
  • ತರಬೇತಿಯನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಾತ್ರ ನೀಡಲಾಗುವುದು
  • ಕಛೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು
  • ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಇಲಾಖಾ ವೆಬ್-ಸೈಟ್ https://bcwd.karnataka.gov.in ನಿಂದ ಪಡೆಯಬಹುದಾಗಿದೆ
 ಸೇನೆ, ಯುನಿಫಾರ್ಮ್ ಸೇವೆಯ ಪೂರ್ವ ಸಿದ್ದತೆ ತರಬೇತಿಗಾಗಿ ಅರ್ಜಿ ಆಹ್ವಾನ title=
ಸಾಂದರ್ಭಿಕ ಚಿತ್ರ

ಬೆಂಗಳೂರು : ಭಾರತೀಯ ಸೇನೆ/ ಇತರೆ ಯುನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ 2022-23ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ಉಚಿತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಭಾರತೀಯ ಸೇನೆ/ ಇತರೆ ಯುನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2022-23ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು (ಬಾಲಕರಿಗೆ ಮಾತ್ರ) ಉಚಿತ ಊಟ ಮತ್ತು ವಸತಿಯೊಂದಿಗೆ ನೀಡುತ್ತಿದ್ದು, ತರಬೇತಿಗಾಗಿ ಅರ್ಹ ಅಭ್ಯರ್ಥಿಗಳು ಅರ್ಜಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ಗ್ವಾಲಿಯರ್ ಬಳಿ ಸುಖೋಯ್, ಮಿರಜ್ ಫೈಟರ್ ಜೆಟ್ ಪತನ, 1 ಪೈಲಟ್ ಸಾವು

ಅರ್ಜಿ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನವಾಗಿದ್ದು, ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಟ ವಾರ್ಷಿಕ ಆದಾಯ ಮಿತಿ ಪ್ರವರ್ಗ-1 ಕ್ಕೆ ರೂ.2.50 ಲಕ್ಷಗಳು ಹಾಗೂ ಪ್ರವರ್ಗ-2ಎ, 3ಎ, 3ಬಿ ಗಳಿಗೆ ರೂ 1 ಲಕ್ಷಗಳಿರಬೇಕು. ಕನಿಷ್ಟ ವಿದ್ಯಾರ್ಹತೆ ಅಭ್ಯರ್ಥಿಯು 10ನೇ ತರಗತಿಯನ್ನು ಉತ್ತಿರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಟ 33 ಅಂಕಗಳನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಂ ಇದ್ದಲ್ಲಿ ಈ ಸಮಾನವಾದ ಗ್ರೇಡ್ ಪಡೆದಿರಬೇಕು. ವಯೋಮಿತಿ ಡಿಸೆಂಬರ್ 31,2023ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯ ವಯಸ್ಸು 17.5 ವರ್ಷದಿಂದ 20 ವರ್ಷಗಳ ವಯಸ್ಸಿನ ಒಳಗಿರಬೇಕು (ಅಭ್ಯರ್ಥಿಯು 01 ಡಿಸೆಂಬರ್ 2003 ರಿಂದ 01 ಜುಲೈ 2006 ರ ದಿನಾಂಕಗಳ ನಡುವೆ ಜನಸಿರಬೇಕು.)

ತರಬೇತಿ ನೀಡುವ ಸ್ಥಳಗಳು: ತರಬೇತಿಯನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಾತ್ರ ನೀಡಲಾಗುವುದು. ಅಭ್ಯರ್ಥಿಗಳು ಈ ಮೂರು ಜಿಲ್ಲೆಗಳಲ್ಲಿ ತರಬೇತಿಗೆ ಆಯ್ಕೆ ಮಾಡಿಕೊಳ್ಳುವ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು.

ಇದನ್ನೂ ಓದಿ: ಫೀಲ್ಡ್ ಮಾರ್ಷಲ್ ಕೆಎಂ ಕಾರ್ಯಪ್ಪ ಜನ್ಮದಿನ: ಶತ್ರುಗಳೂ ಸೆಲ್ಯೂಟ್ ಹೊಡೆದ ಭಾರತೀಯ ವೀರ ಯೋಧನ ಸ್ಮರಣೆ

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಇಲಾಖಾ ವೆಬ್-ಸೈಟ್ https://bcwd.karnataka.gov.in ನಿಂದ ಪಡೆಯಬಹುದಾಗಿದೆ. ಅಥವಾ ಸಹಾಯವಾಣಿ ದಕ್ಷಿಣ ಕನ್ನಡ ಜಿಲ್ಲೆ: ದೂ.ಸಂ. 0824-2225078, ಉಡುಪಿ ಜಿಲ್ಲೆ: ದೂ.ಸಂ:0820-2574881, ಉತ್ತರ ಕನ್ನಡ ಜಿಲ್ಲೆ :08382- 226589, ಕೇಂದ್ರ ಕಛೇರಿ: 8050770004 ಗೆ ಸಂಪರ್ಕಿಸಬಹುದು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News