ಆರ್‌ಸೆಟಿ ಸಂಸ್ಥೆಯಿಂದ ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆಯಿಂದ ಟಿವಿ ಟೆಕ್ನಿಷಿಯನ್, ಸೋಲಾರ್ ಟೆಕ್ನಿಷಿಯನ್ ಮತ್ತು ಜೆಸಿಬಿ ಆಪರೇಟರ್ ತರಬೇತಿಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, ಆಸಕ್ತ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.

Written by - Manjunath N | Last Updated : Jan 8, 2024, 11:49 PM IST
  • ಜನವರಿ ಮತ್ತು ಫೆಬ್ರವರಿ ಮಾಹೆಗಳಲ್ಲಿ ಟಿವಿ ಟೆಕ್ನಿಷಿಯನ್, ಸೋಲಾರ್ ಟೆಕ್ನಿಷಿಯನ್ ಮತ್ತು ಜೆಸಿಬಿ ಆಪರೇಟರ್ ತರಬೇತಿಗಳನ್ನು ನೀಡಲಾಗುತ್ತದೆ.
  • ಈ ತರಬೇತಿಗಳು ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿವೆ.
  • ತರಬೇತಿಯು ಊಟ ಹಾಗೂ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು, ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ಆರ್‌ಸೆಟಿ ಸಂಸ್ಥೆಯಿಂದ ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ title=

ಕೊಪ್ಪಳ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆಯಿಂದ ಟಿವಿ ಟೆಕ್ನಿಷಿಯನ್, ಸೋಲಾರ್ ಟೆಕ್ನಿಷಿಯನ್ ಮತ್ತು ಜೆಸಿಬಿ ಆಪರೇಟರ್ ತರಬೇತಿಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, ಆಸಕ್ತ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಆಸ್ಪತ್ರೆಗೆ ತೆರಳುವ ಮಾರ್ಗ ಮಧ್ಯೆದಲ್ಲಿಯೇ ಹೆರಿಗೆ..!

18 ರಿಂದ 45 ವಯೋಮಾನದ ನಿರುದ್ಯೋಗಿ ಯುವಕರಿಗಾಗಿ ಜನವರಿ ಮತ್ತು ಫೆಬ್ರವರಿ ಮಾಹೆಗಳಲ್ಲಿ ಟಿವಿ ಟೆಕ್ನಿಷಿಯನ್, ಸೋಲಾರ್ ಟೆಕ್ನಿಷಿಯನ್ ಮತ್ತು ಜೆಸಿಬಿ ಆಪರೇಟರ್ ತರಬೇತಿಗಳನ್ನು ನೀಡಲಾಗುತ್ತದೆ. ಈ ತರಬೇತಿಗಳು ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿವೆ. ತರಬೇತಿಯು ಊಟ ಹಾಗೂ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು, ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿಂದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳ ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ನೀಡಲಾಗುತ್ತದೆ.

ಇದನ್ನೂ ಓದಿ: ಕೆಪಿಸಿಸಿ ಕಚೇರಿಯಲ್ಲಿ ಲೋಕಸಭೆ ಬಗ್ಗೆ ಮಹತ್ವದ ಮೀಟಿಂಗ್‌

ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳನ್ನು ನೋಂದಾಯಿಸಲು ಜನವರಿ 17 ಕೊನೆಯ ದಿನವಾಗಿದೆ. ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ, ಆರ್‌ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ವಿಳಾಸಕ್ಕೆ ಅಥವಾ ಮೊ.ಸಂ: 8217236973, 9483485489, 9482188780 ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News