ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿಗಾಗಿ ಅರ್ಜಿ ಆಹ್ವಾನ

ಜಿಲ್ಲೆಯ ರೈತ ಮಕ್ಕಳಿಗೆ 2023-24 ನೇ ಸಾಲಿಗೆ, 10 ತಿಂಗಳ ಅವಧಿಗೆ ಅಂದರೆ ಜೂನ್.1, 2023 ರಿಂದ ಮಾರ್ಚ್ 30, 2024 ರ ವರೆಗೆ ಗದಗ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 5 ಮಹಿಳೆಯರಿಗೆ ಹಾಗೂ 10 ಪುರುಷರಿಗೆ ಸೇರಿ ಒಟ್ಟು-15 ಅಭ್ಯರ್ಥಿಗಳಿಗೆ ತೋಟಗಾರಿಕಾ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

Written by - Zee Kannada News Desk | Last Updated : May 17, 2023, 09:29 PM IST
  • ಅಭ್ಯರ್ಥಿಗಳು ಅರ್ಜಿಗಳನ್ನು ಧಾರವಾಡ ಜಿಲ್ಲೆಯ ತೋಟಗಾರಿಕೆ ಉಪನಿರ್ದೇಶಕರು, ಜಿಲ್ಲಾ ಪಂಚಾಯತ, ಧಾರವಾಡ ಇವರ ಕಛೇರಿಯಲ್ಲಿ ಸಲ್ಲಿಸಬೇಕು
  • ದೂ.ಸಂ:0836-2957801 ಸಂಪರ್ಕಿಸಬೇಕೆಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿಗಾಗಿ ಅರ್ಜಿ ಆಹ್ವಾನ title=
ಸಾಂದರ್ಭಿಕ ಚಿತ್ರ

ಧಾರವಾಡ : ಜಿಲ್ಲೆಯ ರೈತ ಮಕ್ಕಳಿಗೆ 2023-24 ನೇ ಸಾಲಿಗೆ, 10 ತಿಂಗಳ ಅವಧಿಗೆ ಅಂದರೆ ಜೂನ್.1, 2023 ರಿಂದ ಮಾರ್ಚ್ 30, 2024 ರ ವರೆಗೆ ಗದಗ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 5 ಮಹಿಳೆಯರಿಗೆ ಹಾಗೂ 10 ಪುರುಷರಿಗೆ ಸೇರಿ ಒಟ್ಟು-15 ಅಭ್ಯರ್ಥಿಗಳಿಗೆ ತೋಟಗಾರಿಕಾ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಸಿಎಂ ಸ್ಥಾನಕ್ಕೆ ಸಿದ್ದು ಹೆಸರು ಘೋಷಣೆ : ಡಿಕೆಶಿ ತವರಲ್ಲಿ ಖಾಕಿ ಹೈ ಅರ್ಲಟ್‌

ಅಭ್ಯರ್ಥಿಗಳು ಅರ್ಜಿಗಳನ್ನು ಧಾರವಾಡ ಜಿಲ್ಲೆಯ ತೋಟಗಾರಿಕೆ ಉಪನಿರ್ದೇಶಕರು, ಜಿಲ್ಲಾ ಪಂಚಾಯತ, ಧಾರವಾಡ ಇವರ ಕಛೇರಿಯಲ್ಲಿ ಸಲ್ಲಿಸಬೇಕು. ಅರ್ಜಿ ಶುಲ್ಕದ ಮೊತ್ತ ಸಾಮಾನ್ಯ ಅಭ್ಯರ್ಥಿಗಳಿಗೆ ರೂ. 30/- ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ.15/- ಮೌಲ್ಯದ ಇಂಡಿಯನ್ ಪೋಸ್ಟಲ್ ಆರ್ಡರ್ ಅಥವಾ ಬ್ಯಾಂಕ್ ಡಿಮ್ಯಾಂಡ್ ಡ್ರಾಫ್ಟ್‍ನ್ನು ತೋಟಗಾರಿಕೆ ಉಪನಿರ್ದೇಶಕರು (ಜಿಪಂ) ಧಾರವಾಡ ರವರ ಹೆಸರಿನಲ್ಲಿ ಪಡೆದು, ಅರ್ಜಿ ಜೊತೆಗೆ ಲಗತ್ತಿಸಬೇಕು.

ಇದನ್ನೂ ಓದಿ: ಸಂಪೂರ್ಣ ಬಹುಮತವಿದ್ದರೂ ಕಾಂಗ್ರೆಸ್ ಸರ್ಕಾರ ರಚಿಸುತ್ತಿಲ್ಲ. ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ‌

ಅರ್ಜಿ ಫಾರಂಗಳನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾಜ್ಯವಲಯ) ಸ್ಟೇಷನ್ ರಸ್ತೆ, ಧಾರವಾಡ ರವರ ಕಛೇರಿಯಲ್ಲಿ ಅಥವಾ ಇಲಾಖಾ ವೆಬ್‍ಸೈಟ್ https://horticulturedir.karnataka.gov.in ನಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿ ಪೂರ್ಣ ಪ್ರಮಾಣದ ದಾಖಲಾತಿಗಳೊಂದಿಗೆ ಮೇ.22 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾಜ್ಯವಲಯ) ಧಾರವಾಡ ಇವರ ಕಛೇರಿ ದೂ.ಸಂ:0836-2957801 ಸಂಪರ್ಕಿಸಬೇಕೆಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News