ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಿ.ಎಚ್.ಡಿ ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2023-24 ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಎಚ್.ಡಿ. ಅಧ್ಯಯನ ಪ್ರಾರಂಭಿಸಿರುವ (ದಿನಾಂಕ:30.01.2023 ಮತ್ತು ಅದರ ನಂತರ ಪ್ರಥಮ ವರ್ಷದ ಪಿ.ಎಚ್.ಡಿ ಪ್ರಾರಂಭಿಸಿರಬೇಕು) ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ವ್ಯಾಸಂಗ ವೇತನ/ಫೆಲೋಶಿಪ್‌ಗಾಗಿ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

Written by - Manjunath N | Last Updated : Dec 27, 2023, 11:42 PM IST
  • ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು
  • ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಅಥವಾ 3ಬಿ ಗೆ ಸೇರಿರಬೇಕು
  • ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿ ಪ್ರವರ್ಗ-1 ಕ್ಕೆ ರೂ.4.50 ಲಕ್ಷ ಹಾಗೂ ಪ್ರವರ್ಗ-2ಎ, 3ಎ, 3ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರೆ ಅವರಿಗೆ ರೂ.3.50 ಲಕ್ಷ ನಿಗದಿಪಡಿಸಲಾಗಿದೆ
 ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಿ.ಎಚ್.ಡಿ ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನ title=

ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2023-24 ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಎಚ್.ಡಿ. ಅಧ್ಯಯನ ಪ್ರಾರಂಭಿಸಿರುವ (ದಿನಾಂಕ:30.01.2023 ಮತ್ತು ಅದರ ನಂತರ ಪ್ರಥಮ ವರ್ಷದ ಪಿ.ಎಚ್.ಡಿ ಪ್ರಾರಂಭಿಸಿರಬೇಕು) ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ವ್ಯಾಸಂಗ ವೇತನ/ಫೆಲೋಶಿಪ್‌ಗಾಗಿ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಇದನ್ನೂ ಓದಿ: ಎಷ್ಟೊಂದು ಐಷಾರಾಮಿಯಾಗಿದೆ ನೋಡಿ ವಿರಾಟ್ ಕೊಹ್ಲಿಯ ಸಾವಿರ ಕೋಟಿ ಸಾಮ್ರಾಜ್ಯ

2023-24 ನೇ ಸಾಲಿನಲ್ಲಿ ಕರ್ನಾಟಕದ ಶಾಸನಬದ್ದ ವಿಶ್ವವಿದ್ಯಾಲಯಗಳಲ್ಲಿ/ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿ.ಎಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆಫ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜನವರಿ 10 ಕೊನೆಯ ದಿನವಾಗಿದೆ.

ಹೆಚ್ಚಿನ ವಿವರಗಳು ಇಲಾಖಾ ವೆಬ್‌ಸೈಟ್ https://bcwd.karnataka.gov.in ನಲ್ಲಿ ಲಭ್ಯವಿದ್ದು, ಅಭ್ಯರ್ಥಿಗಳು ಎಲ್ಲಾ ಮಾಹಿತಿಯನ್ನು ಓದಿ, ತಿಳಿದುಕೊಂಡು ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಅಥವಾ 3ಬಿ ಗೆ ಸೇರಿರಬೇಕು. ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿ ಪ್ರವರ್ಗ-1 ಕ್ಕೆ ರೂ.4.50 ಲಕ್ಷ ಹಾಗೂ ಪ್ರವರ್ಗ-2ಎ, 3ಎ, 3ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರೆ ಅವರಿಗೆ ರೂ.3.50 ಲಕ್ಷ ನಿಗದಿಪಡಿಸಲಾಗಿದೆ. ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ.55 ಅಂಕಗಳನ್ನು ಪಡೆದಿರಬೇಕು. ಅಭ್ಯರ್ಥಿಗಳು ಪೂರ್ಣಾವಧಿ ಪಿ.ಎಚ್.ಡಿ ಅಧ್ಯಯನಕ್ಕಾಗಿ ಮಾಡಿಸುವ ನೋಂದಣಿ ದಿನಾಂಕವು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುವ ವ್ಯಾಸಂಗ ವೇತನ/ಫೆಲೋಶಿಪ್‌ಗಾಗಿ ಅರ್ಜಿ ಸಲ್ಲಿಸಲು ನಿಗದಿಪಡಿಸುವ ಕೊನೆಯ ದಿನಾಂಕಕ್ಕೆ ಹಿಂದಿನ 2 ವರ್ಷದೊಳಗಿದ್ದು, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಾಲಿನಿಂದ ಪ್ರಥಮ ವರ್ಷದ ಪಿಎಚ್.ಡಿ ಅಧ್ಯಯನದಲ್ಲಿ ತೊಡಗಿರಬೇಕು.

ಇದನ್ನೂ ಓದಿ: ನೆಲ, ಜಲ, ಭಾಷೆ ವಿಚಾರದಲ್ಲಿ ರಾಜಿ ಪ್ರಶ್ನೆಯೇ ಇಲ್ಲ: ಸಚಿವ ಶಿವರಾಜ್ ತಂಗಡಗಿ

ಸಹಾಯಕ್ಕಾಗಿ ಸಹಾಯವಾಣಿ ಸಂಖ್ಯೆ: 8050770004 (ಕಛೇರಿ ಕಾರ್ಯನಿರ್ವಹಿಸುವ ಸಮಯ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30 ರವರೆಗೆ, ಸಾರ್ವಜನಿಕ ರಜಾ ದಿನಗಳನ್ನು ಹೊರತು ಪಡಿಸಿ) ಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News