Job Alert: ಉಪ ಯೋಜನಾ ನಿರ್ದೇಶಕರ ಹುದ್ದೆಗೆ ಅರ್ಜಿ ಆಹ್ವಾನ

Deputy Project Director: ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಖಾಲಿ ಇರುವ 1 ಉಪ ಯೋಜನಾ ನಿರ್ದೇಶಕರ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ 2023-24ನೇ ಸಾಲಿನ ಸೀಮಿತ ಅವಧಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Written by - Zee Kannada News Desk | Last Updated : Jul 13, 2023, 08:03 PM IST
  • ಮಡಿಕೇರಿಯ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಉಪಯೋಜನಾ ನಿರ್ದೇಶಕರ ಹುದ್ದೆಗೆ ಅರ್ಜಿ ಆಹ್ವಾನ
  • ಕನಿಷ್ಠ 5 ವರ್ಷ ಕೃಷಿ ವಿಸ್ತರಣಾ ಮತ್ತು ಸಂಬಂಧಿತ ಚಟುವಟಿಕೆಯಲ್ಲಿ ಅನುಭವ ಹೊಂದಿರಬೇಕು
  • ಗರಿಷ್ಠ 45 ವರ್ಷದೊಳಗಿರಬೇಕು & ಆಯ್ಕೆಯಾದವರಿಗೆ ಮಾಸಿಕ 42 ಸಾವಿರ ರೂ. ಗೌರವ ಧನ ನೀಡಲಾಗುತ್ತದೆ
Job Alert: ಉಪ ಯೋಜನಾ ನಿರ್ದೇಶಕರ ಹುದ್ದೆಗೆ ಅರ್ಜಿ ಆಹ್ವಾನ title=
ಉಪಯೋಜನಾ ನಿರ್ದೇಶಕರ ಹುದ್ದೆಗೆ ಅರ್ಜಿ ಆಹ್ವಾನ

ಕೊಡಗು: ಕೇಂದ್ರ ಸರ್ಕಾರದ ಪುರಸ್ಕೃತ ಯೋಜನೆಯಾದ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ(ಆತ್ಮ) ಯೋಜನೆಯಡಿ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಉಪ ಯೋಜನಾ ನಿರ್ದೇಶಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಖಾಲಿ ಇರುವ 1 ಉಪ ಯೋಜನಾ ನಿರ್ದೇಶಕರ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ 2023-24ನೇ ಸಾಲಿನ ಸೀಮಿತ ಅವಧಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಅಂಗನವಾಡಿಗಳಿಗೆ ಕಳಪೆ ಮೊಟ್ಟೆ ಪೂರೈಕೆ ಮಾಡಿದವರ ವಿರುದ್ಧ ಕಠಿಣ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಎಂ.ಎಸ್ಸಿ(ಕೃಷಿ/ ತೋಟಗಾರಿಕೆ/ಮೀನುಗಾರಿಕೆ/ಅರಣ್ಯ ಮತ್ತು ರೇಷ್ಮೆ) ವಿದ್ಯಾರ್ಹತೆ ಹೊಂದಿರಬೇಕು. ಕನಿಷ್ಠ 5 ವರ್ಷ ಕೃಷಿ ವಿಸ್ತರಣಾ ಮತ್ತು ಸಂಬಂಧಿತ ಚಟುವಟಿಕೆಯಲ್ಲಿ ಅನುಭವ ಹೊಂದಿರಬೇಕು. ಎಂಎಸ್ ಆಫೀಸ್ನಲ್ಲಿ ಪರಿಣಿತಿ ಇರಬೇಕು. ಗರಿಷ್ಠ 45 ವರ್ಷದೊಳಗಿರಬೇಕು. ಆಯ್ಕೆಯಾದವರಿಗೆ ಮಾಸಿಕ 42 ಸಾವಿರ ರೂ. ಗೌರವ ಧನ ನೀಡಲಾಗುತ್ತದೆ.

ಉಪ ಯೋಜನಾ ನಿರ್ದೇಶಕರ ಹುದ್ದೆಗೆ ಅರ್ಹರಿರುವ ಅಭ್ಯರ್ಥಿಗಳು ಜುಲೈ 25ರೊಳಗೆ ಕಚೇರಿ ವೇಳೆಯಲ್ಲಿ ಕೊಡಗು ಜಿಲ್ಲೆ ಮಡಿಕೇರಿಯ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಂಟಿ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಇದನ್ನೂ ಓದಿ: ಮರು ಜೀವ ಪಡೆಯಿತ್ತಿರೋ 2000 ವರ್ಷದ ಹುಣಸೆ ಮರ...!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News