ಕ್ರೀಡಾ ಸಚಿವಾಲಯದ ಯುವ ಸ್ವಯಂ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ಭಾರತ ಸರ್ಕಾರ ಯುವ ಕಾರ್ಯಕ್ರಮ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರದಿಂದ 2022-23 ನೇ ಸಾಲಿಗಾಗಿ ರಾಷ್ಟ್ರೀಯ ಯುವ ಸ್ವಯಂ ಕಾರ್ಯಕರ್ತರ ತಾತ್ಕಾಲಿಕ ಹುದ್ದೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

Written by - Zee Kannada News Desk | Last Updated : Feb 24, 2023, 08:34 AM IST
  • ಅರ್ಜಿ ಸಲ್ಲಿಸಲು ಕೊನೆಯ ದಿನ ಮಾರ್ಚ್ 9 ಆಗಿರುತ್ತದೆ
  • ಅರ್ಜಿಯನ್ನು ಆನ್‍ಲೈನ್ ಮೂಲಕ www.nvks.org ನಲ್ಲಿ ಸಲ್ಲಿಸಬೇಕು
  • ನಕಲು ಪ್ರತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಆವರಣದ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು
ಕ್ರೀಡಾ ಸಚಿವಾಲಯದ ಯುವ ಸ್ವಯಂ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ title=
ಸಾಂದರ್ಭಿಕ ಚಿತ್ರ

ಬಳ್ಳಾರಿ:  ಭಾರತ ಸರ್ಕಾರ ಯುವ ಕಾರ್ಯಕ್ರಮ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರದಿಂದ 2022-23 ನೇ ಸಾಲಿಗಾಗಿ ರಾಷ್ಟ್ರೀಯ ಯುವ ಸ್ವಯಂ ಕಾರ್ಯಕರ್ತರ ತಾತ್ಕಾಲಿಕ ಹುದ್ದೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ನಗರ ಮತ್ತು ಗ್ರಾಮಾಂತರ ಯುವ ಜನರಿಗಾಗಿ ಕೇಂದ್ರ ಸರ್ಕಾರದ ಯುವ ಪರ ಕಾರ್ಯಕ್ರಮಗಳನ್ನು ಸಂಘಟಿಸುವುದು ಹಾಗೂ ಯುವಕ-ಯುವತಿ, ಮಹಿಳಾ ಮಂಡಳಿಗಳನ್ನು ರಚಿಸುವುದು ಕಾರ್ಯಕರ್ತರ ಕೆಲಸವಾಗಿದೆ.

ಇದನ್ನೂ ಓದಿ: ಕಾರ್ಪೇಂಟರ್ ಅಡ್ಡಗಟ್ಟಿ ಕತ್ತು ಕೊಯ್ದು ಬರ್ಬರ ಹತ್ಯೆ

ಅರ್ಹತೆಗಳು: ವಯಸ್ಸು 29 ವರ್ಷದೊಳಗಿನವರಾಗಿರಬೇಕು. ಆಯಾ ತಾಲೂಕಿನವರು ತಮ್ಮ ತಾಲೂಕಿಗೆ ಮಾತ್ರ ಕೆಲಸ ನಿರ್ವಹಿಸಲು ಅರ್ಜಿ ಸಲ್ಲಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.5 ಸಾವಿರ ಗೌರವಧನ (ಪ್ರವಾಸ ಭತ್ಯೆ ಸೇರಿ) ನೀಡಲಾಗುವುದು. ಹುದ್ದೆಯು 1 ವರ್ಷದ ಅವಧಿಗೆ ಮಾತ್ರ ಸೀಮಿತವಾಗಿದ್ದು, ಗ್ರಾಮೀಣ ಪ್ರದೇಶ, ಯುವತಿ, ಯುವಕ, ಮಹಿಳಾ ಮಂಡಳಿ ಸದಸ್ಯರಿಗೆ, ಎನ್‍ಸಿಸಿ, ಎನ್‍ಎಸ್‍ಎಸ್, ಕ್ರೀಡೆ, ಸ್ಕೌಟ್ಸ್ ಮತ್ತು ಗೈಡ್ಸ್‍ನಲ್ಲಿದ್ದವರಿಗೆ ಹಾಗೂ ಪದವಿದರರಿಗೆ ಆದ್ಯತೆ ನೀಡಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನ ಮಾರ್ಚ್ 9 ಆಗಿರುತ್ತದೆ. ಅರ್ಜಿಯನ್ನು ಆನ್‍ಲೈನ್ ಮೂಲಕ www.nvks.org ನಲ್ಲಿ ಸಲ್ಲಿಸಬೇಕು. ನಕಲು ಪ್ರತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಆವರಣದ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.

ಇದನ್ನೂ ಓದಿ: ಬಾಡೂಟದ ಬಳಿಕ ದೇವಸ್ಥಾನಕ್ಕೆ ತೆರಳಿದ ಸಿ ಟಿ ರವಿ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

ಹೆಚ್ಚಿನ ಮಾಹಿತಿಗಾಗಿ ದೂ.08392-276839 ಗೆ ಸಂಪರ್ಕಿಸಬಹುದು ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಮೊಂಟು ಪಾತರ್ ಅವರು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

Trending News