ಮಂಗಳೂರಿನಲ್ಲಿ ಸರ್ಕಾರಿ ಉದ್ಯೋಗಕ್ಕೆ ಇಂದೇ ಅರ್ಜಿ ಸಲ್ಲಿಸಿ; ತಿಂಗಳಿಗೆ 1.60 ಲಕ್ಷ ಸಂಬಳ!

MRPL Recruitment 2024: ಒಟ್ಟು 11 ಅಸಿಸ್ಟೆಂಟ್ ಎಕ್ಸಿಕ್ಯೂಟಿವ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಫೆಬ್ರವರಿ 26 ಕೊನೆಯ ದಿನವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

Written by - Puttaraj K Alur | Last Updated : Feb 25, 2024, 04:46 PM IST
  • ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ನಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ
  • ಒಟ್ಟು 11 ಅಸಿಸ್ಟೆಂಟ್ ಎಕ್ಸಿಕ್ಯೂಟಿವ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು
  • ಅರ್ಜಿ ಸಲ್ಲಿಸಲು ಫೆಬ್ರವರಿ 26 ಕೊನೆಯ ದಿನವಾಗಿದ್ದು, ಆನ್​​ಲೈನ್ ಮೂಲಕ ಅಪ್ಲೈ ಮಾಡಬಹುದು
ಮಂಗಳೂರಿನಲ್ಲಿ ಸರ್ಕಾರಿ ಉದ್ಯೋಗಕ್ಕೆ ಇಂದೇ ಅರ್ಜಿ ಸಲ್ಲಿಸಿ; ತಿಂಗಳಿಗೆ 1.60 ಲಕ್ಷ ಸಂಬಳ! title=
MRPL Recruitment 2024

ಮಂಗಳೂರು: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್(MRPL)ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 11 ಅಸಿಸ್ಟೆಂಟ್ ಎಕ್ಸಿಕ್ಯೂಟಿವ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಫೆಬ್ರವರಿ 26 ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆ: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ MBA, ಮಾರ್ಕೆಟಿಂಗ್/ಇಂಟರ್​​ನ್ಯಾಷನಲ್ ಟ್ರೇಡ್​ನಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ: ಮೈತ್ರಿಯಿಂದ ಬಿಸಿ ತುಪ್ಪ ನುಂಗುವಂತಾಯ್ತಾ HDK ಸ್ಥಿತಿ..?

ವಯೋಮಿತಿ: ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 24ಕ್ಕೆ ಗರಿಷ್ಠ 27 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ: OBC (NCL) ಅಭ್ಯರ್ಥಿಗಳಿಗೆ 3 ವರ್ಷಗಳು ಮತ್ತು PwBD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ

ಅರ್ಜಿ ಶುಲ್ಕ: SC/ST/PwBD/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಆದರೆ, ಸಾಮಾನ್ಯ/OBC (NCL)/EWS ಅಭ್ಯರ್ಥಿಗಳು 118 ರೂ.ವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.

ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹50,000 ರಿಂದ ₹1,60,000 ರೂ. ಸಂಬಳ ನೀಡಲಾಗತ್ತದೆ.

ಆಯ್ಕೆ ಪ್ರಕ್ರಿಯೆ: ಗುಂಪು ಚರ್ಚೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ..?: ಅಭ್ಯರ್ಥಿಗಳು https://advt93.recttindia.in/ ಲಿಂಕ್‌ ಕ್ಲಿಕ್‌ ಮಾಡಿ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.   

ಇದನ್ನೂ ಓದಿ: ದೇಶದ ಅತೀ ಉದ್ದದ ಕೇಬಲ್‌ ಸೇತುವೆ ʻಸುದರ್ಶನ ಸೇತುʼ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News