SSLC Exam 2023 : ಎಸ್​ಎಸ್ಎಲ್​ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್!

BMTC : ಎಸ್​ಎಸ್ಎಲ್​ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇದಾಗಿದೆ. ಮಾರ್ಚ್ 31 ರಿಂದ ಆರಂಭವಾಗಲಿರುವ ಪರೀಕ್ಷೆ ಬರೆಯುವ ಬೆಂಗಳೂರಿನ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ ನೀಡಲಾಗುತ್ತಿದೆ ಎಂದು ಬಿಎಂಟಿಸಿ ಪ್ರಕಟಣೆ ಹೊರಡಿಸಿದೆ.

Written by - Channabasava A Kashinakunti | Last Updated : Mar 26, 2023, 09:05 AM IST
  • ಎಸ್​ಎಸ್ಎಲ್​ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
  • ಮಾರ್ಚ್ 31 ರಿಂದ ಆರಂಭವಾಗಲಿರುವ ಪರೀಕ್ಷೆ
  • ಬೆಂಗಳೂರಿನ ಎಲ್ಲಾ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಬಸ್ ಸೇವೆ
SSLC Exam 2023 : ಎಸ್​ಎಸ್ಎಲ್​ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್! title=

ಬೆಂಗಳೂರು : ಎಸ್​ಎಸ್ಎಲ್​ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇದಾಗಿದೆ. ಮಾರ್ಚ್ 31 ರಿಂದ ಆರಂಭವಾಗಲಿರುವ ಪರೀಕ್ಷೆ ಬರೆಯುವ ಬೆಂಗಳೂರಿನ ಎಲ್ಲಾ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಬಸ್ ಸೇವೆ ನೀಡಲಾಗುತ್ತಿದೆ ಎಂದು  ಪ್ರಕಟಣೆ ಹೊರಡಿಸಿದೆ.

ವಿದ್ಯಾರ್ಥಿಗಳು ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೂ ಉಚಿತ ಸೇವೆ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಪ್ರವೇಶ ಪತ್ರ ತೋರಿಸುವ ಮೂಲಕ ಉಚಿತ ಬಸ್ ಪ್ರಯಾಣ ಬೆಳೆಸಬಹುದು. ಪ್ರತೀ ಪರೀಕ್ಷಾ ಕೇಂದ್ರಗಳ ಬಳಿಗೆ ವಿಶೇಷ ಬಿಎಂಟಿಸಿ ಬಸ್ ಗಳ ಸೇವೆ ಕಲ್ಪಿಸಲಾಗುತ್ತಿದೆ. ಹೆಚ್ಚುವರಿ ಕಾರ್ಯಾಚರಣೆ ಅಗತ್ಯವಿದ್ದಲ್ಲಿ ಕಾರ್ಯಾಚರಣೆಗೆ ಬಸ್ ಗಳು ಸಿದ್ದವಿದೆ. ಈ ವಿಶೇಷ ಬಸ್ ಗಳ ಸೇವೆಯನ್ನ ವಿದ್ಯಾರ್ಥಿಗಳು ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ : ಮುಸ್ಲಿಮರಿಗೆ ಮೀಸಲಾತಿ ರದ್ದತಿ: ಬೊಮ್ಮಾಯಿ ತಮ್ಮ ತಂದೆಯ ಸಿದ್ಧಾಂತಗಳಿಗೆ ತಿಲಾಂಜಲಿ ಹಾಕಿದ್ರು - ಸಿ.ಎಂ ಇಬ್ರಾಹಿಂ

2022-23ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯು ದಿನಾಂಕ 31-03-2023 ರಿಂದ 15-04-2023ರವರೆಗೆ ನಡೆಯಲಿದೆ. ಹಾಗೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಸಂದರ್ಭದಲ್ಲಿ ಉಚಿತ ಬಸ್‌ ಪ್ರಯಾಣ ಸೌಲಭ್ಯವನ್ನು ಕೆಎಸ್‌ಆರ್‌ಟಿಸಿ ಕಲ್ಪಿಸಿದೆ. ಜೊತೆಗೆ ಬಸ್‌ ಸಂಚರಿಸುವ ಮಾರ್ಗದಲ್ಲಿ ವಿದ್ಯಾರ್ಥಿಗಳಿಗಾಗಿ ಕೋರಿಕೆ ನಿಲುಗಡೆ ಮಾಡುವಂತೆ ಸಿಬ್ಬಂದಿಗಳಿಗೆ ಸೂಚನೆ ನೀಡಿದೆ. ಹಾಗೆಯೇ ಈ ಬಗ್ಗೆ ಕೆಎಸ್ ಆರ್ ಟಿಸಿಯಿಂದ ಸುತ್ತೋಲೆ ಹೊರಡಿಸಿದ್ದು, ಎಸ್ ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ತೆರಳಲು ಉಚಿತ ಬಸ್ ಪ್ರಯಾಣದ ಅವಕಾಶ ನೀಡುವಂತೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕೋರಿದ್ದಾರೆ ಎನ್ನಲಾಗಿದೆ.

ಮಾರ್ಚ್ / ಏಪ್ರಿಲ್ 2023ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವೇಳಾಪಟ್ಟಿ :

31-03-2023 – ಪ್ರಥಮ ಭಾಷೆ
03-04-2023 -ಗಣಿತ ಶಾಸ್ತ್ರ
06-04-2023- ದ್ವಿತೀಯ ಭಾಷೆ
10-04-2023- ವಿಜ್ಞಾನ
12-04-2023- ತೃತೀಯ ಭಾಷೆ
15-04-2023 – ಸಮಾಜ ವಿಜ್ಞಾನ

ಇದನ್ನೂ ಓದಿ : ರಾಜ್ಯ ಸರಕಾರದಿಂದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News