BHEL Recruitment 2024: ತಿಂಗಳಿಗೆ 95 ಸಾವಿರ ಸಂಬಳ ನೀಡುವ ಈ ಕೆಲಸಕ್ಕೆ ಅರ್ಜಿ ಸಲ್ಲಿಸಿ

BHEL Recruitment 2024: ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ MBBS ಪೂರ್ಣಗೊಳಿಸಿರಬೇಕು.

Written by - Puttaraj K Alur | Last Updated : Apr 24, 2024, 07:06 PM IST
  • ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್‌ನಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ
  • ಮೆಡಿಕಲ್ ಪ್ರಾಕ್ಟೀಕಷನರ್ ಹುದ್ದೆ ಖಾಲಿಯಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
  • ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ
BHEL Recruitment 2024: ತಿಂಗಳಿಗೆ 95 ಸಾವಿರ ಸಂಬಳ ನೀಡುವ ಈ ಕೆಲಸಕ್ಕೆ ಅರ್ಜಿ ಸಲ್ಲಿಸಿ title=
BHEL Recruitment 2024

BHEL Recruitment 2024: ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್‌ನಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 1 ಮೆಡಿಕಲ್ ಪ್ರಾಕ್ಟೀಕಷನರ್ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೇ 6ರಂದು ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ವಿದ್ಯಾರ್ಹತೆ: ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ MBBS ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ: Daily GK Quiz: ಮಾನವ ದೇಹದಲ್ಲಿ ಎಷ್ಟು ಮೂಳೆಗಳಿವೆ?

ವೇತನ: ಮಾಸಿಕ ₹95,000

ಉದ್ಯೋಗದ ಸ್ಥಳ: ಬೆಂಗಳೂರು

ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 45 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ: OBC ಅಭ್ಯರ್ಥಿಗಳಿಗೆ 3 ವರ್ಷ, SC/ST ಅಭ್ಯರ್ಥಿಗೆ 5 ವರ್ಷ, PWD (ಸಾಮಾನ್ಯ) ಅಭ್ಯರ್ಥಿಗೆ 10 ವರ್ಷ, PWD (OBC) ಅಭ್ಯರ್ಥಿಗೆ 10 ವರ್ಷ ಮತ್ತು PWD (SC/ST) ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಸಂದರ್ಶನ ನಡೆಯುವ ಸ್ಥಳ: ಕಪಿಲಾ ಕಾನ್ಫರೆನ್ಸ್ ಹಾಲ್, 1ನೇ ಮಹಡಿ, HR & IT ಕಟ್ಟಡ, BHEL EDN, ಮೈಸೂರು ರಸ್ತೆ, ಬೆಂಗಳೂರು. ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡೇಟಾವನ್ನು ಇಮೇಲ್ ಐಡಿ-recruit.edn@bhel.inಗೆ ಕಳುಹಿಸಬಹುದು.

ಇದನ್ನೂ ಓದಿ: Daily GK Quiz: ʼಭಾರತದ ನೈಟಿಂಗೇಲ್' ಎಂದು ಯಾರನ್ನು ಕರೆಯುತ್ತಾರೆ?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News