BSF Recruitment 2023: ಪದವೀಧರರಿಗೆ ಗುಡ್ ನ್ಯೂಸ್, ಗಡಿ ಭದ್ರತಾ ಪಡೆ ನೇಮಕಾತಿ

BSF Recruitment 2023: BSFನ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಅಥವಾ ಡಿಪ್ಲೊಮಾ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

Written by - Puttaraj K Alur | Last Updated : Jun 30, 2023, 03:13 PM IST
  • ಭಾರತೀಯ ಗಡಿ ಭದ್ರತಾ ಪಡೆಯ ಇನ್ಸ್‌ಪೆಕ್ಟರ್ (ಲೈಬ್ರರಿಯನ್) ಹುದ್ದೆಗಳಿಗೆ ಅರ್ಜಿ ಆಹ್ವಾನ
  • ಈ ನೇಮಕಾತಿ ಮೂಲಕ ಖಾಲಿಯಿರುವ 2 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ
  • ಪದವಿ ಅಥವಾ ಡಿಪ್ಲೊಮಾ, ಸ್ನಾತಕೋತ್ತರ ಪದವಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
BSF Recruitment 2023: ಪದವೀಧರರಿಗೆ ಗುಡ್ ನ್ಯೂಸ್, ಗಡಿ ಭದ್ರತಾ ಪಡೆ ನೇಮಕಾತಿ   title=
BSF Recruitment 2023

ನವದೆಹಲಿ: ಭಾರತೀಯ ಗಡಿ ಭದ್ರತಾ ಪಡೆ(BSF)ಯ ಇನ್ಸ್‌ಪೆಕ್ಟರ್ (ಲೈಬ್ರರಿಯನ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಮೂಲಕ ಖಾಲಿಯಿರುವ 2 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BSFನ ಅಧಿಕೃತ ವೆಬ್​ಸೈಟ್ bsf.nic.inಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.  

ಹುದ್ದೆಯ ವಿವರ: ಬಾರ್ಡರ್ ಸೆಕ್ಯುರಿಟಿ ಫೋರ್ಸ್(BSF)ನಲ್ಲಿ ಖಾಲಿ ಇರುವ 2 ಇನ್‌ಸ್ಪೆಕ್ಟರ್ (ಲೈಬ್ರೇರಿಯನ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ: BSFನ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಅಥವಾ ಡಿಪ್ಲೊಮಾ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ: ಈ ದೇಶದಲ್ಲಿ ಫೋಟೋ ತೆಗೆಯುವುದು ಮಹಾ ಅಪರಾಧ!

ವಯೋಮಿತಿ: ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ವಯಸ್ಸು 30 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ: 3 ವರ್ಷಗಳಿಗಿಂತ ಕಡಿಮೆಯಿಲ್ಲದ ನಿಯಮಿತ ಮತ್ತು ನಿರಂತರ ಸೇವೆ ಸಲ್ಲಿಸಿದ ಕೇಂದ್ರ ಸರ್ಕಾರಿ ನೌಕರರಿಗೆ (ಅನ್‌ರಿಸರ್ವ್ಡ್) 5 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ: ಮಹಿಳೆಯರು/SC/ST ಮತ್ತು BSF ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.

ಇತರ ಎಲ್ಲಾ ಅಭ್ಯರ್ಥಿಗಳಿಗೆ 200 ರೂ. ಪರೀಕ್ಷಾ ಶುಲ್ಕವಿರುತ್ತದೆ.

ಆಯ್ಕೆ ಪ್ರಕ್ರಿಯೆ: ಮೆರಿಟ್ ಪಟ್ಟಿ, ಲಿಖಿತ ಪರೀಕ್ಷೆ, ದೈಹಿಕ ಗುಣಮಟ್ಟದ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 44,900 ರೂ.ನಿಂದ 1,42,400 ರೂ. ನೀಡಲಾಗುತ್ತದೆ.

ಪ್ರಮುಖ ದಿನಾಂಕ: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-07-2023 ಆಗಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತು ನೇಮಕಾತಿ ಕುರಿತ ಮತ್ತಷ್ಟು ಮಾಹಿತಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಅಧಿಕೃತ ವೆಬ್‌ಸೈಟ್ bsf.nic.inಗೆ ಭೇಟಿ ನೀಡಿ.

ಇದನ್ನೂ ಓದಿ: ನಿಮ್ಮ ಆಧಾರ್ - ಪ್ಯಾನ್ ಲಿಂಕ್ ಆಗಿದ್ಯಾ..? ಈ ವಿಧಾನ ಬಳಸಿ ಇಂದೇ ಖಚಿತ ಪಡಿಸಿಕೊಳ್ಳಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News