Railway Recruitment: ರೈಲ್ವೆಯಲ್ಲಿ ಬಂಪರ್ ಉದ್ಯೋಗಾವಕಾಶ

Railway Recruitment 2022: ರೈಲ್ವೆ ನೇಮಕಾತಿ ಸೆಲ್ ವೆಸ್ಟ್ ಸೆಂಟ್ರಲ್ ರೈಲ್ವೇ ವಿವಿಧ NTPC (ತಾಂತ್ರಿಕವಲ್ಲದ ಜನಪ್ರಿಯ ವರ್ಗ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು  ಜುಲೈ 28, 2022 ರವರೆಗೆ ಅವಕಾಶವಿದೆ.

Written by - Yashaswini V | Last Updated : Jul 14, 2022, 06:59 AM IST
  • ಈ ನೇಮಕಾತಿ ಪ್ರಕ್ರಿಯೆಯ ಮೂಲಕ 121 ಹುದ್ದೆಗಳನ್ನು ಭರ್ತಿ ಮಾಡಲಾಗುವುದು
  • ಜುಲೈ 8ರಿಂದ ಇದಕ್ಕೆ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ.
  • ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜುಲೈ 28 ರವರೆಗೆ ಅರ್ಜಿ ಸಲ್ಲಿಸಬಹುದು
Railway Recruitment: ರೈಲ್ವೆಯಲ್ಲಿ ಬಂಪರ್ ಉದ್ಯೋಗಾವಕಾಶ  title=
Jobs in Railway

ರೈಲ್ವೆಯಲ್ಲಿ ಬಂಪರ್ ಉದ್ಯೋಗಾವಕಾಶ : ರೈಲ್ವೆ ನೇಮಕಾತಿ ಸೆಲ್, ಪಶ್ಚಿಮ ಮಧ್ಯ ರೈಲ್ವೆ (WCR) ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ, ವಿವಿಧ NTPC (ತಾಂತ್ರಿಕವಲ್ಲದ ಜನಪ್ರಿಯ ವರ್ಗಗಳು) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ವೆಸ್ಟ್ ಸೆಂಟ್ರಲ್ ರೈಲ್ವೆಯ ಅಧಿಕೃತ ಸೈಟ್ wcr.indianrailways.gov.in ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು . ನೋಂದಾಯಿಸಲು ಕೊನೆಯ ದಿನಾಂಕ ಜುಲೈ 28, 2022 ಆಗಿದೆ. 

ಖಾಲಿ ಇರುವ ಹುದ್ದೆಗಳು:
ಈ ನೇಮಕಾತಿ ಪ್ರಕ್ರಿಯೆಯ ಮೂಲಕ ರೈಲ್ವೆ ಇಲಾಖೆಯು  ಖಾಲಿ ಇರುವ 121 ಹುದ್ದೆಗಳನ್ನು ಭರ್ತಿ ಮಾಡುತ್ತದೆ. ಅರ್ಹತೆ, ಆಯ್ಕೆ ಪ್ರಕ್ರಿಯೆ ಮತ್ತು ಇತರ ವಿವರಗಳಿಗಾಗಿ ಮುಂದೆ ಓದಿ. 
 
ಪ್ರಮುಖ ದಿನಾಂಕಗಳು

  • ವೆಬ್‌ಸೈಟ್‌ನಲ್ಲಿ ಪ್ರಕಟಣೆಯ ದಿನಾಂಕ: ಜುಲೈ 06
  • ಆನ್‌ಲೈನ್ ನೋಂದಣಿ ಮತ್ತು ಅರ್ಜಿಯನ್ನು ಭರ್ತಿ ಮಾಡಲು ಆರಂಭಿಕ ದಿನಾಂಕ: ಜುಲೈ 08
  • ಆನ್‌ಲೈನ್ ನೋಂದಣಿ ಮತ್ತು ಅರ್ಜಿಯನ್ನು ಭರ್ತಿ ಮಾಡಲು ಕೊನೆಯ ದಿನಾಂಕ: ಜುಲೈ 28

ಇದನ್ನೂ ಓದಿ- RRC Recruitment 2022: 1659 ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಯ ವಿವರಗಳು: 

  • ಸ್ಟೇಷನ್ ಮಾಸ್ಟರ್: 08 ಹುದ್ದೆಗಳು
  • ಸೀನಿಯರ್ ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್: 38 ಹುದ್ದೆಗಳು
  • ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್: 09 ಹುದ್ದೆಗಳು
  • ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್: 30 ಹುದ್ದೆಗಳು
  • ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್: 08 ಹುದ್ದೆಗಳು
  • ಜೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್: 28 ಹುದ್ದೆಗಳು

ಅರ್ಹತೆಯ ಮಾನದಂಡ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಯ ಕುರಿತು ಹೇಳುವುದಾದರೆ, ಸ್ಟೇಷನ್ ಮಾಸ್ಟರ್, ಸೀನಿಯರ್ ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್ ಮತ್ತು ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಇತರ ಹುದ್ದೆಗಳಿಗೆ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ಇದನ್ನೂ ಓದಿ- NVS Recruitment 2022 : ನವೋದಯ ವಿದ್ಯಾಲಯ ಸಮಿತಿಯಲ್ಲಿ 1,616 ಹುದ್ದೆಗಳಿಗೆ ಅರ್ಜಿ!

ಆರಂಭಿಕ ವೇತನ ಶ್ರೇಣಿ: 

  • ಸ್ಟೇಷನ್ ಮಾಸ್ಟರ್: ರೂ. 35,400/-
  • ಹಿರಿಯ ವಾಣಿಜ್ಯ ಕಮ್ ಟಿಕೆಟ್ ಕ್ಲರ್ಕ್: ರೂ. 29,200/-
  • ಹಿರಿಯ ಕ್ಲರ್ಕ್ ಕಮ್ ಟೈಪಿಸ್ಟ್: ರೂ. 29, 200/-
  • ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್: ರೂ. 21, 700/-
  • ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್: ರೂ. 19,900/-
  • ಜೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್: ರೂ. 19,900/-

ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮೇಲಿನ ಪೋಸ್ಟ್‌ಗಳಿಗೆ   WCR ನ ಅಧಿಕೃತ ಸೈಟ್ wcr.indianrailways.gov.in ನಲ್ಲಿ  ಜುಲೈ 28, 2022 ರ  ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ
 

Trending News