Career News: ರಂಗಾಯಣದಲ್ಲಿ ರಂಗಶಿಕ್ಷಣ ತರಬೇತಿಗೆ ಅರ್ಜಿ ಆಹ್ವಾನ 

 ಕರ್ನಾಟಕ ಸರ್ಕಾರದಿಂದ ಮೈಸೂರಿನಲ್ಲಿ ಸ್ಥಾಪಿತವಾಗಿರುವ ರಂಗಾಯಣ ರೆಪರ್ಟರಿಯು ಕಳೆದ 15 ವರ್ಷಗಳ ಹಿಂದೆ ಸ್ಥಾಪಿಸಿದ ಭಾರತೀಯ ರಂಗಶಿಕ್ಷಣ ಕೇಂದ್ರ ಪೂರ್ಣ ಪ್ರಮಾಣದ ರಂಗಶಿಕ್ಷಣವನ್ನು ನೀಡುವ ಸಂಸ್ಥೆಯಾಗಿರುತ್ತದೆ.ಪ್ರತಿ ವರ್ಷದಂತೆ 2024-25ನೇ ಪ್ರಸಕ್ತ ಸಾಲಿಗೆ ರಂಗಶಿಕ್ಷಣದಲ್ಲಿ ಹತ್ತು ತಿಂಗಳ ಡಿಪ್ಲೊಮಾ ಕೋರ್ಸ್‍ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

Written by - Manjunath N | Last Updated : Jun 6, 2024, 05:42 PM IST
  • ರಂಗತರಬೇತಿ ಪಡೆಯುವ ವಿದ್ಯಾರ್ಥಿಗಳು ರಂಗಭೂಮಿಯ ಪ್ರಾಥಮಿಕ ಅನುಭವ ಹೊಂದಿರಬೇಕು
  • ಅರ್ಜಿ ಸಲ್ಲಿಸಲು 18 ರಿಂದ 28 ವರ್ಷಗಳು ತುಂಬಿರಬೇಕು
  • ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಸತಿ ವ್ಯವಸ್ಥೆ ಮತ್ತು ವಿದ್ಯಾರ್ಥಿ ವೇತನ ನೀಡಲಾಗುವುದು
 Career News: ರಂಗಾಯಣದಲ್ಲಿ ರಂಗಶಿಕ್ಷಣ ತರಬೇತಿಗೆ ಅರ್ಜಿ ಆಹ್ವಾನ  title=

ಧಾರವಾಡ : ಕರ್ನಾಟಕ ಸರ್ಕಾರದಿಂದ ಮೈಸೂರಿನಲ್ಲಿ ಸ್ಥಾಪಿತವಾಗಿರುವ ರಂಗಾಯಣ ರೆಪರ್ಟರಿಯು ಕಳೆದ 15 ವರ್ಷಗಳ ಹಿಂದೆ ಸ್ಥಾಪಿಸಿದ ಭಾರತೀಯ ರಂಗಶಿಕ್ಷಣ ಕೇಂದ್ರ ಪೂರ್ಣ ಪ್ರಮಾಣದ ರಂಗಶಿಕ್ಷಣವನ್ನು ನೀಡುವ ಸಂಸ್ಥೆಯಾಗಿರುತ್ತದೆ.ಪ್ರತಿ ವರ್ಷದಂತೆ 2024-25ನೇ ಪ್ರಸಕ್ತ ಸಾಲಿಗೆ ರಂಗಶಿಕ್ಷಣದಲ್ಲಿ ಹತ್ತು ತಿಂಗಳ ಡಿಪ್ಲೊಮಾ ಕೋರ್ಸ್‍ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ರಂಗತರಬೇತಿ ಪಡೆಯುವ ವಿದ್ಯಾರ್ಥಿಗಳು ರಂಗಭೂಮಿಯ ಪ್ರಾಥಮಿಕ ಅನುಭವ ಹೊಂದಿರಬೇಕು.ಅರ್ಜಿ ಸಲ್ಲಿಸಲು 18 ರಿಂದ 28 ವರ್ಷಗಳು ತುಂಬಿರಬೇಕು.ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಸತಿ ವ್ಯವಸ್ಥೆ ಮತ್ತು ವಿದ್ಯಾರ್ಥಿ ವೇತನ ನೀಡಲಾಗುವುದು.

ಆಸಕ್ತಿವುಳ್ಳ ವಿದ್ಯಾರ್ಥಿಗಳು ವೆಬ್‍ಸೈಟ್ http://rangayanamysore.karnataka.gov.in ನಲ್ಲಿ ಅರ್ಜಿಯನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಜೂನ್ 20, 2024 ಸಂಜೆ 5.30 ರೊಳಗೆ ಅಂಚೆಯ ಮೂಲಕ ಅಥವಾ ಉಪನಿರ್ದೇಶಕರ ಕಚೇರಿ ರಂಗಾಯಣ ಮೈಸೂರಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0821-2512639, 9148827720 ಗೆ ಅಥವಾ ವೆಬ್‍ಸೈಟ್ http://rangayanamysore.karnataka.gov.in ಸಂಪರ್ಕಿಸಬಹುದು ಎಂದು ಧಾರವಾಡ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರು ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News