ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 3000 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

Central Bank of India Jobs: ನೀವು ಸರ್ಕಾರಿ ನೌಕರಿಗಾಗಿ ತಯಾರಿ ನಡೆಸುತ್ತಿದ್ದರೆ ನಿಮಗಾಗಿ ಒಳ್ಳೆಯ ಸುದ್ದಿಯೊಂದಿದೆ.  ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಒಟ್ಟು 3000 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆಯನ್ನು ಆರಂಭಿಸಿದೆ. 

Written by - Yashaswini V | Last Updated : Feb 23, 2024, 12:49 PM IST
  • ಬ್ಯಾಂಕ್‌ಗಳಲ್ಲಿ ಸರ್ಕಾರಿ ಉದ್ಯೋಗಕ್ಕೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್
  • ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಒಟ್ಟು 3000 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ
  • ಅರ್ಜಿ ಸಲ್ಲಿಸಲು ಅಗತ್ಯ ವಿದ್ಯಾರ್ಹತೆಗಳು, ವಯಸ್ಸಿನ ಮಿತಿ ಸೇರಿದಂತೆ ಇಲ್ಲಿದೆ ಮಹತ್ವದ ಮಾಹಿತಿ
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 3000 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ  title=

Central Bank of India Recruitment: ನೀವು ಬ್ಯಾಂಕಿಂಗ್ ಪರೀಕ್ಷೆಗಾಗಿ ತಯಾರಿ ನಡೆಸುತ್ತಿದ್ದರೆ ನಿಮಗಾಗಿ ಗುಡ್ ನ್ಯೂಸ್ ಒಂದಿದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು, ಬ್ಯಾಂಕ್‌ನಲ್ಲಿ ಉದ್ಯೋಗಕ್ಕೆ ತಯಾರಿ ನಡೆಸುತ್ತಿರುವವರು ಈ ಸುವರ್ಣಾವಕಾಶವನ್ನು ಬಳಸಿಕೊಳ್ಳಬಹುದು. 

ಒಟ್ಟು 3000 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ: 
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಒಟ್ಟು 3000 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ centralbankofindia.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಗಮನಾರ್ಹವಾಗಿ, 21 ಫೆಬ್ರವರಿ 2024 ರಂದು ಆರಂಭವಾಗಿರುವ ಅರ್ಜಿ ಪ್ರಕ್ರಿಯೆ 06 ಮಾರ್ಚ್ 2024ರಂದು ಕೊನೆಗೊಳ್ಳಲಿದೆ. 

ವಿದ್ಯಾರ್ಹತೆ: 
ಸೆಂಟ್ರಲ್ ಬ್ಯಾಂಕ್‌ನಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರುವುದು ಕಡ್ಡಾಯವಾಗಿದೆ. ಅರ್ಜಿದಾರರು ಮಾರ್ಚ್ 31, 2020 ರ ನಂತರ ಪದವಿ ಪಡೆದಿರುವವರಾಗಿರಬೇಕು. 

ಇದನ್ನೂ ಓದಿ- Railway Jobs 2024: ರೈಲ್ವೇಯಲ್ಲಿ 9000 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಫುಲ್ ಡೀಟೈಲ್ಸ್

ವಯೋಮಿತಿ: 
01.04.1996 ರಿಂದ 31.03.2004 ರ ನಡುವೆ ಜನಿಸಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ: 
ಸೆಂಟ್ರಲ್ ಬ್ಯಾಂಕ್‌ನಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ  ಅರ್ಜಿ ಸಲ್ಲಿಸಲು, ಸಾಮಾನ್ಯ ಮತ್ತು OBC ವರ್ಗದ ಅಭ್ಯರ್ಥಿಗಳು 800 ರೂ.ಗಳನ್ನು ಅರ್ಜಿ ಶುಲ್ಕವಾಗಿ ಪಾವತಿಸಬೇಕಾಗುತ್ತದೆ. ಆದರೆ SC, ST ಮತ್ತು ಎಲ್ಲಾ ಮಹಿಳಾ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 600 ರೂ.ಗಳನ್ನು ಅಲ್ಲದೆ, ಅಂಗವಿಕಲ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 400 ರೂ.ಗಳನ್ನು ಆನ್‌ಲೈನ್‌ನಲ್ಲಿ ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ- ರಾಜ್ಯದಲ್ಲಿ ₹50 ಸಾವಿರ ಕೋಟಿ ಹೂಡಿಕೆ, 58 ಸಾವಿರ ಉದ್ಯೋಗಸೃಷ್ಟಿ: ಸಚಿವ ಎಂ ಬಿ ಪಾಟೀಲ

ಸೆಂಟ್ರಲ್ ಬ್ಯಾಂಕ್‌ನಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ವಿಧಾನ: 
>> ಮೊದಲಿಗೆ ಸೆಂಟ್ರಲ್ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ centralbankofindia.co.in ಗೆ ಭೇಟಿ ನೀಡಿ. 
>> ಮುಖಪುಟದಲ್ಲಿ ಕಾಣುವ ನೇಮಕಾತಿ ಎಂಬ ಲಿಂಕ್ ಅನ್ನು ಕ್ಲಿಕ್ ಮಾಡಿ. 
>> ಮುಂದಿನ ಪುಟದಲ್ಲಿ ಅಪ್ಲಿಕೇಶನ್ ತೆರೆಯುತ್ತದೆ. ಇಲ್ಲಿ ಅಗತ್ಯವಿರುವ ಮಾಹಿತಿಗಳನ್ನು ಭರ್ತಿ ಮಾಡಿ. 
>> ಬಳಿಕ ಆನ್‌ಲೈನ್‌ನಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಿ ಸಲ್ಲಿಸಿದ್ಸರೆ ಅರ್ಜಿ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ. 
>> ಅರ್ಜಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಭವಿಷ್ಯದ ಉಪಯೋಗಕ್ಕಾಗಿ ನಿಮ್ಮ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ, ಪ್ರಿಂಟ್ ತೆಗೆದುಕೊಳ್ಳಿ. 

ಸೆಂಟ್ರಲ್ ಬ್ಯಾಂಕ್‌ನಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ  ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ, ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅಧಿಸೂಚನೆಯನ್ನು ಓದಬಹುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News