CFTRI Recruitment 2024: ಮೈಸೂರಿನಲ್ಲಿ ಸರ್ಕಾರಿ ಉದ್ಯೋಗಾವಕಾಶ; ಇಂದೇ ಅರ್ಜಿ ಸಲ್ಲಿಸಿ

CFTRI ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಎಸ್ಸಿ, ಫುಡ್​ ಸೈನ್ಸ್​ & ಟೆಕ್ನಾಲಜಿ, ಮೆಕ್ಯಾನಿಕಲ್ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್​ ಪೂರ್ಣಗೊಳಿಸಿರಬೇಕು.

Written by - Puttaraj K Alur | Last Updated : Apr 14, 2024, 10:35 PM IST
  • ಮೈಸೂರಿನ CFTRIನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
  • ಪ್ರಾಜೆಕ್ಟ್​ ಅಸೋಸಿಯೇಟ್ ಹುದ್ದೆ ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
  • ಏಪ್ರಿಲ್ 23 ಕೊನೆ ದಿನವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್ ಮೂಲಕವಷ್ಟೇ ಅರ್ಜಿ ಸಲ್ಲಿಸಬೇಕು
CFTRI Recruitment 2024: ಮೈಸೂರಿನಲ್ಲಿ ಸರ್ಕಾರಿ ಉದ್ಯೋಗಾವಕಾಶ; ಇಂದೇ ಅರ್ಜಿ ಸಲ್ಲಿಸಿ title=
CFTRI Recruitment 2024

CFTRI Recruitment 2024: ಮೈಸೂರಿನ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ(CFTRI)ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 1 ಪ್ರಾಜೆಕ್ಟ್​ ಅಸೋಸಿಯೇಟ್-I ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಇದೇ ಏಪ್ರಿಲ್ 23 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್ ಮೂಲಕವಷ್ಟೇ ಅರ್ಜಿ ಸಲ್ಲಿಸಬೇಕು.

ಶೈಕ್ಷಣಿಕ ಅರ್ಹತೆ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಎಸ್ಸಿ, ಫುಡ್​ ಸೈನ್ಸ್​ & ಟೆಕ್ನಾಲಜಿ, ಮೆಕ್ಯಾನಿಕಲ್ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್​ ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ: Daily GK Quiz: ಮೌಂಟ್ ಎವರೆಸ್ಟ್ ಏರಿದ ಮೊದಲ ಭಾರತೀಯ ಮಹಿಳೆ ಯಾರು?

ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ: ಮಾಸಿಕ ₹25,000

ಉದ್ಯೋಗದ ಸ್ಥಳ: ಮೈಸೂರು

ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇರವಾಗಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌  https://patcell.cftri.res.inapply ಗೆ ಭೇಟಿ ನೀಡಬಹುದು.

ಇದನ್ನೂ ಓದಿ: Amarnatha: ಜೂನ್ 29ರಿಂದ ವಾರ್ಷಿಕ ಅಮರನಾಥ ಯಾತ್ರೆ ಆರಂಭ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News