ಕರಾಮುವಿಯಿಂದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ; ನೋಂದಣಿಗೆ ಆಹ್ವಾನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದ್ದು, ಆಸಕ್ತರು ನೋಂದಾಯಿಸಿಕೊಳ್ಳಬಹುದಾಗಿದೆ.

Written by - Manjunath N | Last Updated : Aug 3, 2024, 04:42 PM IST
  • ಕಿರಿಯ ಶಿಷ್ಯವೇತನ ಸಂಶೋಧನಾ ಸಹಾಯಕರ (ಜೆಆರ್‌ಎಫ್) ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತದೆ.
  • ಹೆಚ್ಚಿನ ಮಾಹಿತಿಗಾಗಿ ದೂ.0821-2515944 ಗೆ ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವರಾದ ಪ್ರೊ.ಕೆ.ಬಿ.ಪ್ರವೀಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 ಕರಾಮುವಿಯಿಂದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ; ನೋಂದಣಿಗೆ ಆಹ್ವಾನ title=

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದ್ದು, ಆಸಕ್ತರು ನೋಂದಾಯಿಸಿಕೊಳ್ಳಬಹುದಾಗಿದೆ.

ಕೆಇಎ(ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಹಾಗೂ  ರಾಷ್ಟ್ರಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ(ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯವೇತನ ಸಂಶೋಧನಾ ಸಹಾಯಕರ (ಜೆಆರ್‌ಎಫ್) ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತದೆ.

ಇದನ್ನೂ ಓದಿ: ಅಕ್ರಮ ರೆಸಾರ್ಟ್ ಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ 

ಆಸಕ್ತರು ಆ.09 ರೊಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಕಚೇರಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ದೂ.0821-2515944 ಗೆ ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವರಾದ ಪ್ರೊ.ಕೆ.ಬಿ.ಪ್ರವೀಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.
 

 

 

Trending News