ಪತ್ರಿಕೋದ್ಯಮ ಪದವೀಧರರಿಗೆ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 6 ಕೊನೆಯ ದಿನ

2023-24ನೇ ಸಾಲಿಗೆ ಪರಿಶಿಷ್ಟ ಜಾತಿಯ ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಬೆಳಗಾವಿ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Written by - Manjunath N | Last Updated : Dec 4, 2023, 12:48 AM IST
  • ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು
  • ಅರ್ಜಿ ಸಲ್ಲಿಸಲು ಡಿಸೆಂಬರ್ 6, 2023 ಕೊನೆಯ ದಿನವಾಗಿದೆ
  • ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು
ಪತ್ರಿಕೋದ್ಯಮ ಪದವೀಧರರಿಗೆ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 6 ಕೊನೆಯ ದಿನ title=

ಬೆಳಗಾವಿ: 2023-24ನೇ ಸಾಲಿಗೆ ಪರಿಶಿಷ್ಟ ಜಾತಿಯ ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಬೆಳಗಾವಿ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 35 ವರ್ಷದೊಳಗಿನ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. 

ಇದನ್ನೂ ಓದಿ: ಮಧುಮೇಹ ರೋಗಿಗಳು ತಪ್ಪದೆ ಈ ಆಹಾರ ಪದಾರ್ಥಗಳನ್ನು ಸೇವಿಸಿ..!

ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ತರಬೇತಿಯ ಅವಧಿ ವೇಳೆ ಮಾಹೆಯಾನ 15,000 ರೂ.ಗಳ ಸ್ಟೈಫಂಡ್ ನೀಡಲಾಗುವುದು. ಈ ತರಬೇತಿಯು 12 ತಿಂಗಳ ಅಪ್ರೆಂಟಿಸ್ ತರಬೇತಿಯಾಗಿದ್ದು, ತಾತ್ಕಾಲಿಕವಾಗಿರುತ್ತದೆ.ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ಅರ್ಜಿ ಸಲ್ಲಿಸಲು ಡಿಸೆಂಬರ್ 6, 2023 ಕೊನೆಯ ದಿನವಾಗಿದೆ. ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.ಆಯ್ಕೆಯಾದ ಅಭ್ಯರ್ಥಿಗಳು ಸಂದರ್ಶನದ ವೇಳೆ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ತರಬೇತಿಗೆ ಹಾಜರಾಗುವ ಸಂದರ್ಭದಲ್ಲಿ ಮೂಲ ದಾಖಲಾತಿಗಳನ್ನು ಜಿಲ್ಲಾ ವಾರ್ತಾಧಿಕಾರಿಗಳಿಗೆ ಸಲ್ಲಿಸಬೇಕು. 

ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ ಹಾಗೂ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು. ಈ ಮೇಲ್ಕಂಡ ಷರತ್ತುಗಳನ್ನು ಪಾಲಿಸುವುದಾಗಿ ಆಯ್ಕೆಯಾದ ಅಭ್ಯರ್ಥಿಗಳು 20 ರೂ.ಗಳ ಛಾಪಾ ಕಾಗದದಲ್ಲಿ ಲಿಖಿತ ಹೇಳಿಕೆ ನೀಡಬೇಕು.

ಇದನ್ನೂ ಓದಿ: ನಾಲ್ಕು ಚಿತ್ರಗಳಲ್ಲಿ ನಟಿಸಿದರೂ ಈ ನಟಿಗೆ ಯಶಸ್ಸು ದಕ್ಕಲಿಲ್ಲ, ರಣಬೀರ್ ಜೊತೆಗಿನ 'ನ್ಯೂಡ್ ಸೀನ್' ಫೇಮಸ್ಸಾಗಿಸಿದೆ!

ಆಸಕ್ತರು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, "ವಾರ್ತಾಭವನ", ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನ್ಯಾಯಾಲಯ ಆವರಣ, ಬೆಳಗಾವಿ ಅಥವಾ ಮೊಸಂ.9448589639 ಸಂಪರ್ಕಿಸಬಹುದು ಎಂದು ವಾರ್ತಾ ಇಲಾಖೆಯ ಉಪ ನಿರ್ದೇಶಕರಾದ ಗುರುನಾಥ ಕಡಬೂರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News