Diploma courses: ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸಾಂಸ್ಕೃತಿಕ ನಗರಿ ಮೈಸೂರಿನ ಜೆಎಸ್ಎಸ್ ಮಹಾವಿದ್ಯಾಪೀಠ, ಜೆಎಸ್ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್ ವತಿಯಿಂದ 2023-24ನೇ ಸಾಲಿಗೆ 3 ವರ್ಷಗಳ ಅವಧಿಯ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ ವಿಶೇಷಚೇತನ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

Written by - Zee Kannada News Desk | Last Updated : Jun 1, 2023, 10:09 PM IST
  • JSS ಮಹಾವಿದ್ಯಾಪೀಠ & ವಿಶೇಷ ಚೇತನರ ಪಾಲಿಟೆಕ್ನಿಕ್ ವತಿಯಿಂದ ಡಿಪ್ಲೊಮಾ ಕೋರ್ಸುಗಳಿಗೆ ಅರ್ಜಿ ಆಹ್ವಾನ
  • 2023-24ನೇ ಸಾಲಿಗೆ 3 ವರ್ಷಗಳ ಅವಧಿಯ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
  • ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ಮತ್ತು ರಾಷ್ಟ್ರಮಟ್ಟದ ವಿದ್ಯಾರ್ಥಿ ವೇತನದ ಆರ್ಥಿಕ ಸಹಾಯ ದೊರೆಯುತ್ತದೆ
Diploma courses: ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ title=
ಡಿಪ್ಲೊಮಾ ಕೋರ್ಸುಗಳಿಗೆ ಅರ್ಜಿ ಆಹ್ವಾನ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಜೆಎಸ್ಎಸ್ ಮಹಾವಿದ್ಯಾಪೀಠ, ಜೆಎಸ್ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್ ವತಿಯಿಂದ 2023-24ನೇ ಸಾಲಿಗೆ 3 ವರ್ಷಗಳ ಅವಧಿಯ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ (ಅಖಿಲ ಭಾರತ ಮಟ್ಟದಲ್ಲಿ) ವಿಶೇಷಚೇತನ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅನುದಾನಿತ ಕೋರ್ಸುಗಳಾದ ಆರ್ಕಿಟೆಕ್ಟರ್ ಅಸಿಸ್ಟೆಂಟ್ಷಿಪ್, ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂರ್ ಸೈನ್ಸ್ ಮತ್ತು ಎಂಜಿನಿಯರಿಂಗ್. ಅನುದಾನ ರಹಿತ ಕೋರ್ಸುಗಳಾದ ಜ್ಯುಯಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್, ಕಂಪ್ಯೂಟರ್ ಅಪ್ಲಿಕೇಷನ್ಸ್, ಅಪಾರೇಲ್ ಡಿಸೈನ್ ಮತ್ತು ಪ್ಯಾಬ್ರಿಕೇಷನ್ ಟೆಕ್ನಾಲಜಿಗೆ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಸರ್ಕಾರದ ಸಾರಾಯಿ ಪಾಕೆಟ್‌ಗೆ ಹೆಚ್ಚಾದ ಒಲವು

ಕರ್ನಾಟಕ SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ ಶೇ.35ರಷ್ಟು ಅಂಕಗಳೊಂದಿಗೆ ತೇರ್ಗಡೆ ಹಾಗೂ ಮೂಳೆ ಮತ್ತು ಕೀಲು ಅಂಗವಿಕಲತೆ ಶೇ.40ರಷ್ಟು ಮತ್ತು ಮೇಲ್ಪಟ್ಟು, ಕಿವುಡು ಮತ್ತು ಮೂಗ ಅಂಗವಿಕಲತೆ ಶೇ.60ರಷ್ಟು ಮತ್ತು ಮೇಲ್ಪಟ್ಟು, ಭಾಗಶಃ ಮತ್ತು ಪೂರ್ಣ ಅಂಧತ್ವ 6/60 ಅಥವಾ 20/200 ಸ್ನೆಲೆನ್.

ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ಮತ್ತು ರಾಷ್ಟ್ರಮಟ್ಟದ ವಿದ್ಯಾರ್ಥಿ ವೇತನದ ಆರ್ಥಿಕ ಸಹಾಯ ದೊರೆಯುತ್ತದೆ. ಪಾಲಿಟೆಕ್ನಿಕ್ ಯಶಸ್ವಿ ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ತರಬೇತಿ ಕೇಂದ್ರದ ಮೂಲಕ ಉದ್ಯೋಗಾವಕಾಶವನ್ನು ಕಲ್ಪಿಸಿಕೊಡಲಾಗುತ್ತದೆ. ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಿದ್ಯಾರ್ಥಿ ನಿಲಯದ ಸೌಲಭ್ಯವಿದೆ.

ಇದನ್ನೂ ಓದಿ: ಕರ್ನಾಟಕ ಬ್ಯಾಂಕ್‌ಗೆ ಶತಮಾನದ ಸಂಭ್ರಮ

ಪ್ರವೇಶಕ್ಕೆ ಅರ್ಜಿಯನ್ನು ಜೆಎಸ್ಎಸ್ ಮಹಾವಿದ್ಯಾಪೀಠ, ಜೆಎಸ್ಎಸ್ ವಿಶೇಷಚೇತನರ ಪಾಲಿಟೆಕ್ನಿಕ್, ಜೆಎಸ್ಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಮುಚ್ಛಯ ಮೈಸೂರು-570006 ಇಲ್ಲಿಂದ ಪಡೆದು (ಸಾಮಾನ್ಯ ವರ್ಗದ ಅಭ್ಯರ್ಥಿಗಳು 100 ರೂ. ಹಾಗೂ SC/ST, ಸಿ-1 ವರ್ಗದವರಿಗೆ 50 ರೂ. ಅರ್ಜಿ ಶುಲ್ಕ) ನಗದು ಅಥವಾ ಡಿಡಿ ಮೂಲಕ ಮೈಸೂರಿನಲ್ಲಿ ಸಂದಾಯವಾಗುವಂತೆ ಕಳುಹಿಸಿ ಪಡೆಯಬಹುದು ಅಥವಾ ವೆಬ್ಸೈಟ್ ಮೂಲಕ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗೆ ವೆಬ್ಸೈಟ್ www.jsspda.org  ಅಥವಾ ದೂ.ಸಂ.9844644937ನ್ನು ಸಂಪರ್ಕಿಸಬಹುದು. ಭರ್ತಿ ಮಾಡಿದ ಅರ್ಜಿಯನ್ನು ಜೂನ್ 17ರೊಳಗೆ ಕಚೇರಿಗೆ ಸಲ್ಲಿಸಬೇಕು ಎಂದು ಜೆಎಸ್ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ನ ಪ್ರಾಂಶುಪಾಲರು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News