Railway Recruitment 2022: ಯಾವುದೇ ಪರೀಕ್ಷೆಯಿಲ್ಲದೆ ರೈಲ್ವೆಯಲ್ಲಿ ನೇರ ನೇಮಕಾತಿ

Railway Recruitment 2022: ರೈಲ್ವೆ ಇಲಾಖೆಯಲ್ಲಿ ಹಲವು ಹುದ್ದೆಗಳಿಗೆ ಯಾವುದೇ ಪರೀಕ್ಷೆಯಿಲ್ಲದೆ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ. 

Written by - Yashaswini V | Last Updated : Sep 19, 2022, 01:21 PM IST
  • ರೈಲ್ವೆ ನೇಮಕಾತಿ 2022ರ ಅಧಿಸೂಚನೆ ಪ್ರಕಾರ, ಈಗಾಗಲೇ ಅಪ್ಲಿಕೇಶನ್ ಪ್ರಕ್ರಿಯೆಯು ಪ್ರಾರಂಭವಾಗಿದೆ
  • ರೈಲ್ವೆ ನೇಮಕಾತಿ 2022ಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 4, 2022 ಕೊನೆಯ ದಿನಾಂಕವಾಗಿದೆ.
  • ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ವಯಸ್ಸಿನ ಮಿತಿ, ಶೈಕ್ಷಣಿಕ ಅರ್ಹತೆ ಮತ್ತು ಇತರ ವಿವರಗಳನ್ನು ಸಂಪೂರ್ಣವಾಗಿ ಪರಿಶೀಲಿಸಿ.
Railway Recruitment 2022: ಯಾವುದೇ ಪರೀಕ್ಷೆಯಿಲ್ಲದೆ ರೈಲ್ವೆಯಲ್ಲಿ ನೇರ ನೇಮಕಾತಿ  title=
Railway Recruitment 2022

ರೈಲ್ವೇ ನೇಮಕಾತಿ 2022: ರೈಲ್ವೆ ಇಲಾಖೆಯಲ್ಲಿ ಹಲವು ಹುದ್ದೆಗಳಿಗೆ ಯಾವುದೇ ಪರೀಕ್ಷೆಯಿಲ್ಲದೆ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅಧಿಕೃತ ವೆಬ್‌ಸೈಟ್ rrc-wr.com ನಲ್ಲಿ ರೈಲ್ವೆ ನೇರ ನೇಮಕಾತಿ ಅಧಿಸೂಚನೆ 2022 ಅನ್ನು ಬಿಡುಗಡೆ ಮಾಡಲಾಗಿದೆ. ಶೈಕ್ಷಣಿಕ ಅರ್ಹತೆ,  ಕ್ರೀಡಾ ಸಾಧನೆಗಳ ಮೌಲ್ಯಮಾಪನ ಆಧಾರದ ಮೇಲೆ ಈ ಹುದ್ದೆಗಳಿಗೆ ನೇರ ನೇಮಕಾತಿ ನಡೆಯಲಿದೆ. 

ರೈಲ್ವೆ ನೇಮಕಾತಿ 2022ರ ಅಧಿಸೂಚನೆ ಪ್ರಕಾರ, ಈಗಾಗಲೇ ಅಪ್ಲಿಕೇಶನ್ ಪ್ರಕ್ರಿಯೆಯು ಪ್ರಾರಂಭವಾಗಿದೆ ಮತ್ತು ರೈಲ್ವೆ ನೇಮಕಾತಿ 2022ಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 4, 2022 ಕೊನೆಯ ದಿನಾಂಕವಾಗಿದೆ. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 92,300 ರೂ.ವರೆಗೆ ವೇತನವನ್ನು ಪಡೆಯುತ್ತಾರೆ.

ಇದನ್ನೂ ಓದಿ- ಹಿರಿಯ ಸಂಶೋಧನಾ ಫೆಲೋ ಹುದ್ದೆಗೆ ನೇರ ಸಂದರ್ಶನ

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ವಯಸ್ಸಿನ ಮಿತಿ, ಶೈಕ್ಷಣಿಕ ಅರ್ಹತೆ ಮತ್ತು ಇತರ ವಿವರಗಳನ್ನು ಸಂಪೂರ್ಣವಾಗಿ ಪರಿಶೀಲಿಸಿ.

ಇದನ್ನೂ ಓದಿ- FCI ನೇಮಕಾತಿ 2022: 5000 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ

ರೈಲ್ವೆ ನೇಮಕಾತಿ 2022: ಅರ್ಜಿ ಸಲ್ಲಿಸಲು ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಜನವರಿ 1, 2023ಕ್ಕೆ 18 ರಿಂದ 25 ವರ್ಷಗಳ ನಡುವೆ ಇರಬೇಕು. ಈ ಹುದ್ದೆಗಳಿಗೆ ಯಾವುದೇ ಮೀಸಲಾತಿ ನೀತಿ ಅನ್ವಯವಾಗದ ಕಾರಣ, ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಗೆ ಯಾವುದೇ ಅವಕಾಶವಿಲ್ಲ ಎಂಬುದನ್ನು ಅಭ್ಯರ್ಥಿಗಳು ಗಮನಿಸಬೇಕು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News