ನೀವು ಆತ್ಮ ನಿರ್ಭರರಾಗಲು ಬಯಸುತ್ತೀರಾ? ತಪ್ಪದೇ ಇಲ್ಲಿಗೆ ಅರ್ಜಿ ಸಲ್ಲಿಸಿ

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆ(ರಿ) ವತಿಯಿಂದ  ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಗೆ 10 ದಿನಗಳ ಫಾಸ್ಟ್ ಫುಡ್, 13 ದಿನಗಳ ಸಿಸಿ ಟಿವಿ ಕ್ಯಾಮರ ದುರಸ್ತಿ ಹಾಗೂ 30 ದಿನಗಳ ಕಂಪ್ಯೂಟರ್ ಟ್ಯಾಲಿಯ ಉಚಿತ ತರಬೇತಿ ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

Written by - Zee Kannada News Desk | Last Updated : Jun 9, 2022, 11:31 PM IST
  • ಅರ್ಜಿಯನ್ನು ಜೂನ್. 15 ರೊಳಗಾಗಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಸಲ್ಲಿಸಬೇಕು.
ನೀವು ಆತ್ಮ ನಿರ್ಭರರಾಗಲು ಬಯಸುತ್ತೀರಾ? ತಪ್ಪದೇ ಇಲ್ಲಿಗೆ ಅರ್ಜಿ ಸಲ್ಲಿಸಿ title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆ(ರಿ) ವತಿಯಿಂದ  ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಗೆ 10 ದಿನಗಳ ಫಾಸ್ಟ್ ಫುಡ್, 13 ದಿನಗಳ ಸಿಸಿ ಟಿವಿ ಕ್ಯಾಮರ ದುರಸ್ತಿ ಹಾಗೂ 30 ದಿನಗಳ ಕಂಪ್ಯೂಟರ್ ಟ್ಯಾಲಿಯ ಉಚಿತ ತರಬೇತಿ ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಹೊಂಬಾಳೆಯ ಮತ್ತೊಂದು ಅದ್ಧೂರಿ ಚಿತ್ರ... ಶ್ರೀಮುರುಳಿಯ ʻಬಘೀರʼಗೆ ಚಾಲನೆ..!

ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿರಬೇಕು. ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೂರ್ಣ ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ, ಈಗ ಮಾಡುತ್ತಿರುವ ಕೆಲಸದ ಇತ್ಯಾದಿ ವಿವರಗಳನ್ನು ಒಳಗೊಂಡ ಅರ್ಜಿಯನ್ನು ಜೂನ್. 15 ರೊಳಗಾಗಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಸಲ್ಲಿಸಬೇಕು.

ಇದನ್ನೂ ಓದಿ: ನಟ ಕಿಚ್ಚ ಸುದೀಪ್‌ ಸಿನಿಮಾಗೆ ಆನೆಬಲ..! ‘ವಿಕ್ರಾಂತ್ ರೋಣ’ನಿಗೆ ‘ಪಿವಿಆರ್‌’ ಸಾಥ್..!‌

ತರಬೇತಿಯು ಜೂನ್ ತಿಂಗಳಲ್ಲೆ ಪ್ರಾರಂಭವಾಗುತ್ತಿದ್ದು, ಈ ಸಮಯದಲ್ಲಿ ಊಟ, ವಸತಿ ಉಚಿತವಾಗಿರುತ್ತದೆ. ತರಬೇತಿ ಅವಧಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕೀಲ್, ಯೋಗ ತರಬೇತಿ, ಬ್ಯಾಂಕಿಂಗ್, ಸರ್ಕಾರಿ ಯೋಜನೆಗಳು ಮತ್ತು ಯೋಜನಾ ವರಧಿ ತಯಾರಿಕೆ ಬಗೆಗಿನ ಮಾಹಿತಿಯನ್ನು ನೀಡಲಾಗವುದು.ಹೆಚ್ಚಿನ

ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08284-295307, 220807, 9483485489, 9482188780, 8951819260, 9844796998, 8197022501 ಗೆ ಸಂಪರ್ಕಿಸಬಹುದು ಎಂದು ಆರ್‌ಸೆಟ್ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News