ವಾರ್ತಾ ಇಲಾಖೆ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬಳ್ಳಾರಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ 12 ತಿಂಗಳ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸಲು ಇದೇ ಡಿಸೆಂಬರ್ 26ರವರೆಗೆ ಅವಧಿ ವಿಸ್ತರಿಸಲಾಗಿದೆ.

Written by - Manjunath N | Last Updated : Dec 20, 2023, 12:02 PM IST
  • ಬಳ್ಳಾರಿ ಜಿಲ್ಲೆಯ ಹಾಗೂ ಹೊರ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
  • ಮೂಲ ಜಿಲ್ಲೆಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
  • ಮೂಲ ಜಿಲ್ಲೆಯಲ್ಲಿ ಅರ್ಹ ಅಭ್ಯರ್ಥಿಗಳು ದೊರೆಯದೇ ಇದ್ದಲ್ಲಿ ಹೊರ ಜಿಲ್ಲೆಯ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು.
ವಾರ್ತಾ ಇಲಾಖೆ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ title=

ಬಳ್ಳಾರಿ: ಬಳ್ಳಾರಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ 12 ತಿಂಗಳ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸಲು ಇದೇ ಡಿಸೆಂಬರ್ 26ರವರೆಗೆ ಅವಧಿ ವಿಸ್ತರಿಸಲಾಗಿದೆ.

ಇದನ್ನೂ ಓದಿ: ಅಯೋಧ್ಯೆ ರಾಮ ಮಂದಿರದ ಥೀಮ್‌ನಲ್ಲಿ 5000 ಡೈಮಂಡ್‌ಗಳ ನೆಕ್ಲೇಸ್:‌ ವಿಡಿಯೋ ವೈರಲ್‌!

ಬಳ್ಳಾರಿ ಜಿಲ್ಲೆಯ ಹಾಗೂ ಹೊರ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೂಲ ಜಿಲ್ಲೆಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಮೂಲ ಜಿಲ್ಲೆಯಲ್ಲಿ ಅರ್ಹ ಅಭ್ಯರ್ಥಿಗಳು ದೊರೆಯದೇ ಇದ್ದಲ್ಲಿ ಹೊರ ಜಿಲ್ಲೆಯ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು.

ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದ್ದು, ಅವರು ಪಡೆದಿರುವ ಅಂಕ, ಸಂದರ್ಶನದಲ್ಲಿ ಪಡೆದ ಅಂಕ ಹಾಗೂ ಕಂಪ್ಯೂಟರ್ ಬಳಕೆ ಜ್ಞಾನ ಮತ್ತು ಕನ್ನಡ ಭಾಷೆ ಬಳಕೆ ಪ್ರಬುದ್ಧತೆ ಆಧಾರದ ಮೇಲೆ ಮೆರಿಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ಮಾಹೆಯಾನ ರೂ.15 ಸಾವಿರ ಸ್ಟೈಫೆಂಡ್ ನೀಡಲಾಗುವುದು.

ಇದನ್ನೂ ಓದಿ: Coronavirus: ಕೇರಳ ಬಳಿಕ ಈ ಎರಡೂ ರಾಜ್ಯಗಳಲ್ಲಿ ಆಂತಕ ಹೆಚ್ಚಿಸಿದ JN.1 ರೂಪಾಂತರ

ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಕರ್ನಾಟಕ ಕಾನೂನಾತ್ಮಕ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. 35 ವರ್ಷದೊಳಗಿರಬೇಕು. ಆಯ್ಕೆಯಾದ ಅಭ್ಯರ್ಥಿಗಳು ತರಬೇತಿ ಅವಧಿಯಲ್ಲಿ ಬೇರೆ ಉದ್ಯೋಗ ಮಾಡುವಂತಿಲ್ಲ. ಇಲಾಖೆಯಲ್ಲಿ ಈ ಹಿಂದೆ ತರಬೇತಿ ಪಡೆದವರು ಪುನಃ ಅರ್ಜಿ ಸಲ್ಲಿಸುವಂತಿಲ್ಲ. ನಿಗಧಿತ ಅವಧಿಯ ನಂತರ ಬಂದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

ಆಸಕ್ತ ಅಭ್ಯರ್ಥಿಗಳು ಅರ್ಜಿಯೊಂದಿಗೆ ತಮ್ಮ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಸ್ನಾತಕೋತ್ತರ ಪದವಿ ಪ್ರಮಾಣಪತ್ರ, ಜಾತಿ ಪ್ರಮಾಣಪತ್ರ, ಪಾಸ್‍ಪೆÇೀರ್ಟ್ ಅಳತೆಯ ಭಾವಚಿತ್ರ ಸೇರಿದಂತೆ ಕಂಪ್ಯೂಟರ್ ಜ್ಞಾನ ಹೊಂದಿರುವ ಕುರಿತ ಪೂರಕ ದಾಖಲೆಗಳನ್ನು ಲಗತ್ತಿಸಿ ದಿನಾಂಕ 26-12-2023 ರೊಳಗಾಗಿ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಬಳ್ಳಾರಿ ಈ ವಿಳಾಸಕ್ಕೆ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬಳ್ಳಾರಿ ಕಚೇರಿಗೆ ಸಂಪರ್ಕಿಸಲು ಜಿಲ್ಲಾ ವಾರ್ತಾಧಿಕಾರಿ ಜಡಿಯಪ್ಪ.ಜಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News