Good News : 504 KAS ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್!

Gazetted Probationary Post: 16 ಇಲಾಖೆಗಳು ಖಾಲಿ ಇರುವ KAS ಸೇರಿದಂತೆ 656 ಹುದ್ದೆಗಳ ನೇರ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಪೈಕಿ 504 ಹುದ್ದೆಗಳನ್ನು ಮಾತ್ರ ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಸಮ್ಮತಿ ನೀಡಿದೆ.

Written by - Puttaraj K Alur | Last Updated : Feb 18, 2024, 12:47 PM IST
  • 16 ಇಲಾಖೆಗಳು ಖಾಲಿಯಿರುವ 656 ಗೆಜೆಟೆಡ್‌ ಪ್ರೊಬೇಷನರಿ ಅಧಿಕಾರಿಗಳ ಹುದ್ದೆಗಳ ನೇಮಕಾತಿ
  • ಈ ಪೈಕಿ 504 ಹುದ್ದೆಗಳನ್ನು ಮಾತ್ರ ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಸಮ್ಮತಿ ನೀಡಿದೆ
  • ಶೀಘ್ರದಲ್ಲಿಯೇ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದ ಸಿಎಂ ಸಿದ್ದರಾಮಯ್ಯ
Good News : 504 KAS ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್! title=
504 KAS ಹುದ್ದೆಗಳ ನೇಮಕಾತಿ

ಬೆಂಗಳೂರು: ರಾಜ್ಯ ಸರ್ಕಾರದ 16 ಇಲಾಖೆಗಳು ಖಾಲಿ ಇರುವ KAS ಸೇರಿದಂತೆ ಗೆಜೆಟೆಡ್‌ ಪ್ರೊಬೇಷನರಿ ಅಧಿಕಾರಿಗಳ 656 ಹುದ್ದೆಗಳ ನೇರ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿವೆ. ಈ ಪೈಕಿ 504 ಹುದ್ದೆಗಳನ್ನು ಮಾತ್ರ ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಸಮ್ಮತಿ ನೀಡಿದೆ.

ಬೆಳಗಾವಿ ವಿಧಾನ ಮಂಡಲ ಅಧಿವೇಶನದಲ್ಲಿ ಈ ಸಂಬಂಧ ಪದವೀಧರ ಕ್ಷೇತ್ರದ ಸದಸ್ಯ ನಿರಾಣಿ ಹಣಮಂತ್‌ ರುದ್ರಪ್ಪನವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದು, ಈ ಪೈಕಿ 504 ಹುದ್ದೆಗಳ ಭರ್ತಿಗೆ ಒಪ್ಪಿಗೆ ಸಿಕ್ಕಿದೆ. ಹೀಗಾಗಿ ಶೀಘ್ರದಲ್ಲಿಯೇ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: Daily GK Quiz: ಭೂಮಿಯ ಮೇಲಿನ ಅತಿ ಉದ್ದದ ನದಿ ಯಾವುದು..?

16 ಇಲಾಖೆಗಳು ಖಾಲಿ ಇರುವ KAS ಸೇರಿದಂತೆ 656 ಹುದ್ದೆಗಳ ನೇರ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಪೈಕಿ 504 ಹುದ್ದೆಗಳನ್ನು ಮಾತ್ರ ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಸಮ್ಮತಿ ನೀಡಿದೆ. ಈ ಮೂಲಕ ಹಲವು ವರ್ಷಗಳಿಂದ ಸರ್ಕಾರಿ ಉದ್ಯೋಗದ ಕನಸು ಹೊತ್ತಿರುವ ಅಭ್ಯರ್ಥಿಗಳಿಗೆ ಸಹಿಸುದ್ದಿ ಸಿಕ್ಕಂತಾಗಿದೆ.

ಯಾವ ಇಲಾಖೆಗಳಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ?

ಕ್ರಮ ಸಂಖ್ಯೆ ಇಲಾಖೆ ಭರ್ತಿ ಮಾಡಿಕೊಳ್ಳಲು ಕೋರಲಾದ ಹುದ್ದೆಗಳ ಸಂಖ್ಯೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದ ಹುದ್ದೆಗಳ ಸಂಖ್ಯೆ
1 ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ 97 85
2 ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 59 55
3 ಕಂದಾಯ ಇಲಾಖೆ 129 76
4 ಪೊಲೀಸ್ ಇಲಾಖೆ 12 10
5 ಕಾರಾಗೃಹ ಇಲಾಖೆ 09 03
6 ವಾಣಿಜ್ಯ ತೆರಿಗೆಗಳ ಇಲಾಖೆ 143 140
7 ಖಜಾನೆ ಇಲಾಖೆ 69 48
8 ಅಬಕಾರಿ ಇಲಾಖೆ 13 10
9 ಸಹಕಾರ ಇಲಾಖೆ 26 21
10 ಸಮಾಜ ಕಲ್ಯಾಣ ಇಲಾಖೆ 54 27
11 ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 13 07
12 ಕಾರ್ಮಿಕ ಇಲಾಖೆ 11 04
13 ಕೌಶಲ್ಯಾಭಿವೃದ್ಧಿ ಇಲಾಖೆ 11 03
14 ಪ್ರವಾಸೋದ್ಯಮ ಇಲಾಖೆ 02 02
15 ಆಹಾರ ಮತ್ತು ನಾಗರಿಕ ಸರಬರಾಜು 09 09
16 ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ 04 04
  ಒಟ್ಟು 656

504

ಇದನ್ನೂ ಓದಿ: CM Siddaramaiah: ಜಾತ್ಯಾತೀತತೆ, ಸಮಾನತೆ, ಭ್ರಾತೃತ್ವ  ತತ್ವಗಳೇ ಸಂವಿಧಾನದ ತಳಹದಿ- ಮುಖ್ಯಮಂತ್ರಿ ಸಿದ್ದರಾಮಯ್ಯ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News