Govt Jobs: ರೈಲ್ವೇ ನೇಮಕಾತಿ ಮಂಡಳಿ ತಂತ್ರಜ್ಞರ ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆ ಆರಂಭ

Railway Recruitment Board (RRB): ರೈಲ್ವೇ ನೇಮಕಾತಿ ಮಂಡಳಿ (ಆರ್‌ಆರ್‌ಬಿ) ತಂತ್ರಜ್ಞರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾಸಿದೆ.  ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಇಲ್ಲಿದೆ ವಿವರ.   

Written by - Yashaswini V | Last Updated : Mar 11, 2024, 11:30 AM IST
  • ಭಾರತೀಯ ರೈಲ್ವೇಯಲ್ಲಿ ತಂತ್ರಜ್ಞರ ವಿವಿಧ ಹುದ್ದೆಗಳ ಒಟ್ಟು 9,144 ಹುದ್ದೆಗಳಿಗೆ ನೇಮಕಾತಿ
  • ಗ್ರೇಡ್ 1 ಸಿಗ್ನಲ್ ಮತ್ತು ಗ್ರೇಡ್ 3 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ಅಧಿಕಾರಿಗಳು ವಿವರಿಸಿರುವ ನಿರ್ದಿಷ್ಟ ಅರ್ಹತಾ ಮಾನದಂಡಗಳನ್ನು ಪೂರೈಸಬೇಕು.
Govt Jobs: ರೈಲ್ವೇ ನೇಮಕಾತಿ ಮಂಡಳಿ ತಂತ್ರಜ್ಞರ ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆ ಆರಂಭ  title=

Sarkari Naukri: ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್. ರೈಲ್ವೇ ನೇಮಕಾತಿ ಮಂಡಳಿ (ಆರ್‌ಆರ್‌ಬಿ) ತಂತ್ರಜ್ಞರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಈ ಬಾರಿಯ ಒಂದೇ ಹಂತದಲ್ಲಿ ಪರೀಕ್ಷೆ ನಡೆಯಲಿದೆ. ಮಾರ್ಚ್ 8, 2024ರಂದು ರೈಲ್ವೆ ನೇಮಕಾತಿ ಮಂಡಳಿಗಳ ಅಧಿಕೃತ ವೆಬ್‌ಸೈಟ್‌ಗಳಲ್ಲಿ  ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. 

ಅರ್ಜಿ ಪ್ರಕ್ರಿಯೆ: 
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗಾಗಿ ಮಾರ್ಚ್ 09ರಿಂದ ಆನ್‌ಲೈನ್ ಅರ್ಜಿ  ಪ್ರಕ್ರಿಯೆ ಆರಂಭವಾಗಲಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  08ನೇ ಏಪ್ರಿಲ್ 2024ರವರೆಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. 

2024 ರ ಆರ್‌ಆರ್‌ಬಿ ತಂತ್ರಜ್ಞರ ಅರ್ಜಿ ನಮೂನೆಯು ಪ್ರಾದೇಶಿಕ ರೈಲ್ವೆ ನೇಮಕಾತಿ ಮಂಡಳಿಗಳ (RRBs) ಅಧಿಕೃತ ವೆಬ್‌ಸೈಟ್‌ನಲ್ಲಿ ಮಾರ್ಚ್ 9, 2024 ರಿಂದ ಏಪ್ರಿಲ್ 8, 2024 ರವರೆಗೆ ಆನ್‌ಲೈನ್‌ನಲ್ಲಿ ಲಭ್ಯವಿದೆ. ಲಿಂಕ್ rrbapply.gov.in ಆಗಿದೆ.

ಇದನ್ನೂ ಓದಿ- ಒಂದಲ್ಲ ಎರಡಲ್ಲಾ ಏಕಕಾಲಕ್ಕೆ 5 ಸರ್ಕಾರಿ ಉದ್ಯೋಗದ ಪರೀಕ್ಷೆಗಳಲ್ಲಿ ಉತ್ತೀರ್ಣಳಾದ ಯುವತಿ!

9 ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ: 
ಈ ನೇಮಕಾತಿಯಡಿಯಲ್ಲಿ ಒಟ್ಟು 9144 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಈ ಪೈಕಿ 1092 ಹುದ್ದೆಗಳು ಟೆಕ್ನಿಷಿಯನ್ ಗ್ರೇಡ್-1 ಸಿಗ್ನಲ್ ಹಾಗೂ 1092 ಹುದ್ದೆಗಳು ಟೆಕ್ನಿಷಿಯನ್ ಗ್ರೇಡ್-1 ಸಿಗ್ನಲ್ ಪೋಸ್ಟ್‌ಗಳನ್ನು ಒಳಗೊಂಡಿದೆ.  

ವಿದ್ಯಾರ್ಹತೆ: 
ಗ್ರೇಡ್ I ಸಿಗ್ನಲ್ ತಂತ್ರಜ್ಞ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬ್ಯಾಚುಲರ್ ಆಫ್ ಸೈನ್ಸ್ ಅಥವಾ ಬಿ.ಎಸ್ಸಿ. ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಭೌತಶಾಸ್ತ್ರ/ಎಲೆಕ್ಟ್ರಾನಿಕ್ಸ್/ಕಂಪ್ಯೂಟರ್ ಸೈನ್ಸ್/ಮಾಹಿತಿ ತಂತ್ರಜ್ಞಾನ/ಉಪಕರಣಗಳಲ್ಲಿ ಪದವಿ ಹೊಂದಿರಬೇಕು. 

ಟೆಕ್ನಿಷಿಯನ್ ಗ್ರೇಡ್-III ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಭ್ಯರ್ಥಿಯು ಮೆಟ್ರಿಕ್ಯುಲೇಷನ್/ಎಸ್‌ಎಸ್‌ಎಲ್‌ಸಿ ಜೊತೆಗೆ ಐ‌ಟಿ‌ಐ ಮತ್ತು ವಿಜ್ಞಾನದಲ್ಲಿ ಬ್ಯಾಚುಲರ್ ಡಿಗ್ರಿ ಹೊಂದಿರಬೇಕು .

ಇದನ್ನೂ ಓದಿ- 10ನೇ ತರಗತಿ ಪಾಸ್ ಆದ ಬಳಿಕ ನೌಕಾಪಡೆಯಲ್ಲಿ ಉದ್ಯೋಗ ಪಡೆಯುವ ಸಂಪೂರ್ಣ ಪ್ರಕ್ರಿಯೆ

ವಯೋಮಿತಿ: 
ಟೆಕ್ನಿಷಿಯನ್ ಗ್ರೇಡ್-1 ಹುದ್ದೆಗಳಿಗೆ ವಯೋಮಿತಿ 18 ವರ್ಷಕ್ಕಿಂತ ಹೆಚ್ಚಿರಬೇಕು ಮತ್ತು 36 ವರ್ಷಗಳಿಗಿಂತ ಕಡಿಮೆ ಇರಬೇಕು. ಆದರೆ ಟೆಕ್ನಿಷಿಯನ್ ಗ್ರೇಡ್-III ಹುದ್ದೆಗೆ ಅರ್ಜಿಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ 18 ರಿಂದ 33 ವರ್ಷಗಳ ವಯೋಮಿತಿಯನ್ನು ನಿಗದಿಗೊಳಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಓ‌ಬಿ‌ಸಿ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯಸ್ಸಿನ ಸಡಿಲಿಕೆಯನ್ನು ನೀಡಲಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News