ನೀವು ಕ್ರೀಡಾಪಟುಗಳಾಗಿದ್ದಲ್ಲಿ ಇಲ್ಲಿದೆ ನಿಮಗೊಂದು ಸುವರ್ಣಾವಕಾಶ..! ಸ್ವಂತ ಜಿಮ್ ತೆರೆಯಲು ನಿಮಗೆ ಸಿಗಲಿದೆ ಸರ್ಕಾರದ ನೆರವು   

-2024-25ನೇ ಸಾಲಿನ ಪರಿಶಿಷ್ಟ ಜಾತಿ ಉಪ ಯೋಜನೆಯಡಿ ರಾಷ್ಟ್ರೀಯ ಮತ್ತು ಅಂತರ್ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸರ್ಕಾರದ ಸಹಾಯಧನಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Written by - Manjunath N | Last Updated : Sep 10, 2024, 06:52 PM IST
  • ಜಿಮ್ ಸ್ಥಾಪಿಸಲು ಅರ್ಜಿಯನ್ನು ಸಲ್ಲಿಸಲು ಕ್ರೀಡಾಪಟುಗಳು ಜಿಮ್ ಸ್ಥಾಪಿಸಲು ಸೂಕ್ತವಾದ ಸ್ಥಳವಕಾಶ ಹಾಗೂ ಕಟ್ಟಡದ ಸಂಪೂರ್ಣ ದಾಖಲೆಗಳನ್ನು ಸಲ್ಲಿಸುವುದು
  • ಸಂಪೂರ್ಣ ದಾಖಲೆಗಳು ಇಲ್ಲದಿದ್ದಲ್ಲಿ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ
  • ಜಿಮ್ ಸಲಕರಣೆಗಳನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಲು ಅಗತ್ಯ ಮಾನವ ಸಂಪನ್ಮೂಲ ಹೊಂದಿರತಕ್ಕದ್ದು
 ನೀವು ಕ್ರೀಡಾಪಟುಗಳಾಗಿದ್ದಲ್ಲಿ ಇಲ್ಲಿದೆ ನಿಮಗೊಂದು ಸುವರ್ಣಾವಕಾಶ..! ಸ್ವಂತ ಜಿಮ್ ತೆರೆಯಲು ನಿಮಗೆ ಸಿಗಲಿದೆ ಸರ್ಕಾರದ ನೆರವು    title=
Photo: Meta AI

ಬೆಂಗಳೂರು :-2024-25ನೇ ಸಾಲಿನ ಪರಿಶಿಷ್ಟ ಜಾತಿ ಉಪ ಯೋಜನೆಯಡಿ ರಾಷ್ಟ್ರೀಯ ಮತ್ತು ಅಂತರ್ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸರ್ಕಾರದ ಸಹಾಯಧನಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ರಾಷ್ಟ್ರೀಯ ಮತ್ತು ಅಂತರ್‍ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿಯ ಕರ್ನಾಟಕದ ಕ್ರೀಡಾಪಟುಗಳು ಅರ್ಜಿ ನಮೂನೆಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಮಡಿಕೇರಿಯಲ್ಲಿ ಪಡೆದು ಸೆಪ್ಟೆಂಬರ್ 20 ರೊಳಗೆ ಪ್ರಸ್ತಾವನೆಯನ್ನು ಈ ಕಚೇರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08272-228985 ರಲ್ಲಿ ಕಚೇರಿ ವೇಳೆಯಲ್ಲಿ ಸಂಪರ್ಕಿಸಲು ಕೋರಿದೆ.

2024-25 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಅಡಿಯಲ್ಲಿ ಅಂತರರಾಷ್ಟೀಯ/ ರಾಷ್ಟೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಮಾರ್ಗಸೂಚಿಗಳು ಇಂತಿದೆ.

ಇದನ್ನೂ ಓದಿ- ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ, ಸೆ.15 ಕೊನೆಯ ದಿನ 

ಕ್ರೀಡಾಪಟುಗಳು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ಜಾತಿಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಲಗತ್ತಿಸಿರಬೇಕು (ಆರ್.ಡಿ.ನಂಬರ್ ಇರುವ ಜಾತಿ ಪ್ರಮಾಣ ಪತ್ರ). ಅರ್ಜಿದಾರರು ನಿರುದ್ಯೋಗಿಗಳಾಗಿದ್ದು, ಸ್ವಯಂ ಉದ್ಯೋಗ ಹೊಂದಲು ಘಟಕ ವೆಚ್ಚದಲ್ಲಿ ಶೇಕಡಾ 75 ರಷ್ಟು ರೂ.15 ಲಕ್ಷಗಳನ್ನು ಇಲಾಖೆ ವತಿಯಿಂದ ಭರಿಸಲಾಗುವುದು ಹಾಗೂ ಶೇಕಡಾ 25 ರಷ್ಟು ವೆಚ್ಚವನ್ನು ಸ್ವಯಂ ಭರಿಸುವ ಷರತ್ತಿಗೆ ಬದ್ದರಾಗಿರಬೇಕು. ಕ್ರೀಡಾಪಟುಗಳು ಅಂತರರಾಷ್ಟೀಯ/ ರಾಷ್ಟೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾಗಿರಬೇಕು. ಜಿಮ್ ಸಲಕರಣೆಗಳನ್ನು ಕರ್ನಾಟಕದ ಕ್ರೀಡಾಪಟುಗಳಿಗೆ ಮಾತ್ರ ನೀಡಲಾಗುವುದು.

ಕ್ರೀಡಾಪಟುಗಳು ಕರ್ನಾಟಕದ ಮೂಲದವರಾಗಿದ್ದು, ಬೇರೆ ರಾಜ್ಯ ಅಥವಾ ಕ್ರೀಡಾ ತಂಡವನ್ನು ಪ್ರತಿನಿಧಿಸುವ ಕ್ರೀಡಾಪಟುಗಳು ಈ ಪುರಸ್ಕಾರಕ್ಕೆ ಅರ್ಹರಾಗಿರುವುದಿಲ್ಲ. ಕ್ರೀಡಾಪಟುಗಳು ಸ್ವಯಂ ದೃಢೀಕೃತ ಪ್ರಮಾಣ ಪತ್ರಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ ಸಂಬಂಧಪಟ್ಟ ಜಿಲ್ಲೆಯ ಉಪ/ಸಹಾಯಕ ನಿರ್ದೇಶಕರ ಮೂಲಕ ಸಲ್ಲಿಸತಕ್ಕದ್ದು. ಕ್ರೀಡಾಪಟುವಿನ ಹೆಸರು ಹಾಗೂ ಭಾವಚಿತ್ರವುಳ್ಳ ಪಡಿತರ ಚೀಟಿ, ಮತದಾರರ ಚೀಟಿ ಅಥವಾ ಸರ್ಕಾರದಿಂದ ವಿತರಿಸಿರುವ ಗುರುತಿನ ಚೀಟಿಯ ನಕಲನ್ನು ಲಗತ್ತಿಸುವುದು. ಅಂತರರಾಷ್ಟೀಯ ಸಂಸ್ಥೆ ಮತ್ತು ಇತರೆ ಮಾನ್ಯತೆ ಪಡೆದ ಕ್ರೀಡಾ ಸಂಸ್ಥೆಗಳು ನಡೆಸುವ ಅಧಿಕೃತ ಚಾಂಪಿಯನ್ ಶಿಪ್‍ಗಳಲ್ಲಿ ಪದಕ ವಿಜೇತರಾದವರನ್ನು ಪರಿಗಣಿಸಲಾಗುವುದು(ಮಾನ್ಯತೆ ಪಡೆಯದೇ ಇರುವ ಫೇಡರೇಷನ್ ನಡೆಸುವ ಕ್ರೀಡೆಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಅರ್ಹರಿರುವುದಿಲ್ಲ). ಹಿರಿಯರ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳು ಜಿಮ್ ಸ್ಥಾಪನೆಗೆ ಅರ್ಹರಿರುವುದಿಲ್ಲ. ಬ್ಯಾಂಕ್ ಖಾತೆ ಕಡ್ಡಾಯವಾಗಿ ಕ್ರೀಡಾಪಟುವಿನ ಹೆಸರಿನಲ್ಲಿರಬೇಕು. ಬ್ಯಾಂಕ್ ಪಾಸ್ ಪುಸ್ತಕದ ಮುಖಪುಟದ ಜೆರಾಕ್ಸ್ ಪ್ರತಿ ಲಗತ್ತಿಸಬೇಕು.(ಹೆಸರು, ಖಾತೆ ಸಂಖ್ಯೆ, ಐಎಫ್‍ಎಸ್‍ಸಿ ಕೋಡ್ ಇರುವ ಪುಟ).

ಇದನ್ನೂ ಓದಿ- ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ, ಸೆ.15 ಕೊನೆಯ ದಿನ 

ಜಿಮ್ ಸ್ಥಾಪಿಸಲು ಅರ್ಜಿಯನ್ನು ಸಲ್ಲಿಸಲು ಕ್ರೀಡಾಪಟುಗಳು ಜಿಮ್ ಸ್ಥಾಪಿಸಲು ಸೂಕ್ತವಾದ ಸ್ಥಳವಕಾಶ ಹಾಗೂ ಕಟ್ಟಡದ ಸಂಪೂರ್ಣ ದಾಖಲೆಗಳನ್ನು ಸಲ್ಲಿಸುವುದು. ಸಂಪೂರ್ಣ ದಾಖಲೆಗಳು ಇಲ್ಲದಿದ್ದಲ್ಲಿ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಜಿಮ್ ಸಲಕರಣೆಗಳನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಲು ಅಗತ್ಯ ಮಾನವ ಸಂಪನ್ಮೂಲ ಹೊಂದಿರತಕ್ಕದ್ದು. ಜಿಮ್ ಶಾಲೆ ಸಲಕರಣೆಗಳನ್ನು ಬೇರೆ ಯಾರಿಗೂ ಮಾರುವುದಾಗಲೀ, ಪರಭಾರೆ ಮಡುವುದಾಗಲೀ ಮಾಡತಕ್ಕದ್ದಲ್ಲ. ಅರ್ಜಿದಾರರು ಸ್ಥಳೀಯವಾಗಿ ಯಾವುದೇ ಅಪರಾಧ ಹಿನ್ನೆಲೆ ಉಳ್ಳವರಾಗಿರದ ಬಗ್ಗೆ ಸ್ವಯಂ ದೃಢೀಕರಿಸಿ ಸಲ್ಲಿಸುವುದು. ಕ್ರೀಡಾಪಟುಗಳ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕಕ್ಕೆ 40 ವರ್ಷ ವಯಸ್ಸನ್ನು ಮೀರಿರಬಾರದು. ಇಲಾಖೆಯ ಅಧಿಕಾರಿಗಳು ಪರಿಶೀಲನೆಗೆ ಬಂದ ಸಂದರ್ಭದಲ್ಲಿ ಸಂಪೂರ್ಣ ವರದಿಯನ್ನು ನೀಡಿ ಸಹಕರಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಅವರು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

Trending News