IFFCO Recruitment 2024: ತಿಂಗಳಿಗೆ 2 ಲಕ್ಷ ಸಂಬಳ ನೀಡುವ ಈ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿರಿ

IFFCO Recruitment 2024: ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋಆಪರೇಟಿವ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಡಿ ಪೂರ್ಣಗೊಳಿಸಿರಬೇಕು.

Written by - Puttaraj K Alur | Last Updated : Mar 30, 2024, 09:15 PM IST
  • ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋಆಪರೇಟಿವ್ ಲಿಮಿಟೆಡ್‌ನಲ್ಲಿ ನೇಮಕಾತಿ
  • ಮೆಡಿಕಲ್​ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
  • ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆ ದಿನವಾಗಿದ್ದು, ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
IFFCO Recruitment 2024: ತಿಂಗಳಿಗೆ 2 ಲಕ್ಷ ಸಂಬಳ ನೀಡುವ ಈ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿರಿ title=
IFFCO Recruitment 2024

IFFCO Recruitment 2024: ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋಆಪರೇಟಿವ್ ಲಿಮಿಟೆಡ್‌ನಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೆಡಿಕಲ್​ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ಮಾರ್ಚ್​ 30 ಅಂದರೆ ಇಂದಿನಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನವಾಗಿರುತ್ತದೆ. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರಿ ಉದ್ಯೋಗ ಹುಡುಕುತ್ತಿರುವವರು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ಹುದ್ದೆಯ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 8 ಲಕ್ಷ 23 ಸಾವಿರ ಹಣ ಸೀಜ್‌

ಹುದ್ದೆಯ ವಿವರ: ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋಆಪರೇಟಿವ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ಮೆಡಿಕಲ್​ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 

ವಿದ್ಯಾರ್ಹತೆ: ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋಆಪರೇಟಿವ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಡಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ: ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹2 ಲಕ್ಷ ವೇತನ ನೀಡಲಾಗುತ್ತದೆ.

ಉದ್ಯೋಗದ ಸ್ಥಳ: ಕರ್ನಾಟಕ ಸೇರಿದಂತೆ ಅಖಿಲ ಭಾರತ

ಆಯ್ಕೆ ಪ್ರಕ್ರಿಯೆ: ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 

ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಕೆ ಆರಂಭ ದಿನಾಂಕ 30/03/2024 ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನ ಏಪ್ರಿಲ್ 15

ಇದನ್ನೂ ಓದಿ: ಎಲ್ಲೆಡೆ ರಂಗೇರಿದ ಲೋಕಸಭಾ ಚುನಾವಣೆ ಕಾವು

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News